ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಮಾಹಾಮಾರಿ ಕರೋನಾ ವೈರಸ್‌ ಪರಿಣಾಮ ಬಹುತೇಕ ಆಟೋ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗಿದ್ದು, ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸುತ್ತಿವೆ. ಆದರೂ ಕೂಡಾ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ಪ್ರಮಾಣವು ದಾಖಲಾಗಿರುವ ಕಂಡುಬಂದಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ

ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಮೇ ಅವಧಿಯಲ್ಲಿ ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ವಾಹನಗಳ ಮಾರಾಟದಲ್ಲಿ ಶೇ.70ರಿಂದ ಶೇ.97ರಷ್ಟು ಕುಸಿತ ಕಂಡುಬಂದಿದೆ. ವೈರಸ್ ಭೀತಿ ಹಿನ್ನಲೆಯಲ್ಲಿ ಹೊಸ ವಾಹನ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದ್ದು, ಮುಂಬರುವ ದಿನಗಳಲ್ಲಿ ಮಾರಾಟ ಮಾರಾಟದಲ್ಲಿ ಚೇತರಿಕೆ ಕಾಣಬಹುದು ಎನ್ನಲಾಗಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

2019ರ ಮೇ ಅವಧಿಯಲ್ಲಿ 2.60 ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದ ವಿವಿಧ ಕಾರು ಕಂಪನಿಗಳು 2020ರ ಮೇ ಅವಧಿಯಲ್ಲಿ ಕೇವಲ 36 ಸಾವಿರ ಕಾರುಗಳನ್ನು ಮಾರಾಟ ಮಾಡಿದ್ದು, ಶೇ.85ರಷ್ಟು ಕಾರು ಮಾರಾಟವು ಇಳಿಕೆಯಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದ್ದು, ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುತ್ತಿವೆ.

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಲಾಕ್‌ಡೌನ್ ಸಡಿಲಿಕೆಯ ನಂತರ ಕರ್ನಾಟಕದಲ್ಲಿ ಒಟ್ಟು 5,887 ಕಾರುಗಳು ಮಾರಾಟದೊಂದಿಗೆ ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಕೇರಳ(3,282), ಮೂರನೇ ಸ್ಥಾನದಲ್ಲಿ ಉತ್ತರಪ್ರದೇಶ(2,622), ನಾಲ್ಕನೇ ಸ್ಥಾನದಲ್ಲಿ ತಮಿಳುನಾಡು( 2,227) ಮತ್ತು ಐದನೇ ಸ್ಥಾನದಲ್ಲಿ ರಾಜಸ್ತಾನ(2,062) ಇದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ವೈರಸ್ ಪರಿಣಾಮದಿಂದ ತತ್ತರಿಸಿರುವ ಮುಂಬೈ ಮತ್ತು ದೆಹಲಿಯಲ್ಲಿ ಕಾರು ಮಾರಾಟವು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದು, ವಾಣಿಜ್ಯ ವ್ಯಾಪಾರ ಕುಂಠಿತಗೊಂಡಿರುವುದರಿಂದ ಕಾರು ಖರೀದಿ ಪ್ರಕ್ರಿಯೆಯು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಇನ್ನು ಹೊಸ ವಾಹನ ಖರೀದಿದಾರರಿಗೆ ಇಎಂಐ ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದರೂ ವಾಹನ ಮಾರಾಟವು ಮಂದಗತಿಯಲ್ಲಿ ಸಾಗಿದ್ದು, ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಹೀಗಾಗಿ ಬಹುತೇಕ ಕಾರು ಕಂಪನಿಗಳು ವಿವಿಧ ಆಫರ್‌ಗಳ ಮೂಲಕ ಕಾರು ಮಾರಾಟವನ್ನು ಸರಿದಾರಿಗೆ ತರುವ ಯತ್ನದಲ್ಲಿದ್ದು, ವಾಣಿಜ್ಯ ವ್ಯಾಪಾರ ಸುಧಾರಣೆಗೊಂಡ ನಂತರವಷ್ಟೇ ಹೊಸ ವಾಹನ ಖರೀದಿ ಪ್ರಕ್ರಿಯೆಯೂ ಜೋರಾಗುವ ನೀರಿಕ್ಷೆಯಿದೆ.

More from DriveSpark

Article Published On: Saturday, June 13, 2020, 18:58 [IST]
English summary
Karnataka Registers The Highest Four-Wheeler Sales. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+