ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ
ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದತ್ತ ಲಗ್ಗೆಯಿಡುತ್ತಿರುವ ಕಿಯಾ ಮೋಟಾರ್ಸ್ ಹೊಚ್ಚ ಹೊಸ ಕಾರು ಮಾದರಿಯಾದ ಸೊನೆಟ್ ಆವೃತ್ತಿಯು ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಕಳೆದ ತಿಂಗಳು 18ರಂದು ಬಿಡುಗಡೆಗೊಂಡಿದ್ದ ಕಿಯಾ ಸೊನೆಟ್ ಕಾರು ಕೇವಲ 12 ದಿನಗಳಲ್ಲಿ 9,266 ಯುನಿಟ್ ಮಾರಾಟಗೊಂಡಿತ್ತು. ಇದೀಗ ಕಿಯಾ ಡೀಲರ್ಸ್‌ವೊಂದರಲ್ಲಿ ಒಂದೇ ದಿನಕ್ಕೆ 25 ಯನಿಟ್ ಮಾರಾಟಗೊಳ್ಳುವ ಮೂಲಕ ಮತ್ತೊಂದು ದಾಖಲೆಗೆ ಕಾರಣವಾಗಿದ್ದು, ಒಂದೇ ದಿನದಲ್ಲಿ ಕಾರು ಮಾರಾಟ ಮಳಿಗೆಯೊಂದರಲ್ಲಿ ಅತಿ ಹೆಚ್ಚು ಕಾರು ವಿತರಣೆ ಮಾಡಿರುವುದು ಇದೇ ಮೊದಲು. ಈ ಹಿಂದೆ ಕಾರು ಮಾರಾಟ ಮಳಿಗೆಯೊಂದರಲ್ಲಿ ಗರಿಷ್ಠ 18 ಕಾರುಗಳ ವಿತರಣೆ ಮಾಡಿರುವ ದಾಖಲೆಗಳಿದ್ದು, ಇದೀಗ ಕಿಯಾ ಸೊನೆಟ್ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದೆ.

ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ. ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ದೀಪಾವಳಿ ವೇಳೆಗೆ ಅತಿ ಹೆಚ್ಚು ಮಾರಾಟ ಗುರಿಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕಿಯಾ ಸೊನೆಟ್ ಕಾರು ಮಾದರಿಯಲ್ಲಿ ಮೂರು ಮಾದರಿಯ ಎಂಜಿನ್ ಆಯ್ಕೆ ನೀಡಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ನೀಡಲಾಗಿದೆ.

1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ ಮತ್ತು115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ, 240-ಎನ್ಎಂ ಟಾರ್ಕ್ ಮತ್ತು ಹೈ ಎಂಡ್ ಎಂಡ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿರುವ 1.0-ಲೀಟರ್ ತ್ರಿ ಸಿಲಿಂಡರ್ ಟರ್ಬೋ ಎಂಜಿನ್ ಮಾದರಿಯು 6-ಸ್ಪೀಡ್ ಇಂಟಲಿಜೆಂಟ್ ಮ್ಯಾನುವಲ್(ಐಎಂಟಿ) ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್ ಆಯ್ಕೆಯೊಂದಿಗೆ 120-ಬಿಎಚ್‌ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿದೆ.


Click it and Unblock the Notifications








