ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟವನ್ನು ತನ್ನದಾಗಿಸಿಕೊಂಡಿದ್ದು, ಕಳೆದ ವರ್ಷದ ಕಾರು ಮಾರಾಟಕ್ಕಿಂತಲೂ ಶೇ. 141ರಷ್ಟು ಬೆಳವಣಿಗೆ ಸಾಧಿಸಿದೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಕೆಲವೇ ಕೆಲವು ಆಟೋ ಕಂಪನಿಗಳ ವಾಹನ ಮಾರಾಟದಲ್ಲಿ ಬೆಳವಣಿಗೆಯನ್ನು ಹೊರತುಪಡಿಸಿ ಹಲವು ಆಟೋ ಕಂಪನಿಗಳ ವಾಹನ ಮಾರಾಟವು ಇನ್ನು ಕೂಡಾ ಕುಸಿತ ಅನುಭವಿಸುತ್ತಿವೆ. ಆದರೆ ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಿರುವ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡುಬಂದಿದ್ದು, ಕಿಯಾ ಕಾರುಗಳಿಗೆ ಭರ್ಜರಿ ಬೇಡಿಕೆ ಹರಿದು ಬಂದಿದೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ವಿವಿಧ ಕಾರು ಉತ್ಪಾದಾನ ಕಂಪನಿಗಳ ಹೊಸ ಕಾರುಗಳ ನೋಂದಣಿಯು 2020ರ ಸೆಪ್ಟೆಂಬರ್ ಅವಧಿಯಲ್ಲಿ ಶೇ.31 ರಷ್ಟು ಬೆಳವಣಿಗೆ ಕಂಡುಬಂದಿದ್ದು, ಕಿಯಾ ಮೋಟಾರ್ಸ್, ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಮತ್ತು ಹ್ಯುಂಡೈ ಸೇರಿದಂತೆ ವಿವಿಧ ಕಾರು ಕಂಪನಿಗಳು ಒಟ್ಟು 2,92,894 ಯನಿಟ್ ಕಾರುಗಳನ್ನು ಮಾರಾಟ ಮಾಡಿವೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ಸೆಪ್ಟೆಂಬರ್ ಅವಧಿಯಲ್ಲಿ ಶೇ. 141ರಷ್ಟು ಬೆಳವಣಿಗೆಯೊಂದಿಗೆ 18,676 ಯುನಿಟ್ ಮಾರಾಟ ಮಾಡಿದ್ದು, ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 7,754 ಯುನಿಟ್ ಮಾರಾಟ ಮಾಡಿತ್ತು.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಸೆಲ್ಟೊಸ್ ಜೊತೆ ಇದೀಗ ಸೊನೆಟ್ ಕಾರು ಮಾರಾಟ ಮಾಡುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಕಳೆದ ತಿಂಗಳು 18ರಂದು ಬಿಡುಗಡೆಗೊಂಡಿದ್ದ ಸೊನೆಟ್ ಕಾರು ಕೂಡಾ ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಕಳೆದ ತಿಂಗಳು ಸೊನೆಟ್ ಬಿಡುಗಡೆಯಾದ 12 ದಿನಗಳ ಅವಧಿಯಲ್ಲಿ ಬರೋಬ್ಬರಿ 9,266 ಯನಿಟ್ ಮಾರಾಟಗೊಳಿಸಲಾಗಿದ್ದು, ಸೆಲ್ಟೊಸ್ ಕಾರು ಮಾದರಿಯು ಕಳೆದ ತಿಂಗಳು ಒಟ್ಟು 9,079 ಯುನಿಟ್ ಮಾರಾಟಗೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಇನ್ನುಳಿದ ಕಾರ್ನಿವಾಲ್ ಎಂಪಿವಿ ಕಾರು ಕೂಡಾ ದುಬಾರಿ ಬೆಲೆ ನಡುವೆಯೂ 331 ಯುನಿಟ್ ಮಾರಾಟಗೊಂಡಿದ್ದು, ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಿಯಾ ಮೋಟಾರ್ಸ್ ಕಂಪನಿಗೆ ಭಾರೀ ಪ್ರಮಾಣದ ಲಾಭ ತಂದುಕೊಡುವ ನೀರಿಕ್ಷೆಯಲ್ಲಿದೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ಸೆಪ್ಟೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Article Published On: Saturday, October 3, 2020, 10:44 [IST]
English summary
Kia Motors reports highest ever retail sales in september 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+