ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಕರೋನಾ ವೈರಸ್‌ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಹಲವಾರು ಆಟೋ ಕಂಪನಿಗಳ ಹೊಸ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದೆ.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

2020ರ ಸೆಪ್ಟೆಂಬರ್ ಅವಧಿಯಲ್ಲಿನ ವಿವಿಧ ಕಂಪನಿಗಳ ಕಾರು ಮಾರಾಟದಲ್ಲಿ ಶೇ.31 ರಷ್ಟು ಬೆಳವಣಿಗೆಯು ಕಂಡುಬಂದಿದ್ದು, ಒಟ್ಟು 2,92,894 ಯನಿಟ್ ಕಾರುಗಳು ಮಾರಾಟಗೊಂಡಿವೆ. ಸಂಕಷ್ಟದಲ್ಲೂ ಕಾರು ಮಾರಾಟವು ಚೇತರಿಸಿಕೊಂಡಿರುವುದು ಆಟೋ ಕಂಪನಿಗಳಲ್ಲಿ ಮತ್ತಷ್ಟು ಬಲತುಂಬಿದ್ದು, ದೀಪಾವಳಿ ಸಂಭ್ರಮಾಚರಣೆಗೆ ಹೊತ್ತಿಗೆ ಮತ್ತಷ್ಟು ಹೊಸ ವಾಹನಗಳನ್ನು ಮಾರಾಟಗೊಳಿಸುವ ನೀರಿಕ್ಷೆಯಲ್ಲಿವೆ.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಕಿಯಾ ಮೋಟಾರ್ಸ್ ಕೂಡಾ ಕಾರ್ನಿವಾಲ್ ಎಂಪಿವಿ ಖರೀದಿ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡಿದೆ.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಕಾರ್ನಿವಾಲ್ ಎಂಪಿವಿ ಕಾರು ಖರೀದಿ ಮೇಲೆ ಒಟ್ಟು 1.56 ಲಕ್ಷ ಮೌಲ್ಯ ಆಫರ್ ಲಭ್ಯವಿದ್ದು, ಹೊಸ ಕಾರು ಖರೀದಿಸುವ ಗ್ರಾಹಕರಿಗೆ ರೂ.80 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ. 48 ಸಾವಿರ ಮೌಲ್ಯದ ಮೂರು ವರ್ಷಗಳ ಹೆಚ್ಚುವರಿ ವಾರಂಟಿ ಮತ್ತು ರೂ. 28 ಸಾವಿರ ಮೌಲ್ಯದ ರಿಯರ್ ಸೀಟ್ ಎಂಟರ್ಟೈನ್ಮೆಂಟ್ ಪ್ಯಾಕೇಜ್ ಒದಗಿಸುತ್ತಿದೆ.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಘೋಷಣೆ ಮಾಡಿರುವ ಹೊಸ ಆಫರ್‌ಗಳು ಕಾರ್ನಿವಾಲ್ ಕಾರು ಖರೀದಿ ಮೇಲೆ ಮಾತ್ರ ಲಭ್ಯವಿದ್ದು, ಸೆಲ್ಟೊಸ್ ಮತ್ತು ಸೊನೆಟ್ ಕಾರಿನ ಮೇಲೆ ಯಾವುದೇ ಆಫರ್ ಘೋಷಣೆ ಮಾಡಿಲ್ಲ. ಇನೋವಾ ಕ್ರಿಸ್ಟಾ ಖರೀದಿದಾರರನ್ನು ಸೆಳೆಯಲು ಎಂಪಿವಿ ಕಾರಿನ ಆಫರ್ ನೀಡುತ್ತಿದ್ದು, ಹೊಸ ಆಫರ್ ಅಕ್ಟೋಬರ್ 1ರ ತನಕ ಲಭ್ಯವಿರಲಿದೆ.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಇನ್ನು ಕಿಯಾ ಮೋಟಾರ್ಸ್ ಕಂಪನಿಯು ಸೆಲ್ಟೊಸ್ ನಂತರ ಬಿಡುಗಡೆ ಮಾಡಲಾದ ಕಾರ್ನಿವಾಲ್ ಕಾರಿನ ಮಾರಾಟದ ಮೂಲಕ ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಿಕೊಂಡಿದ್ದು, ಹೊಸ ಕಾರು ಐಷಾರಾಮಿ ಸೌಲಭ್ಯಗಳೊಂದಿಗೆ ದುಬಾರಿಯಾಗಿದ್ದರೂ ಸಹ ಇನೋವಾ ಕ್ರಿಸ್ಟಾ ಕಾರಿಗೂ ಪೈಪೋಟಿ ನೀಡುತ್ತಿದೆ.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಅತ್ಯುತ್ತಮ ಫೀಚರ್ಸ್ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಎಂಪಿವಿ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.24.95 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಕಾರ್ನಿವಾಲ್ ಕಾರಿನಲ್ಲಿ ಸದ್ಯಕ್ಕೆ ಕೇವಲ ಒಂದೇ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, 2.2-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ ಹೊಂದಿದೆ. ಪ್ರತಿ ವೆರಿಯೆಂಟ್‌ನಲ್ಲೂ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ನೀಡಲಾಗಿದ್ದು, 200-ಬಿಎಚ್‌ಪಿ, 440-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಈ ಮೂಲಕ ಮೈಲೇಜ್‌ನಲ್ಲೂ ಗಮನಸೆಳೆಯುವ ಕಾರ್ನಿವಾಲ್ ಕಾರು 2,200 ಕೆಜಿ ತೂಕ ಹೊಂದಿದ್ದು, ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದಂತೆ ಪ್ರತಿ ಲೀಟರ್ ಡೀಸೆಲ್‌ಗೆ ಗರಿಷ್ಠ 13.9 ಕಿ.ಮೀ ಮೈಲೇಜ್ ನೀಡಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕಾರ್ನಿವಾಲ್ ಎಂಪಿವಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದ ಕಿಯಾ ಮೋಟಾರ್ಸ್

ಹೊಸ ಕಾರಿನಲ್ಲಿರುವ ಪ್ರೀಮಿಯಂ ತಾಂತ್ರಿಕ ಸೌಲಭ್ಯಗಳು ಮತ್ತು ಐಷಾರಾಮಿ ವಿನ್ಯಾಸದಿಂದಾಗಿ ಕಾರ್ನಿವಾಲ್ ಕಾರು ಆವೃತ್ತಿಯನ್ನು 'ಲಗ್ಷುರಿ ಎಂಪಿವಿ' ವಿಭಾಗದಲ್ಲಿ ಗುರುತಿಸಲಾಗಿದ್ದು, ಸಿಗ್ನೆಚರ್ ಟೈಗರ್ ನೋಸ್ ಗ್ರಿಲ್ ಮತ್ತು ಸ್ವೆಪ್ಟ್ ಆಫ್ ಕ್ರೋಮ್ , ಸ್ವೆಪ್ಟ್‌ಬ್ಯಾಕ್ ಎಲ್‌ಇಡಿ ಪ್ರೋಜೆಕ್ಟರ್, ಬಂಪರ್ ರಕ್ಷಣೆಗಾಗಿ ಸಿಲ್ವರ್ ಸ್ಕಫ್ ಪ್ಲೇಟ್ ಜೋಡಣೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

More from DriveSpark

Article Published On: Monday, October 19, 2020, 14:51 [IST]
English summary
Kia Carnival Gets Upto 1.56 Lakh Rupees Benefits In This Festive Season. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+