ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಸರ್ಕಾರವು ನಿರತವಾಗಿದೆ. ಎಲೆಕ್ಟ್ರಿಕ್ ವಾಹನಗಳಿಂದಾಗಿ ವಾಯುಮಾಲಿನ್ಯ ಹಾಗೂ ಕಚ್ಚಾ ತೈಲ ಆಮದು ಸಮಸ್ಯೆಗಳಿಗೆ ಪರಿಹಾರ ದೊರಯಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಇದರ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವಲ್ಲಿ ಸಕ್ರಿಯವಾಗಿವೆ. ಈ ಪೈಕಿ ಕೇರಳವೂ ಒಂದು. ಕೇರಳ ಸರ್ಕಾರದ ವಿದ್ಯುತ್ ವಾಹನ ನೀತಿಯನ್ನು 2018ರಲ್ಲಿ ಘೋಷಿಸಲಾಗಿದೆ. ಇದರನ್ವಯ 2022ರ ವೇಳೆಗೆ 10 ಲಕ್ಷ ಎಲೆಕ್ಟ್ರಿಕ್ ವಾಹನಗಳು ರಸ್ತೆಗಿಳಿಯಲಿವೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಈ ವರ್ಷದ ಅಂತ್ಯದ ವೇಳೆಗೆ ಕೇರಳ ಸರ್ಕಾರವು 2 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, 50 ಸಾವಿರ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು, 1,000 ಎಲೆಕ್ಟ್ರಿಕ್ ಸರಕು ವಾಹನಗಳು, 3 ಸಾವಿರ ಎಲೆಕ್ಟ್ರಿಕ್ ಬಸ್ಸುಗಳು ಹಾಗೂ 100 ಎಲೆಕ್ಟ್ರಿಕ್ ಪ್ಯಾಸೆಂಜರ್ ಬೋಟ್‌ಗಳನ್ನು ರಸ್ತೆಗಿಳಿಸುವ ಗುರಿಯನ್ನು ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಮುಂದಿನ ಹಣಕಾಸು ವರ್ಷದಿಂದ ಸರ್ಕಾರಿ ಇಲಾಖೆಗಳು ವಾಹನಗಳನ್ನು ಖರೀದಿಸುವ ಹಾಗೂ ಬಾಡಿಗೆಗೆ ನೀಡುವ ಯೋಜನೆಯಲ್ಲಿ ಪ್ರಮುಖವಾದ ಬದಲಾವಣೆಯನ್ನು ಮಾಡಿದೆ. ಈಗ ಸರ್ಕಾರಿ ಇಲಾಖೆಗಳ ಮುಖ್ಯಸ್ಥರು ಬಳಸುತ್ತಿರುವ ಎಲ್ಲಾ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಇವುಗಳ ಬದಲಿಗೆ ಎಲೆಕ್ಟ್ರಿಕ್ ಕಾರುಗಳನ್ನು ಬಳಸಲು ಯೋಜಿಸಲಾಗಿದೆ. ಈ ಸಂಬಂಧ ಮಾರ್ಚ್ 7ರಂದು ಹಣಕಾಸು ಇಲಾಖೆಯ ಪರವಾಗಿ ಆದೇಶ ಹೊರಡಿಸಲಾಗಿದೆ. ಇದರನ್ವಯ ಇಇಎಸ್‌ಎಲ್ (ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್) ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಬಾಡಿಗೆಗೆ ನೀಡುವಂತೆ ಆದೇಶಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಇಇಎಸ್ಎಲ್ ಕೇಂದ್ರ ಸರ್ಕಾರದ ಸಂಸ್ಥೆಯಾಗಿದೆ. ಏಪ್ರಿಲ್ 1ರಿಂದ ರಾಜ್ಯ ಇಲಾಖೆಗಳ ಮುಖ್ಯಸ್ಥರಿಗೆ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಆದೇಶಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಇನ್ನು ಮುಂದೆ ವಾಹನಗಳನ್ನು ಖರೀದಿಸುವ ಬದಲು ಗುತ್ತಿಗೆಗೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇದರಿಂದಾಗಿ ತ್ಯಾಜ್ಯವು ಕಡಿಮೆಯಾಗಲಿದೆ ಎಂದು ಸರ್ಕಾರವು ತನ್ನ ಬಜೆಟ್‌ನಲ್ಲಿ ಪ್ರಕಟಿಸಿದೆ. ಇಇಎಸ್‌ಎಲ್‌ನಿಂದ ಎಲೆಕ್ಟ್ರಿಕ್ ಕಾರುಗಳನ್ನು ಬಾಡಿಗೆಗೆ ಪಡೆದರೆ, ಸರ್ಕಾರವು ಪ್ರತಿ 1,000 ಕಾರುಗಳಿಗೆ ರೂ.7.50 ಕೋಟಿ ಉಳಿತಾಯ ಮಾಡಲಿದೆ. ಜೊತೆಗೆ ಈ ವಾಹನಗಳು ಪರಿಸರ ಸ್ನೇಹಿಯಾಗಿರಲಿವೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ದೆಹಲಿ ಸೇರಿದಂತೆ ಭಾರತದ ಅನೇಕ ನಗರಗಳು ವಾಯುಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು. ಇದರ ಜೊತೆಗೆ ಕಚ್ಚಾ ತೈಲ ಆಮದಿಗಾಗಿ ಭಾರತವು ಭಾರಿ ಖರ್ಚು ಮಾಡುತ್ತಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಬಳಸುವಂತೆ ಸರ್ಕಾರಿ ಇಲಾಖೆಗಳಿಗೆ ಸೂಚನೆ

ಇದಕ್ಕಾಗಿಯೇ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ರಾಜ್ಯ ಸರ್ಕಾರಗಳೂ ಸಹ ಇದಕ್ಕೆ ಪ್ರೋತ್ಸಾಹ ನೀಡುತ್ತಿವೆ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Kerala State Govt departments to hire only electric vehicles. Read in Kannada.
Story first published: Saturday, March 21, 2020, 15:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X