Just In
- 23 min ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 23 min ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 39 min ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 1 hr ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- News ಬಿಜೆಪಿ ತೊರೆದ ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
80 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಕಿಯಾ ಸೆಲ್ಟೊಸ್ ಎಸ್ಯುವಿ
ಕಿಯಾ ಸೆಲ್ಟೋಸ್ ಎಸ್ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿ ದಾಖಲೆಗಳ ಸರದಾರ ಆಗಿದೆ. ಭಾರತದ ಗ್ರಾಹಕರು ಈ ಎಸ್ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್ಗಳಿಗೆ ಫುಲ್ ಫಿದಾ ಆಗಿದ್ದಾರೆ.
ಭಾರತಿಯ ಮಾರುಕಟ್ಟೆಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಬಿಡುಗಡೆಗೊಳಿಸಿದ ಮೊದಲ ಎಸ್ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಯಶ್ವಸಿಯಾಗಿದೆ. ಭಾರತದ ಎಸ್ಯುವಿ ಸೆಗ್ಮೆಂಟ್ನಲ್ಲಿ ಕಿಯಾ ಸೆಲ್ಟೋಸ್ ಅತಿ ಹೆಚ್ಚು ಮಾರಾಟವಾಗುವ ವಾಹನವಾಗಿದೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ.
ಪ್ರತಿ ತಿಂಗಳು ಈ ಎಸ್ಯುವಿಯ ಮಾರಾಟ ಪ್ರಮಾಣವು ಹೆಚ್ಚಾಗುತ್ತಲೇ ಇದೆ. ಕಿಯಾ ಸೆಲ್ಟೊಸ್ ಎಸ್ಯುವಿಯು ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಒಟ್ಟು 81,784 ಯುನಿಟ್ಗಳು ಮಾರಾಟವಾಗಿವೆ.
ಕಿಯಾ ಸೆಲ್ಟೋಸ್ ಎಸ್ಯುವಿಯನ್ನು ಬಿಎಸ್-6 ಎಂಜಿನ್ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ಗಳು ಸೇರಿವೆ.
ಎಸ್ಯುವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿಎಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್ಪಿ ಪವರ್ ಮತ್ತು 242 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಎಲ್ಲಾ ಎಂಜಿನ್ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿಟಿ, 1.5 ಲೀಟರ್ ಡೀಸೆಲ್ಗೆ ಐವಿಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಗಳನ್ನು ಅಳವಡಿಸಲಾಗಿದೆ.
ಕಿಯಾ ಸೆಲ್ಟೋಸ್ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 6 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಎಸ್ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್ಗಳನ್ನು ಅಳವಡಿಸಲಾಗಿದೆ.
ಸೆಲ್ಟೋಸ್ನ ಹೈ ಎಂಡ್ ವೆರಿಯೆಂಟ್ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಅಳವಡಿಸಲಾಗಿದೆ.
ಕಿಯಾ ಸೆಲ್ಟೊಸ್ ಎಸ್ಯುವಿಯು ಭಾರತೀಯು ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ.