ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಪ್ರೀಮಿಯಂ ಎಂಪಿವಿ ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಕಿಯಾ ಮೋಟಾರ್ಸ್ ಕಂಪನಿಯು ಕಾರ್ನಿವಾಲ್ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಮುಂಬರುವ ದಸರಾ ಮತ್ತು ದೀಪಾವಳಿ ಸಂಭ್ರಮದ ಹೊತ್ತಿಗೆ ಮಾರಾಟ ಹೆಚ್ಚಿಸಲು ಆಕರ್ಷಕ ಆಫರ್‌ಗಳನ್ನು ನೀಡುತ್ತಿದೆ.

ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.2 ಲಕ್ಷದ ತನಕ ಆಫರ್ ನೀಡುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್ ಬೋನಸ್, ಕ್ಯಾಶ್‌ಬ್ಯಾಕ್ ಮತ್ತು ಹೆಚ್ಚುವರಿ ವಾರಂಟಿ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಸೀಮಿತ ಅವಧಿಯಲ್ಲಿ ಕಾರು ಖರೀದಿ ಮಾಡುವ ಗ್ರಾಹಕರಿಗೆ ಮಾತ್ರ ಲಭ್ಯವಿವೆ. ಜೊತೆಗೆ ಹೊಸ ಆಫರ್‌ಗಳು ವೆರಿಯೆಂಟ್ ಅನುಗುಣವಾಗಿ ಆಫರ್ ಲಭ್ಯವಿದ್ದು, ಹೈ ಎಂಡ್ ಮಾದರಿಯ ಖರೀದಿ ಮೇಲೆ ಹೆಚ್ಚಿನ ಆಫರ್ ಲಭ್ಯವಿದೆ.

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಹೊಸ ಆಫರ್‌ಗಳು ರೂ.80 ಸಾವಿರದಷ್ಟು, ರೂ. 46 ಸಾವಿರದಷ್ಟು ಕಾರ್ಪೊರೇಟ್ ಬೋಸನ್, ರೂ.48 ಸಾವಿರ ಮೌಲ್ಯದ ಮೂರು ವರ್ಷ ಅಥವಾ ಅನ್ ಲಿಮಿಟೆಡ್ ಕಿ.ಮೀ ವಾರಂಟಿ ಮತ್ತು ರೂ.25 ಸಾವಿರದಷ್ಟು ಕ್ಯಾಶ್ ಬ್ಯಾಕ್ ಆಫರ್ ಲಭ್ಯವಿದೆ.

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಕರೋನಾ ವೈರಸ್‌ನಿಂದಾಗಿ ಸ್ವಂತ ಬಳಕೆಯ ವಾಹನ ಮಾರಾಟವು ಹೆಚ್ಚುತ್ತಿರುವುದೇ ಕಾರು ಕಂಪನಿಗಳ ಹೊಸ ಹೊಸ ಆಫರ್‌ಗಳಿಗೆ ಕಾರಣವಾಗಿದ್ದು, ಗ್ರಾಹಕರನ್ನು ಸೆಳೆಯಲು ಆಕರ್ಷಕ ಆಫರ್‌ಗಳನ್ನು ನೀಡುತ್ತಿವೆ.

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಇನ್ನು ಕಿಯಾ ಮೋಟಾರ್ಸ್ ಕಂಪನಿಯು ಸೆಲ್ಟೊಸ್ ನಂತರ ಬಿಡುಗಡೆ ಮಾಡಲಾದ ಕಾರ್ನಿವಾಲ್ ಕಾರಿನ ಮಾರಾಟದಲ್ಲಿ ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಿಕೊಂಡಿದ್ದು, ಹೊಸ ಕಾರು ಐಷಾರಾಮಿ ಸೌಲಭ್ಯಗಳೊಂದಿಗೆ ದುಬಾರಿಯಾಗಿದ್ದರೂ ಸಹ ಇನೋವಾ ಕ್ರಿಸ್ಟಾ ಕಾರಿಗೂ ಪೈಪೋಟಿ ನೀಡುತ್ತಿದೆ.

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಅತ್ಯುತ್ತಮ ಫೀಚರ್ಸ್ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಎಂಪಿವಿ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.24.95 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಕಾರ್ನಿವಾಲ್ ಕಾರಿನಲ್ಲಿ ಸದ್ಯಕ್ಕೆ ಕೇವಲ ಒಂದೇ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, 2.2-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ ಹೊಂದಿದೆ. ಪ್ರತಿ ವೆರಿಯೆಂಟ್‌ನಲ್ಲೂ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ನೀಡಲಾಗಿದ್ದು, 200-ಬಿಎಚ್‌ಪಿ, 440-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಈ ಮೂಲಕ ಮೈಲೇಜ್‌ನಲ್ಲೂ ಗಮನಸೆಳೆಯುವ ಕಾರ್ನಿವಾಲ್ ಕಾರು 2,200 ಕೆಜಿ ತೂಕ ಹೊಂದಿದ್ದು, ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದಂತೆ ಪ್ರತಿ ಲೀಟರ್ ಡೀಸೆಲ್‌ಗೆ ಗರಿಷ್ಠ 13.9 ಕಿ.ಮೀ ಮೈಲೇಜ್ ನೀಡಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಖರೀದಿಯ ಮೇಲೆ ರೂ.2 ಲಕ್ಷದ ತನಕ ಡಿಸ್ಕೌಂಟ್

ಹೊಸ ಕಾರಿನಲ್ಲಿರುವ ಪ್ರೀಮಿಯಂ ತಾಂತ್ರಿಕ ಸೌಲಭ್ಯಗಳು ಮತ್ತು ಐಷಾರಾಮಿ ವಿನ್ಯಾಸದಿಂದಾಗಿ ಕಾರ್ನಿವಾಲ್ ಕಾರು ಆವೃತ್ತಿಯನ್ನು 'ಲಗ್ಷುರಿ ಎಂಪಿವಿ' ವಿಭಾಗದಲ್ಲಿ ಗುರುತಿಸಲಾಗಿದ್ದು, ಸಿಗ್ನೆಚರ್ ಟೈಗರ್ ನೋಸ್ ಗ್ರಿಲ್ ಮತ್ತು ಸ್ವೆಪ್ಟ್ ಆಫ್ ಕ್ರೋಮ್ , ಸ್ವೆಪ್ಟ್‌ಬ್ಯಾಕ್ ಎಲ್‌ಇಡಿ ಪ್ರೋಜೆಕ್ಟರ್, ಬಂಪರ್ ರಕ್ಷಣೆಗಾಗಿ ಸಿಲ್ವರ್ ಸ್ಕಫ್ ಪ್ಲೇಟ್ ಜೋಡಣೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

More from DriveSpark

Article Published On: Tuesday, September 8, 2020, 19:26 [IST]
English summary
Kia Carnival Discounts Of Up To Rs 2 Lakhs. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+