Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಿಂದ ಕಾರುಗಳ ರಫ್ತು ಪ್ರಮಾಣದಲ್ಲಿ ಅಗ್ರಸ್ಥಾನದತ್ತ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಕಾರು ಮಾರಾಟದಲ್ಲಿ ಗಣನೀಯ ಪ್ರಮಾಣದಲ್ಲಿ ಬೆಳವಣಿಗೆ ಸಾಧಿಸಿದ್ದು, ಭಾರತದಲ್ಲಿ ಅತಿ ಹೆಚ್ಚು ಕಾರು ಮಾರಾಟ ಕಂಪನಿಗಳಲ್ಲಿ ಸದ್ಯ ಐದನೇ ಸ್ಥಾನದಲ್ಲಿದೆ. ಹಾಗೆಯೇ ಕಾರುಗಳ ರಫ್ತು ಪ್ರಮಾಣದಲ್ಲೂ ಭಾರೀ ಬೆಳವಣಿಗೆ ಸಾಧಿಸುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಹೊಸ ದಾಖಲೆಗೆ ಕಾರಣವಾಗಲಿದೆ.

ಭಾರತದಿಂದ ವಿಶ್ವದ ಪ್ರಮುಖ 20 ರಾಷ್ಟ್ರಗಳಿಗೆ ವಿವಿಧ ಕಾರು ಮಾದರಿಗಳನ್ನು ರಫ್ತು ಮಾಡುವ ಕಿಯಾ ಮೋಟಾರ್ಸ್ ಕಂಪನಿಯು 2020ರ ಹಣಕಾಸು ಅವಧಿಯಲ್ಲಿ ಇದುವರೆಗೆ ಸುಮಾರು 20,293 ಯನಿಟ್ ರಫ್ತುಗೊಳಿಸುವ ಮೂಲಕ ಆರನೇ ಸ್ಥಾನದಲ್ಲಿದ್ದು, ಮುಂಬರುವ ಮಾರ್ಚ್ ಹೊತ್ತಿಗೆ ಕಾರುಗಳ ರಫ್ತು ಪ್ರಮಾಣವನ್ನು ದ್ವಿಗುಣಗೊಳಿಸುವ ಯೋಜನೆಯಲ್ಲಿದೆ. ಸದ್ಯ ಕಾರು ರಫ್ತು ಪ್ರಮಾಣದಲ್ಲಿ ಹ್ಯುಂಡೈ ಕಂಪನಿಯು ಮೊದಲ ಸ್ಥಾನದಲ್ಲಿದ್ದು, ಈ ವರ್ಷದ ಹಣಕಾಸು ಅವಧಿಯಲ್ಲಿ ಹ್ಯುಂಡೈ ಕಂಪನಿಯು 44,271 ಯುನಿಟ್ ರಫ್ತುಗೊಳಿಸಿದೆ.

ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ, ಮೂರನೇ ಸ್ಥಾನದಲ್ಲಿ ಫೋರ್ಡ್, ನಾಲ್ಕನೇ ಸ್ಥಾನದಲ್ಲಿ ಫೋಕ್ಸ್ವ್ಯಾಗನ್, ಐದನೇ ಸ್ಥಾನದಲ್ಲಿ ಜನರಲ್ ಮೋಟಾರ್ಸ್ ಮತ್ತು ಆರನೇ ಸ್ಥಾನದಲ್ಲಿ ಕಿಯಾ ಮೋಟಾರ್ಸ್ ಸ್ಥಾನ ಪಡೆದುಕೊಂಡಿದ್ದು, ಮುಂಬರುವ ದಿನಗಳಲ್ಲಿ ಕಿಯಾ ರಫ್ತು ಪ್ರಮಾಣವು ಮೂರನೇ ಸ್ಥಾನಕ್ಕೇರಲಿದೆ.

ಆಂಧ್ರಪ್ರದೇಶದ ಅನಂತಪುರದಲ್ಲಿರುವ ಕಿಯಾ ಮೋಟಾರ್ಸ್ ಉತ್ಪಾದನಾ ಘಟಕವು ವಾರ್ಷಿಕವಾಗಿ 3 ಲಕ್ಷ ಯನಿಟ್ ಉತ್ಪಾದನಾ ಸಾಮಥ್ಯ ಹೊಂದಿದ್ದು, ಸದ್ಯಕ್ಕೆ ಅರ್ಧದಷ್ಟು ಉತ್ಪಾದನಾ ಸೌಲಭ್ಯವನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ.

ಶೀಘ್ರದಲ್ಲೇ ಉತ್ಪಾದನಾ ಸೌಲಭ್ಯವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲು ನಿರ್ಧರಿಸಿರುವ ಕಿಯಾ ಕಂಪನಿಯು ಸೆಲ್ಟೊಸ್ ಮತ್ತು ಸೊನೆಟ್ ಮಾದರಿಗಳನ್ನು ಅಂತರ್ರಾಷ್ಟ್ರೀಯ ಮಟ್ಟದ ಹೊಸ ಮಾರುಕಟ್ಟೆಗಳಿಗೆ ವಿಸ್ತರಿಸುತ್ತಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಭಾರತದಲ್ಲಿ ಸೆಲ್ಟೊಸ್, ಸೊನೆಟ್ ಮತ್ತು ಕಾರ್ನಿವಾಲ್ ಕಾರು ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿರುವ ಕಿಯಾ ಕಂಪನಿಯು ಪ್ರತಿ ಆರು ತಿಂಗಳಿಗೆ ಒಂದು ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಮುಂದಿನ ಕಾರು ಮಾದರಿಯಾಗಿ ಹೊಸ ಎಲೆಕ್ಟ್ರಿಕ್ ಆವೃತ್ತಿಯೊಂದು ರಸ್ತೆಗಿಳಿಯಲಿದೆ.

ಇನ್ನು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ಅಕ್ಟೋಬರ್ ಅವಧಿಯ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು 7 ಕಾರು ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಇನ್ನುಳಿದ ಮೂರು ಸ್ಥಾನಗಳಲ್ಲಿ ಎರಡು ಸ್ಥಾನಗಳು ಹ್ಯುಂಡೈ ಕಂಪನಿಯ ಕಾರುಗಳಿಗೆ ಮತ್ತು ಒಂದು ಸ್ಥಾನ ಕಿಯಾ ಮೋಟಾರ್ಸ್ ಪಾಲಾಗಿದೆ.

ಟಾಪ್ 10 ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿಯ ಸ್ವಿಫ್ಟ್, ಬಲೆನೊ, ವ್ಯಾಗನ್-ಆರ್, ಆಲ್ಟೋ, ಡಿಜೈರ್, ಇಕೋ, ಬ್ರೆಝಾ ಕಾರು ಮುಂಚೂಣಿಯಲ್ಲಿದ್ದರೆ ಹ್ಯುಂಡೈ ನಿರ್ಮಾಣದ ಕ್ರೆಟಾ, ಗ್ರ್ಯಾಂಡ್ ಐ10 ಸ್ಥಾನಪಡೆದುಕೊಂಡಿವೆ.

ಕಿಯಾ ಮೋಟಾರ್ಸ್ ನಿರ್ಮಾಣದ ಸೊನೆಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ಒಟ್ಟು 11,721 ಯುನಿಟ್ ಮಾರಾಟದೊಂದಿಗೆ ಹತ್ತನೇ ಸ್ಥಾನದಲ್ಲಿದ್ದು, ಬಿಡುಗಡೆಯಾದ ಆರಂಭದಲ್ಲೇ ಹೊಸ ಕಾರಿಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಅಗ್ರಸ್ಥಾನದತ್ತ ಲಗ್ಗೆಯಿಡುತ್ತಿರುವ ಕಿಯಾ ಮೋಟಾರ್ಸ್ ಹೊಚ್ಚ ಹೊಸ ಸೊನೆಟ್ ಕಾರು ಮಾದರಿಯು ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಇದುವರೆಗೆ ಸುಮಾರು 70 ಸಾವಿರಕ್ಕೂ ಅಧಿಕ ಯುನಿಟ್ಗೆ ಬುಕ್ಕಿಂಗ್ ಪಡೆದುಕೊಂಡಿದೆ.