Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
7 ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಕಿಯಾ ಮೋಟಾರ್ಸ್
ವಿಶ್ವಾದ್ಯಂತ ಮಾಲಿನ್ಯ ತಡೆಗಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬಳಕೆಯನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಹೆಚ್ಚು ಗಮನಹರಿಸಲಾಗುತ್ತಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಕೂಡಾ ಭವಿಷ್ಯದ ವಾಹನಗಳ ಅಭಿವೃದ್ದಿ ಮತ್ತು ಮಾರಾಟದತ್ತ ಹೊಸ ಹೆಜ್ಜೆಯಿರಿಸುತ್ತಿದೆ.

ದಕ್ಷಿಣ ಕೊರಿಯಾದ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಕಿಯಾ ಮೋಟಾರ್ಸ್ ಕಂಪನಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಜಾಲ ಹೊಂದಿದ್ದು, ಸಾಮಾನ್ಯ ಮಾದರಿಯ ವಾಹನ ಮಾದರಿಗಳಲ್ಲದೆ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲೂ ಗಮನಸೆಳೆಯುತ್ತಿದೆ. ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸೊಲ್ ಇವಿ ಮತ್ತು ನಿರೋ ಇವಿ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಮುಂದಿನ 7 ವರ್ಷಗಳ ಅವಧಿಗೆ ಎಳು ಮಾದರಿಯ ಇವಿ ಕಾರುಗಳನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ಹೇಳಿಕೊಂಡಿದೆ.

ಹೊಸ ಇವಿ ಕಾರು ಮಾದರಿಗಳನ್ನು 2021ರಿಂದ ಹಂತ-ಹಂತವಾಗಿ ಬಿಡುಗಡೆ ಮಾಡಲಿರುವ ಕಿಯಾ ಮೋಟಾರ್ಸ್ ಕಂಪನಿಯು ನಿಧಾನವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾದರಿಗಳ ಅಭಿವೃದ್ದಿ ಮತ್ತು ಮಾರಾಟವನ್ನು ಸ್ಥಗಿತಗೊಳಿಸಲು ನಿರ್ಧರಿಸಲಿದೆ.

2030ರ ವೇಳೆಗೆ ವಿಶ್ವದ ಎಲ್ಲ ರಾಷ್ಟ್ರಗಳಲ್ಲೂ ಶೇ.100ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ಮಾತ್ರವೇ ಮಾರಾಟ ಮಾಡುವ ಉದ್ದೇಶದಿಂದ ಹಲವಾರು ಹೊಸ ನೀತಿ ನಿಯಮಗಳನ್ನು ರೂಪಿಸಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಲಾಗುತ್ತಿದೆ.

ಭಾರತದಲ್ಲೂ ಕೂಡಾ ಈಗಾಗಲೇ ಡೀಸೆಲ್ ವಾಹನಗಳ ತಗ್ಗಿಸಿಲು ಮತ್ತು ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೆಚ್ಚಿಸಲು ಫೇಮ್ 2 ಯೋಜನೆಯನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಯೋಜನೆ ಅಡಿ ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಸಬ್ಸಡಿ, ಜಿಎಸ್‌ಟಿ ವಿನಾಯ್ತಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

ಜೊತೆಗೆ ಸರ್ಕಾರಿ ಅಧಿಕಾರಿಗಳ ಅಧಿಕೃತ ಬಳಕೆಯ ವಾಹನ ಮಾದರಿಗಳನ್ನು ಸಹ ನಿಧಾನವಾಗಿ ಎಲೆಕ್ಟ್ರಿಕ್ ವಾಹನ ಮಾದರಿಗಳಿಗೆ ಬದಲಾವಣೆಗೊಳಿಸಲಾಗುತ್ತಿದ್ದು, ಕಿಯಾ ಮೋಟಾರ್ಸ್ ಸೇರಿದಂತೆ ಬಹುತೇಕ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಇವಿ ವಾಹನ ಮಾದರಿಗಳನ್ನು ಅಭಿವೃದ್ದಿಗೊಳಿಸುತ್ತಿವೆ.

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಶೀಘ್ರದಲ್ಲೇ ಸೊಲ್ ಇವಿ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಅದಕ್ಕೂ ಮುನ್ನ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಸಾರ್ವಜನಿಕ ಬಳಕೆಯ ಡಿಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ದಕ್ಷಿಣ ಕೊರಿಯಾ ಮತ್ತು ಉತ್ತರ ಅಮೆರಿಕದ ಪ್ರಮುಖ ರಾಜ್ಯಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಹ್ಯುಂಡೈ ಮತ್ತು ಕಿಯಾ ಮೋಟಾರ್ಸ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲೂ ಎರಡು ಕಂಪನಿಗಳು ಹಲವಾರು ತಂತ್ರಜ್ಞಾನಗಳನ್ನು ಎರವಲುಪಡೆದುಕೊಳ್ಳಲಿವೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸಾಮಾನ್ಯ ಕಾರುಗಳ ಅಭಿವೃದ್ದಿಯಲ್ಲಿ ಈಗಾಗಲೇ ಸಾಕಷ್ಟು ಮುನ್ನಡೆ ಸಾಧಿಸಿರುವ ಹ್ಯುಂಡೈ ಮತ್ತು ಕಿಯಾ ಮೋಟಾರ್ಸ್ ಕಂಪನಿಗಳು ಒಂದೇ ಮಾದರಿಯ ತಂತ್ರಜ್ಞಾನ ಬಳಕೆ ಹೊಂದಿದ್ದರೂ ವ್ಯಾಪಾರ-ವಹಿವಾಟಿನಲ್ಲಿ ಪ್ರತ್ಯೇಕ ನಿಯಂತ್ರಣ ಹೊಂದಿದ್ದು, ಇವಿ ವಾಹನಗಳ ಅಭಿವೃದ್ದಿಯಲ್ಲೂ ಕೂಡಾ ಪ್ರತ್ಯೇಕ ನಿಯಂತ್ರಣದೊಂದಿಗೆ ಹೊಸ ಉತ್ಪನ್ನಗಳ ತಂತ್ರಜ್ಞಾನ ಸೌಲಭ್ಯವನ್ನು ಎರಡೂ ಕಂಪನಿಗಳು ಬಳಕೆ ಮಾಡಿಕೊಳ್ಳಲಿವೆ.

ಇನ್ನು ಭಾರತದಲ್ಲಿ ಬಿಡುಗಡೆಗಾಗಿ ದೆಹಲಿ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಸೊಲ್ ಇವಿ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ನಿರೋ ಇವಿ ಎಸ್‌ಯುವಿ ಕಾರು ಮಾದರಿಯು ಹಲವಾರು ವಿಶೇಷತೆಗಳೊಂದಿಗೆ ಬಿಡುಗಡೆಯಾಗಲಿದ್ದು, ಸೊಲ್ ಇವಿ ಕಾರು 2021ರ ಆರಂಭದಲ್ಲಿ ಬಿಡುಗಡೆಯಾದಲ್ಲಿ ನಿರೋ ಇವಿ ಕಾರು ಸೊಲ್ ಬಿಡುಗಡೆಯಾದ ಒಂದು ವರ್ಷದ ನಂತರದಲ್ಲಿ ರಸ್ತೆಗಿಳಿಯುವ ಸಾಧ್ಯತೆಗಳಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೊಲ್ ಕಾರಿನ ಬ್ಯಾಟರಿ ಸೌಲಭ್ಯದ ಕುರಿತಾಗಿ ಯಾವುದೇ ನಿಖರ ಮಾಹಿತಿ ಇಲ್ಲವಾದರೂ ಹೊಸ ಕಾರು ಪ್ರತಿ ಚಾರ್ಜ್‌ಗೆ 400 ಕಿ.ಮೀ ನಿಂದ 450 ಕಿ.ಮೀ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಯೆಂತೆ ರೂ.14 ಲಕ್ಷದಿಂದ ರೂ.18 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.