ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಕಿಯಾ ಬಹುನೀರಿಕ್ಷಿತ ಕಾರ್ನಿವಾಲ್ ಎಂಪಿವಿ ಕಾರು ಆವೃತ್ತಿಯು ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಖರೀದಿಗೆ ಸಾವಿರಾರು ಗ್ರಾಹಕರು ಈಗಾಗಲೇ ತುದಿಗಾಲ ಮೇಲೆ ನಿಂತಿದ್ದಾರೆ. ಮೊದಲ ಹಂತದಲ್ಲೇ ಹೊಸ ಕಾರು ಪಡೆದುಕೊಳ್ಳಲು ಮುಂದಾಗಿರುವ ಹಲವು ಗ್ರಾಹಕರು ಅಧಿಕೃತ ಬುಕ್ಕಿಂಗ್ ಆರಂಭವಾಗುವುದಕ್ಕೂ ಆಯ್ದ ಕಿಯಾ ಡೀಲರ್ಸ್‌ಗಳಲ್ಲಿ ಮುನ್ನವೇ ಮುಂಗಡ ಪಾವತಿಸುತ್ತಿದ್ದಾರೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಮಾಹಿತಿಗಳ ಪ್ರಕಾರ, ಇದೇ ತಿಂಗಳು 15ರ ನಂತರ ಕಿಯಾ ಮೋಟಾರ್ಸ್ ಸಂಸ್ಥೆಯು ಕಾರ್ನಿವಾಲ್ ಖರೀದಿಗೆ ಅಧಿಕೃತ ಬುಕ್ಕಿಂಗ್ ಆರಂಭಿಸಲಿದ್ದು, ಅಧಿಕೃತ ಬುಕ್ಕಿಂಗ್ ಆರಂಭವಾಗುವುದಕ್ಕೂ ಮುನ್ನವೇ ಸುಮಾರು ಮೂರು ಸಾವಿರ ಗ್ರಾಹಕರು ಈಗಾಗಲೇ ರೂ.1 ಲಕ್ಷ ಮುಂಗಡದೊಂದಿಗೆ ಕಾರ್ನಿವಾಲ್ ಖರೀದಿಗೆ ಹೆಸರು ನೋಂದಾಯಿಸಿದ್ದಾರೆ. ಇನ್ನು ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಕಾರ್ನಿವಾಲ್ ಕಾರು ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಭಾರತದಲ್ಲೂ ಭಾರೀ ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಕಾರ್ನಿವಾಲ್ ಕಾರು ವಿದೇಶಿ ಮಾರುಕಟ್ಟೆಗಳಲ್ಲಿ 11 ಸೀಟರ್ ಮತ್ತು 9 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳಲ್ಲಿ ಮಾರಾಟವಾಗುತ್ತಿದೆ. ಇದು ದೇಶಿಯ ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದ್ದು, 6 ಸೀಟರ್, 7 ಸೀಟರ್ ಮತ್ತು 8 ಸೀಟರ್ ಆವೃತ್ತಿಯೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

6 ಸೀಟರ್ ಮಾದರಿಯು ಪ್ರತ್ಯೇಕವಾಗಿ 2+2+2 ಆಸನ ವ್ಯವಸ್ಥೆಯನ್ನು ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಮತ್ತು 8 ಸೀಟರ್ ಮಾದರಿಯು 2+3+3 ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ವಿವಿಧ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಜೊತೆಗೆ ಹೊಸ ಕಾರಿನಲ್ಲಿ ಕೆಲವು ಫೀಚರ್ಸ್‌ಗಳನ್ನು ಮಾಡಿಫೈ ಕೂಡಾ ಮಾಡಿಕೊಳ್ಳಬಹುದಾಗಿದ್ದು, ಡ್ಯುಯಲ್ ಸನ್‌ರೂಫ್ ಮತ್ತು ರೂಫ್ ಬಾಕ್ಸ್ ಸೌಲಭ್ಯವನ್ನು ಹೆಚ್ಚುವರಿ ಶುಲ್ಕದೊಂದಿಗೆ ಖರೀದಿ ಮಾಡಬೇಕಾಗುತ್ತದೆ. ಜೊತೆಗ ಎಂಪಿವಿ ಕಾರುಗಳ ಮಾರಾಟ ವಿಭಾಗದಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 18 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯು ರೂ.25 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಕಾರ್ನಿವಾಲ್ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇದ್ದು ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಎಂಜಿನ್ ಸಾಮರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಹಾಗೆಯೇ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯ ಹೊಂದಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸಹ ಈ ಕಾರಿನಲ್ಲಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಫೆಬ್ರುವರಿ 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ಬಳಿಕ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಇನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಪೆನುಗೊಂಡ ಬಳಿಯಿರುವ ಕಿಯಾ ಮೋಟಾರ್ಸ್ ಮೊದಲ ಕಾರು ಉತ್ಪಾದನಾ ಘಟಕವು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಬರೋಬ್ಬರಿ 211 ಎಕರೆ ಪ್ರದೇಶದಲ್ಲಿ ಬೃಹತ್ ಕಾರು ಉತ್ಪಾದನಾ ಘಟಕವು ತಲೆಎತ್ತಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ವಾರ್ಷಿಕವಾಗಿ 3 ಲಕ್ಷ ಕಾರುಗಳ ನಿರ್ಮಾಣ ಮಾಡುವಷ್ಟು ಸಾಮರ್ಥ್ಯ ಹೊಂದಿರುವ ಈ ಹೊಸ ಘಟಕದಲ್ಲಿ ಪ್ರತಿ 1.20 ನಿಮಿಷಕ್ಕೆ ಒಂದು ಹೊಸ ಕಾರು ಅಭಿವೃದ್ದಿಪಡಿಸಲಾಗುತ್ತದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಕಿಯಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ನಮೂನೆಯ ಕೈಗೆಟುಕುವ ಬೆಲೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದ್ದು, ವಿವಿಧ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟವನ್ನು ಆರಂಭಿದ ಕೇವಲ ಆರು ತಿಂಗಳ ಅವಧಿಯಲ್ಲಿ ಕಿಯಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವುದಲ್ಲದೇ ಅಧಿಕೃತವಾಗಿ ದೇಶದ ಐದನೇ ಅತಿದೊಡ್ಡ ಕಾರು ಮಾರಾಟ ಸಂಸ್ಥೆಯಾಗಿ ಹೊರಹೊಮ್ಮಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ, ಹ್ಯುಂಡೈ ಮೋಟಾರ್ಸ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಮತ್ತು ಟಾಟಾ ಮೋಟಾರ್ಸ್ ಸಂಸ್ಥೆಗಳು ಅನುಕ್ರಮವಾಗಿ ಒಂದು, ಎರಡು, ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದು, ಇದೀಗ ಹೊಸದಾಗಿ ಕಿಯಾ ಮೋಟಾರ್ಸ್ ಸಂಸ್ಥೆಯು ಐದನೇ ಅತಿದೊಡ್ಡ ಕಾರು ಮಾರಾಟ ಸಂಸ್ಥೆಯಾಗಿ ಸ್ಥಾನ ಪಡೆದಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಖರೀದಿಗೆ ಬುಕ್ಕಿಂಗ್ ಶುರು

ಕಿಯಾ ಮೋಟಾರ್ಸ್ ಅಬ್ಬರದ ಮುಂದೆ ಟೊಯೊಟಾ ಮತ್ತು ಹೋಂಡಾ ಸಂಸ್ಥೆಗಳು ಸಹ ನೆಲಕಚ್ಚಿದ್ದು, ಶೀಘ್ರದಲ್ಲೇ ಮೂರನೇ ಸ್ಥಾನದತ್ತ ಮುನ್ನುಗ್ಗುವ ತವಕದಲ್ಲಿದೆ. ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿಯಾದ ನಂತರ ಮಾರುತಿ ಸುಜುಕಿ, ಹ್ಯುಂಡೈ ಮತ್ತು ಟೊಯೊಟಾಗೆ ಪೈಪೋಟಿಯಾಗಿ ಎರಡು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುತ್ತಿರುವುದು ಭಾರೀ ಸಂಚಲನಕ್ಕೆ ಕಾರಣವಾಗಲಿದೆ.

More from DriveSpark

Article Published On: Thursday, January 2, 2020, 18:28 [IST]
English summary
KIA Motors dealers have started accepting unofficial bookings for the Carnival MPV in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+