ಸಾರಿಗೆ ಇಲಾಖೆಯ ಅಧಿಕಾರಿಗಳಿಗಾಗಿ 65 ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿ..!
ದೇಶಾದ್ಯಂತ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಕ್ರಿಯೆ ಹೆಚ್ಚುತ್ತಿದ್ದು, ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳ ಅಧಿಕೃತ ವಾಹನ ಮಾದರಿಯನ್ನಾಗಿ ಎಲೆಕ್ಟ್ರಿಕ್ ಆವೃತ್ತಿಗಳನ್ನು ಆಯ್ಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಕೇರಳದಲ್ಲಿ ಸಾರಿಗೆ ಸಂಸ್ಥೆಯು ಕೂಡಾ ತನ್ನ ಇಲಾಖೆಯಲ್ಲಿನ ವಿವಿಧ ಹಿರಿಯ ಅಧಿಕಾರಿಗಳ ಅಧಿಕೃತ ವಾಹನವನ್ನಾಗಿ ಟಾಟಾ ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಆಯ್ಕೆ ಮಾಡಲಾಗಿದ್ದು, ಟಾಟಾ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದ್ದು, ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನ ಮಾದರಿಗಳ ಖರೀದಿಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಹೊಸ ಬೆಳವಣಿಗೆ ಕಾರಣವಾಗಿದೆ.

ಕೇರಳ ಸಾರಿಗೆ ಇಲಾಖೆಯು ಒಟ್ಟು 65 ನೆಕ್ಸಾನ್ ಇವಿ ಕಾರುಗಳನ್ನು ಖರೀದಿಸಿದ್ದು, ಹೊಸ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್ ಟೆಸ್ಟಿಂಗ್‌ನಲ್ಲಿ ಸಾಬೀತಾಗಿದೆ.

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.


Click it and Unblock the Notifications