ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಕಿಯಾ ಮೋಟಾರ್ಸ್ ಸಂಸ್ಥೆಯು ಮುಂದಿನ ತಿಂಗಳು 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಹುನೀರಿಕ್ಷಿತ ಕಾರ್ನಿವಾಲ್ ಎಂಪಿವಿ ಕಾರು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರಿನ ವೆರಿಯೆಂಟ್‌ಗಳ ಮಾಹಿತಿ ಲಭ್ಯವಾಗಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಕಾರ್ನಿವಾಲ್ ಎಂಪಿವಿ ಕಾರು ಗ್ರಾಹಕರ ಬೇಡಿಕೆಯೆಂತೆ 7 ಸೀಟರ್, 8 ಸೀಟರ್ ಮತ್ತು 9 ಸೀಟರ್‌ನೊಂದಿಗೆ ಬಿಡುಗಡೆಯಾಗುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, 9 ಸೀಟರ್ ಮಾದರಿಯು ಎಂಟ್ರಿ ಲೆವಲ್ ಮಾದರಿಯಾಗಲಿದ್ದರೆ 7 ಸೀಟರ್ ಮಾದರಿಯು ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ. ಇದರಲ್ಲಿ ಮಧ್ಯದ ಆವೃತ್ತಿಯಾದ 8 ಸೀಟರ್ ಮಾದರಿಯು ಕೂಡಾ ಹಲವು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಮಾರಾಟವಾಗಲಿದ್ದು, ಎಂಪಿವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಇನ್ನು ಕಾರ್ನಿವಾಲ್ ಕಾರು ವಿದೇಶಿ ಮಾರುಕಟ್ಟೆಗಳಲ್ಲಿ 11 ಸೀಟರ್ ಮತ್ತು 9 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳಲ್ಲಿ ಮಾರಾಟವಾಗುತ್ತಿದ್ದು, ಇದು ದೇಶಿಯ ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಯೊಂದಿಗೆ 7 ಸೀಟರ್, 8 ಸೀಟರ್ ಮತ್ತು 9 ಸೀಟರ್ ಆವೃತ್ತಿಯೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

7 ಸೀಟರ್ ಮಾದರಿಯು 2+2+3 ಆಸನ ವ್ಯವಸ್ಥೆಯನ್ನು ಹೊಂದಿದ್ದರೆ 8 ಸೀಟರ್ ಮಾದರಿಯು 2+3+3 ಮತ್ತು 9 ಸೀಟರ್ ಮಾದರಿಯು 2+2+2+3 ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ವಿವಿಧ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

9 ಸೀಟರ್ ಮಾದರಿಯು 7 ಸೀಟರ್ ಮತ್ತು 8 ಸೀಟರ್‌ಗಿಂತಲೂ ತುಸು ಭಿನ್ನವಾಗಿರಲಿದ್ದು, ಮುಂಭಾಗದಲ್ಲಿ ಎರಡು ಆಸನ, ಮಧ್ಯದಲ್ಲಿ ಎರಡು ಆಸನ, ಮೂರನೇ ಆಸನದಲ್ಲಿ ಎರಡು ಆಸನ ಮತ್ತು ನಾಲ್ಕನೇ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಕುಳಿತುಕೊಳ್ಳಬಹುದಾದ ವ್ಯವಸ್ಥೆಯಿದ್ದು, ಇದು ಎಂಟ್ರಿ ಲೆವಲ್ ಮಾದರಿಯಾಗಿ ಮಾರಾಟವಾಗಲಿದೆ. ಇನ್ನುಳಿದಂತೆ 8 ಸೀಟರ್ ಮಾದರಿಯು ಮಧ್ಯಮ ಆವೃತ್ತಿಯಾಗಲಿದ್ದರೆ, 7 ಸೀಟರ್ ವೆರಿಯೆಂಟ್‌ನಲ್ಲಿ ಎರಡು ಆವೃತ್ತಿಗಳು ಹೈ ಎಂಡ್ ಮಾದರಿಯಾಗಿರಲಿವೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರಿನಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಮಾಡಿಫೈ ಕೂಡಾ ಮಾಡಿಕೊಳ್ಳಬಹುದಾಗಿದ್ದು, ಡ್ಯುಯಲ್ ಸನ್‌ರೂಫ್ ಮತ್ತು ರೂಫ್ ಬಾಕ್ಸ್ ಸೌಲಭ್ಯವನ್ನು ಹೆಚ್ಚುವರಿ ಶುಲ್ಕದೊಂದಿಗೆ ಖರೀದಿ ಮಾಡಬೇಕಾಗುತ್ತದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಎಂಪಿವಿ ಕಾರುಗಳ ಮಾರಾಟ ವಿಭಾಗದಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಕಾರ್ನಿವಾಲ್ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.25 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಕಾರ್ನಿವಾಲ್ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇದ್ದು ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಎಂಜಿನ್ ಸಾಮರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹಾಗೆಯೇ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯ ಹೊಂದಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸಹ ಈ ಕಾರಿನಲ್ಲಿದೆ.

ಬಿಡುಗಡೆಯಾಗಲಿರುವ ಕಿಯಾ ಕಾರ್ನಿವಾಲ್ ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಫೆಬ್ರುವರಿ 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ಬಳಿಕ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.

More from DriveSpark

Article Published On: Saturday, January 11, 2020, 18:23 [IST]
English summary
According to report, KIA Carnival MPV will be available in a total of four variants based on seating configuration in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+