ವರ್ಷದ ಸಂಭ್ರಮ: ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಬಿಡುಗಡೆ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಹೊಸ ಕಾರು ಬಿಡುಗಡೆ ಮಾಡಿ ಮೊದಲ ವರ್ಷದ ಸಂಭ್ರಮಕ್ಕಾಗಿ ವಿಶೇಷ ತಾಂತ್ರಿಕ ಸೌಲಭ್ಯವುಳ್ಳ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೊಳಿಸಲಾಗುತ್ತಿದೆ.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಮಾದರಿಯನ್ನು ಕೇವಲ ಸೀಮಿತ ಸಂಖ್ಯೆಯಲ್ಲಿ ಮಾತ್ರ ಮಾರಾಟ ಮಾಡಲಿರುವ ಕಿಯಾ ಮೋಟಾರ್ಸ್ ಕಂಪನಿಯು ಯಾವುದೇ ಹೆಚ್ಚುವರಿ ಬೆಲೆ ನಿಗದಿಪಡಿಸುತ್ತಿಲ್ಲ. ಸೆಲ್ಟೊಸ್ ಕಾರಿನ ಹೆಚ್‌ಟಿಎಕ್ಸ್ ವೆರಿಯೆಂಟ್‌ನಲ್ಲಿ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ. ಇದೀಗ ಬಿಡುಗಡೆಯಾಗಲಿರುವ ಸ್ಪೆಷಲ್ ಎಡಿಷನ್ ಕೂಡಾ ಭರ್ಜರಿಯಾಗಿ ಮಾರಾಟಗೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ಸಾಮಾನ್ಯ ಮಾದರಿಗಿಂತ ಹಲವಾರು ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಡ್ಯುಯಲ್ ಕಲರ್ ಟೋನ್ ಹೊಂದಲಿರುವ ಆ್ಯನಿವರ್ಸರಿ ಎಡಿಷನ್ ಮಾದರಿಯು ಹೊರ ಭಾಗದ ವಿನ್ಯಾಸದಲ್ಲಿ ಮತ್ತು ಒಳಭಾಗದಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್ ಪಡೆದುಕೊಳ್ಳಲಿದ್ದು, ವರ್ಷದ ಸಂಭ್ರಮಕ್ಕಾಗಿ ಆ್ಯನಿವರ್ಸರಿ ಎಡಿಷನ್ ಬ್ಯಾಡ್ಜ್ ನೀಡಲಾಗಿದೆ.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಜೊತೆಗೆ ಆ್ಯನಿವರ್ಸರಿ ಎಡಿಷನ್ ಮಾದರಿಯಲ್ಲಿ ಗ್ರಾಹಕರ ಬೇಡಿಕೆ ಪ್ರಮುಖ ನಾಲ್ಕು ಡ್ಯುಯಲ್ ಕಲರ್ ಆಯ್ಕೆಗಳನ್ನು ನೀಡಲಾಗಿದ್ದು, ಹನಿಕೊಂಬ್ ವಿನ್ಯಾಸದ ಆಸನ ಸೌಲಭ್ಯವು ಆರಾಮದಾಯಕ ಪ್ರಮಾಣಕ್ಕೆ ಪೂರಕವಾಗಿವೆ. ಹೊಸ ಕಾರು ಇದೇ ತಿಂಗಳಾಂತಕ್ಕೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ವಿಶೇಷ ಮಾದರಿಯನ್ನು ಈಗಾಗಲೇ ಆಯ್ದ ಡೀಲರ್ಸ್‌ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದೆ.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಇನ್ನು ಕಿಯಾ ಮೋಟಾರ್ಸ್ ಕಂಪನಿಯು ಕರೋನಾ ವೈರಸ್ ಅಬ್ಬರ ನಡುವೆಯೂ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸಿದ್ದು, ಅಗಸ್ಟ್ ಅವಧಿಯಲ್ಲಿ ಗರಿಷ್ಠ 10,655 ಯನಿಟ್ ಸೆಲ್ಟೊಸ್ ಕಾರು ಮಾದರಿಗಳನ್ನು ಮಾರಾಟ ಮಾಡಿರುವುದರೊಂದಿಗೆ ಮತ್ತೊಂದು ಹೊಸ ದಾಖಲೆಗೆ ಕಾರಣವಾಗಿದೆ.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿ ಅಗಸ್ಟ್ ಅವಧಿಗೆ 1 ವರ್ಷ ಪೂರೈಸಿದ್ದು, ಮೊದಲ ಬಾರಿಗೆ ಒಂದು ತಿಂಗಳ ಅವಧಿಯಲ್ಲಿ ಸೆಲ್ಟೊಸ್ ಕಾರು ಮಾರಾಟದಲ್ಲಿ 10 ಸಾವಿರಕ್ಕೂ ಅಧಿಕ ಕಾರು ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಈ ಹಿಂದೆ ಪ್ರತಿ ತಿಂಗಳು 6 ಸಾವಿರದಿಂದ 8 ಸಾವಿರ ಯುನಿಟ್ ಸರಾಸರಿ ಮಾರಾಟ ಹೊಂದಿದ್ದ ಸೆಲ್ಟೊಸ್ ಕಾರು ಮಾರಾಟವು ಇದೀಗ ಸಂಕಷ್ಟದ ಪರಿಸ್ಥಿತಿಯಲ್ಲೂ ಒಂದೇ ತಿಂಗಳಿನಲ್ಲಿ 10 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಒಟ್ಟು 1 ಲಕ್ಷ ಯುನಿಟ್‌ ಮಾರಾಟ ಗುರಿ ತಲುಪಿದೆ.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಕರೋನಾ ವೈರಸ್ ಅಬ್ಬರದಿಂದಾಗಿ ಬಹುತೇಕ ಕಾರು ಬಳಕೆದಾರರು ಸ್ವಂತ ವಾಹನಗಳ ಮುಖ ಮಾಡುತ್ತಿರುವುದೇ ಹೊಸ ವಾಹನಗಳ ಮಾರಾಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದ್ದು, ಆಟೋ ಕಂಪನಿಗಳು ಕೂಡಾ ಕುಸಿದಿದ್ದ ವಾಹನ ಮಾರಾಟ ಸುಧಾರಣೆಗಾಗಿ ವಿವಿಧ ಆಫರ್‌ಗಳನ್ನು ನೀಡಿದ್ದ ಹಿನ್ನಲೆಯಲ್ಲಿ ಚೇತರಿಕೆ ಕಂಡುಬಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಮತ್ತು ಕಾರ್ನಿವಾಲ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದ್ದು, ಸ್ಮಾರ್ಟ್ ಫೋನ್ ಅಥವಾ ಸ್ಮಾರ್ಟ್ ವಾಚ್ ಮೂಲಕವೇ ಕಾರಿನ ಬಹುತೇಕ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡುವ ಮೂಲಕ ವಾಹನ ಕಳ್ಳತನದಂತಹ ಸಮಸ್ಯೆಗಳಿಗೆ ಬ್ರೇಕ್ ಹಾಕಬಹುದು.

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಸದ್ಯ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಕನೆಕ್ಟೆಡ್ ಫೀಚರ್ಸ್‌ಗಳನ್ನು ಕಾರ್ನಿವಾಲ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ಮತ್ತು ಸೆಲ್ಟೊಸ್‌ ಕಾರಿನ ಹೈಎಂಡ್ ಮಾದರಿಗಳಲ್ಲಿ ಮಾತ್ರವೇ ನೀಡಲಾಗುತ್ತಿದ್ದು, ಸಾಮಾನ್ಯ ಕಾರುಗಳಿಗಿಂತಲೂ ಕನೆಕ್ಟೆಡ್ ಫೀಚರ್ಸ್ ಹೊಂದಿರುವ ಕಾರುಗಳೇ ಹೆಚ್ಚು ಮಾರಾಟವಾಗಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್

ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ 2020ರ ಸೆಲ್ಟೊಸ್ ಕಾರು ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.89 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.34 ಲಕ್ಷ ಬೆಲೆ ಹೊಂದಿದೆ.

Source: Team BHP

Most Read Articles

Kannada
English summary
Kia Seltos Anniversary Edition details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X