Just In
Don't Miss!
- News
ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ ಭಾಷಣ; ಮುಖ್ಯಾಂಶಗಳು
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಟೀಸರ್ ಅನಾವರಣಗೊಳಿಸಿದ ಕಿಯಾ ಮೋಟಾರ್ಸ್
ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿ ಕಿಯಾ ಮೋಟಾರ್ಸ್ ತನ್ನ ಜನಪ್ರಿಯ ಎಂಪಿವಿ ಆವೃತ್ತಿಯಾದ ಕಾರ್ನಿವಾಲ್ ಹೊಸ ತಲೆಮಾರಿನ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ಟೀಸರ್ ಚಿತ್ರವನ್ನು ಬಹಿರಂಗಪಡಿಸಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಾರ್ನಿವಾಲ್ ಕಾರು ವಿದೇಶಿ ಮಾರುಕಟ್ಟೆಗಳಲ್ಲಿ ಮೊಡೆನಾ ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ನ್ಯೂ ಜನರೇಷನ್ ಮಾದರಿಯು ಸದ್ಯಕ್ಕೆ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ. ತದನಂತರ 2021ರ ವೇಳೆಗೆ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ನ್ಯೂ ಜನರೇಷನ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರ್ನಿವಾಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ನ್ಯೂ ಜನರೇಷನ್ ಕಾರ್ನಿವಾಲ್ ಮಾದರಿಯು ಮುಂಭಾಗದ ವಿನ್ಯಾಸದಲ್ಲಿ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಮಾರ್ಡನ್ ಡಿಸೈನ್‌ನೊಂದಿಗೆ ಸ್ಲಿಕ್ ಎಲ್‌ಇಡಿ ಹೆಡ್‌ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್‌ಗಳನ್ನು ನೀಡಲಾಗಿದೆ.

ಆದರೆ ಕಾರಿನ ಒಳಭಾಗದ ವಿನ್ಯಾಸದ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಹೊಸ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಬಹುದಾಗಿದ್ದು, ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಗುಣಮಟ್ಟದ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ಹಾಗೆಯೇ ನ್ಯೂ ಜನರೇಷನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಿ ಹೊಸ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದಾದ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಹೊಸ ತಲೆಮಾರಿನ ಕಾರ್ನಿವಾಲ್ ಮಾದರಿಯೊಂದಿಗೆ ಎಂಪಿವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲೂ ಸದ್ಯಕ್ಕೆ ಹೊಸ ಬದಲಾವಣೆಗೆ ಕಾರಣವಾಗಿದೆ.

ಪ್ರತಿಸ್ಪರ್ಧಿ ಕಾರು ಮಾದರಿಯಾದ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಬೆಲೆ ಹೊಂದಿದ್ದರು ಎಂಪಿವಿ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.24.95 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಕಾರ್ನಿವಾಲ್ ಕಾರಿನಲ್ಲಿ ಸದ್ಯಕ್ಕೆ ಕೇವಲ ಒಂದೇ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, 2.2-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ ಹೊಂದಿದೆ. ಪ್ರತಿ ವೆರಿಯೆಂಟ್‌ನಲ್ಲೂ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ನೀಡಲಾಗಿದ್ದು, 200-ಬಿಎಚ್‌ಪಿ, 440-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಈ ಮೂಲಕ ಮೈಲೇಜ್‌ನಲ್ಲೂ ಗಮನಸೆಳೆಯುವ ಕಾರ್ನಿವಾಲ್ ಕಾರು 2,200 ಕೆಜಿ ತೂಕ ಹೊಂದಿದ್ದು, ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದಂತೆ ಪ್ರತಿ ಲೀಟರ್ ಡೀಸೆಲ್‌ಗೆ ಗರಿಷ್ಠ 13.9 ಕಿ.ಮೀ ಮೈಲೇಜ್ ನೀಡಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಕಾರಿನಲ್ಲಿರುವ ಪ್ರೀಮಿಯಂ ತಾಂತ್ರಿಕ ಸೌಲಭ್ಯಗಳು ಮತ್ತು ಐಷಾರಾಮಿ ವಿನ್ಯಾಸದಿಂದಾಗಿ ಕಾರ್ನಿವಾಲ್ ಕಾರು ಆವೃತ್ತಿಯನ್ನು 'ಲಗ್ಷುರಿ ಎಂಪಿವಿ' ವಿಭಾಗದಲ್ಲಿ ಗುರುತಿಸಲಾಗಿದ್ದು, ಸಿಗ್ನೆಚರ್ ಟೈಗರ್ ನೋಸ್ ಗ್ರಿಲ್ ಮತ್ತು ಸ್ವೆಪ್ಟ್ ಆಫ್ ಕ್ರೋಮ್ , ಸ್ವೆಪ್ಟ್‌ಬ್ಯಾಕ್ ಎಲ್‌ಇಡಿ ಪ್ರೋಜೆಕ್ಟರ್, ಬಂಪರ್ ರಕ್ಷಣೆಗಾಗಿ ಸಿಲ್ವರ್ ಸ್ಕಫ್ ಪ್ಲೇಟ್ ಜೋಡಣೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.