11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ ಮೋಟಾರ್ಸ್

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿರುವ ಕಿಯಾ ಮೋಟಾರ್ಸ್ ಕಂಪನಿಯು ಹೊಚ್ಚ ಹೊಸ ಸೆಲ್ಟೊಸ್ ಮತ್ತು ಕಾರ್ನಿವಾಲ್ ಎಂಪಿವಿ ಕಾರು ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಇದುವರೆಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟಮಾಡಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೊಸ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಕಳೆದ ವರ್ಷ 2019ರ ಅಗಸ್ಟ್ ಮಧ್ಯಂತರದಲ್ಲಿ ಬಿಡುಗಡೆಗೊಂಡಿದ್ದ ಸೆಲ್ಟೊಸ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಇದೇ ವರ್ಷದ ಅಗಸ್ಟ್ ತಿಂಗಳಿಗೆ ಒಂದನೇ ವರ್ಷದ ಸಂಭ್ರಮದಲ್ಲಿದೆ. ಗ್ರಾಹಕರ ನೀರಿಕ್ಷೆಯೆಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಿರುವ ಸೆಲ್ಟೊಸ್ ಕಾರು ಆರಂಭದಲ್ಲೇ ಬಿಎಸ್-6 ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದ್ದು, ಕಾರ್ನಿವಾಲ್ ಎಂಪಿವಿ ಕಾರು ಕೂಡಾ ಉತ್ತಮ ಬೇಡಿಕೆ ಪಡೆದುಕೊಂಡಿದೆ.

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಕಿಯಾ ಮೋಟಾರ್ಸ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಸೆಲ್ಟೊಸ್ ನಂತರ ಕಾರ್ನಿವಾಲ್ ಕಾರು ಮಾರಾಟಕ್ಕೆ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಮತ್ತೊಂದು ಬಹುನೀರಿಕ್ಷಿತ ಕಾರು ಮಾದರಿಯಾದ ಸೊನೆಟ್ ಕಾನ್ಸೆಪ್ಟ್ ಕಾರು ಕೂಡಾ ಸೆಲ್ಟೊಸ್ ಮಾದರಿಯಲ್ಲೇ ಗ್ರಾಹಕರ ಆಕರ್ಷಣೆಗೆ ಕಾರಣವಾಗಲಿದೆ.

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಇನ್ನು ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲಾ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಲಾಕ್‌ಡೌನಿಂದಾಗಿ ಕುಸಿದಿರುವ ವ್ಯಾಪಾರ ಅಭಿವೃದ್ದಿಯನ್ನು ಸರಿದಾರಿಗೆ ತರುವುದು ಒಂದು ಸವಾಲಾಗಿ ಪರಿಣಿಮಿಸಿದ್ದು, ಕಿಯಾ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿರುವುದು ಕಾರು ಮಾರಾಟ ಸುಧಾರಣೆಗೆ ಕಾರಣವಾಗಿದೆ.

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಕುಸಿದಿರುವ ಕಾರು ಮಾರಾಟಕ್ಕೆ ಹೊಸ ಸಾಲ ಸೌಲಭ್ಯಗಳು ಮತ್ತು ಆಫರ್‌ಗಳು ಬೇಡಿಕೆಯ ಚೇತರಿಕೆಗೆ ಸಹಕಾರಿಯಾಗಿದ್ದು, ಸಂಕಷ್ಟದ ಸಮಯದಲ್ಲೂ ಗ್ರಾಹಕರನ್ನು ಸೆಳೆಯಲು ಕೆಲವು ಆಕರ್ಷಕ ಯೋಜನೆಗಳನ್ನು ರೂಪಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಕಿಯಾ ಕಂಪನಿಯು ಸೆಲ್ಟೊಸ್ ಕಾರು ಖರೀದಿಯ ಮಾಡಿದ ಮೊದಲ ಆರು ತಿಂಗಳು 1 ಲಕ್ಷಕ್ಕೆ ರೂ.777 ಇಎಂಐ ಅನ್ವಯವಾಗುವಂತೆ ಇಎಂಐ ವಿಧಿಸುತ್ತಿದ್ದು, 7ನೇ ತಿಂಗಳಿನಿಂದ ಸಾಮಾನ್ಯ ಮಾದರಿಯಲ್ಲಿ ಇಎಂಐ ವಿಧಿಸಲಿದೆ. ಇದು ಲಾಕ್‌ಡೌನ್ ಸಂಕಷ್ಟದಿಂದ ಕಾರು ಖರೀದಿ ಮುಂದೂಡಿರುವ ಗ್ರಾಹಕರಿಗೆ ಅನುಕೂಲವಾಗಲಿದೆ.

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಜೊತೆಗೆ ಹೊಸ ಕಾರು ಖರೀದಿ ಮೇಲೆ ಶೇ.100ರಷ್ಟು ಆನ್-ರೋಡ್ ಸಾಲ ಸೌಲಭ್ಯ, 8 ವರ್ಷಗಳ ದೀರ್ಘಾವಧಿಯ ಸಾಲ ಮತ್ತು ಆಯ್ದ ಕಾರು ಮಾದರಿಗಳ ಮೇಲೆ ಬೈಬ್ಯಾಕ್ ಗ್ಯಾರಂಟಿ ಆಫರ್ ನೀಡುತ್ತಿರುವುದು ಪ್ರಮುಖ ಆಕರ್ಷಣೆಯಾಗಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ ಕಿಯಾ

ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ 2020ರ ಸೆಲ್ಟೊಸ್ ಕಾರು ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.89 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.34 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Kia Motors Crosses 1 lakh Sales Milestone. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X