ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಕಿಯಾ ಮೋಟಾರ್ಸ್ ಕಂಪನಿಯು ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಕಾರು ಮಾರಾಟ ಮಾಡಿದೆ.

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಸೊನೆಟ್ ಕಾರು ಮಾದರಿಯು ಬಿಡುಗಡೆಯಾದ ಕೇವಲ 2 ತಿಂಗಳ ಅವಧಿಯಲ್ಲಿ ಬರೋಬ್ಬರಿ 60 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಪ್ರಮುಖ ಮೂರು ಎಂಜಿನ್ ಆಯ್ಕೆಗಳೊಂದಿಗೆ ಸಾಮಾನ್ಯ ಪೆಟ್ರೋಲ್, ಟರ್ಬೋ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಹೊಂದಿದೆ. ಪ್ರತಿ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳಿದ್ದು, ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಮ್ಯಾಟಿಕ್ ಆವೃತ್ತಿಗೂ ಅತ್ಯಧಿಕ ಬೇಡಿಕೆ ದಾಖಲಾಗಿದೆ.

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಟ್ರಾಫಿಕ್ ದಟ್ಟಣೆ ನಡುವೆ ಸುಲಭ ಕಾರು ಚಾಲನೆಗಾಗಿ ಆಟೋಮ್ಯಾಟಿಕ್ ಕಾರು ಮಾದರಿಗಳು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಸೊನೆಟ್ ಕಾರು ಖರೀದಿಗೆ ಸಲ್ಲಿಕೆಯಾಗಿರುವ ಬುಕ್ಕಿಂಗ್‌ನಲ್ಲಿ ಶೇ. 46 ರಷ್ಟು ಗ್ರಾಹಕರು ಆಟೋಮ್ಯಾಟಿಕ್ ಮಾದರಿಗಳನ್ನು ಆಯ್ಕೆ ಮಾಡಿದ್ದಾರೆ.

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಇನ್ನುಳಿದ ಬುಕ್ಕಿಂಗ್ ಪ್ರಮಾಣದಲ್ಲಿ ಮ್ಯಾನುವಲ್ ಜೊತೆ ಇಂಟಲಿಜೆಂಟ್ ಮ್ಯಾನುವಲ್(ಪೆಡಲ್ ರಹಿತ) ಗೇರ್‌ಬಾಕ್ಸ್ ಆಯ್ಕೆಗಳಿಗೆ ಬೇಡಿಕೆ ಸಲ್ಲಿಕೆಯಾಗಿದ್ದು, ಮೊದಲ ಬಾರಿಗೆ ಆಟೋಮ್ಯಾಟಿಕ್ ಕಾರುಗಳಲ್ಲಿ ಅತಿ ಹೆಚ್ಚು ಬೇಡಿಕೆ ದಾಖಲಾಗಿದೆ.

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಳೆದು ತಿಂಗಳು ಒಟ್ಟು 11,721 ಯುನಿಟ್ ಮಾರಾಟದೊಂದಿಗೆ ಟಾಪ್ 10 ಕಾರುಗಳ ಮಾರಾಟದಲ್ಲಿ ಹತ್ತನೇ ಸ್ಥಾನಕ್ಕೇರಿದ್ದು, ಬಿಡುಗಡೆಯಾದ ಆರಂಭದಲ್ಲೇ ಹೊಸ ಕಾರಿಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದೆ. ಸೆಪ್ಟೆಂಬರ್ 18ರಂದು ಬಿಡುಗಡೆಗೊಂಡಿದ್ದ ಸೊನೆಟ್ ಕಾರು ಆಕರ್ಷಕ ಬೆಲೆಯೊಂದಿಗೆ ವಿವಿಧ ವೆರಿಯೆಂಟ್‌ಗಳನ್ನು ಹೊಂದಿದ್ದು, ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ. ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕಿಯಾ ಸೊನೆಟ್ ಕಾರಿನಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಅತ್ಯಧಿಕ ಬೇಡಿಕೆ

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ದೀಪಾವಳಿ ವೇಳೆಗೆ ಅತಿ ಹೆಚ್ಚು ಮಾರಾಟ ಗುರಿಹೊಂದಿದೆ.

Most Read Articles

Kannada
English summary
Kia Sonet Booking 46 Percent Buyers Opting Automatic Gearbox Variant. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X