ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾದ ಕಿಯಾ ಮೋಟಾರ್ಸ್ ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ ಮೊದಲ ವರ್ಷದ ಸಂಭ್ರಮಕ್ಕಾಗಿ ವಿಶೇಷ ಸೌಲಭ್ಯವುಳ್ಳ ಆ್ಯನಿವರ್ಸರಿ ಎಡಿಷನ್ ಅನ್ನು ಬಿಡುಗಡೆ ಮಾಡಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಮಾದರಿಯನ್ನು ಕೇವಲ ಸೀಮಿತ ಸಂಖ್ಯೆಯಲ್ಲಿ ಮಾತ್ರ ಮಾರಾಟ ಮಾಡಲಿರುವ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಕಾರನ್ನು ಮಧ್ಯಮ ಕ್ರಮಾಂಕದ ಹೆಚ್‌ಟಿಎಕ್ಸ್ ವೆರಿಯೆಂಟ್‌ನಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ. ಇದೀಗ ಬಿಡುಗಡೆಯಾಗಲಿರುವ ಸ್ಪೆಷಲ್ ಎಡಿಷನ್ ಕೂಡಾ ಭರ್ಜರಿಯಾಗಿ ಮಾರಾಟಗೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ಮಾದರಿಯು ಸಾಮಾನ್ಯ ಮಾದರಿಗಿಂತಲೂ ಹಲವಾರು ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಆ್ಯನಿವರ್ಸರಿ ಎಡಿಷನ್ ಮಾದರಿಯು ಪ್ರಮುಖ ಮೂರು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಮಾದರಿಯು ರೂ. 13.75 ಲಕ್ಷ, ಮಧ್ಯಮ ಕ್ರಮಾಂಕದ ಮಾದರಿಯು ರೂ. 14.75 ಲಕ್ಷ ಮತ್ತು ಉನ್ನತ ಮಾದರಿಯು ರೂ. 14.85 ಲಕ್ಷ ಬೆಲೆ ಹೊಂದಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಸ್ಟ್ಯಾಂಡರ್ಡ್ ಮಾದರಿಗಿಂತ ಆ್ಯನಿವರ್ಸರಿ ಎಡಿಷನ್ ಮಾದರಿಯು ರೂ. 41 ಸಾವಿರ ಹೆಚ್ಚುವರಿ ಬೆಲೆ ಹೊಂದಿದ್ದು, ಹೆಚ್ಚುವರಿ ಬೆಲೆಗೆ ತಕ್ಕಂತೆ ವಿಶೇಷ ಮಾದರಿಯಲ್ಲಿ ಹಲವು ಹೆಚ್ಚುವರಿ ಫೀಚರ್ಸ್‌ಗಳನ್ನು ಜೋಡಣೆ ಮಾಡಿರುವುದು ಆ್ಯನಿವರ್ಸರಿ ಎಡಿಷನ್‌ ಆಕರ್ಷಣೆಯನ್ನು ಹೆಚ್ಚಿಸಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ತಾಂತ್ರಿಕವಾಗಿ ಸ್ಟ್ಯಾಂಡರ್ಡ್ ಮಾದರಿಯಂತೆಯೇ ಸೌಲಭ್ಯಗಳನ್ನು ಹೊಂದಿರುವ ಆ್ಯನಿವರ್ಸರಿ ಎಡಿಷನ್ ಮಾದರಿಯಲ್ಲಿ ಆಕರ್ಷಣೆಗಾಗಿ ಫಾಗ್ ಲೈಟ್, ಸೈಡ್ ಸ್ಕರ್ಟ್ಸ್, ಫ್ಲಕ್ಸ್ ಡ್ಯುಯಲ್ ಎಕ್ಸಾಸ್ಟ್, ರಿಯರ್ ಬಂಪರ್ ಮತ್ತು ಅಲಾಯ್ ವೀಲ್ಹ್ ಸುತ್ತ ಆರೇಂಜ್ ಆಕ್ಸೆಂಟ್ ನೀಡಲಾಗಿದೆ. ಹಾಗೆಯೇ ಟೈಲ್‌ಲೈಟ್ ಬಳಿಯಲ್ಲಿ ಆ್ಯನಿವರ್ಸರಿ ಎಡಿಷನ್ ಬ್ಯಾಡ್ಜ್, ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಹೊಸ ವಿನ್ಯಾಸದ ಬಂಪರ್ ಜೊತೆಗೆ ಫ್ಲಕ್ಸ್ ಸ್ಕ್ರೀಡ್ ಪ್ಲೇಟ್ ಜೋಡಿಸಲಾಗಿದ್ದು, ಸೈಡ್ ಸ್ಕರ್ಟ್ಸ್‌ಗಳನ್ನು ಸಹ ಸಿಲ್ವರ್ ಲೇಪನದೊಂದಿಗೆ ನೀಡಲಾಗಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಆ್ಯನಿವರ್ಸರಿ ಎಡಿಷನ್ ಮಾದರಿಯಲ್ಲಿ ಹೊಸ ಬಂಪರ್ ನೀಡಿರುವ ಹಿನ್ನಲೆಯಲ್ಲಿ ಕಾರಿನ ಉದ್ದಳತೆಯಲ್ಲಿ 60 ಎಂಎಂ ಹೆಚ್ಚಳವಾಗಿದ್ದು, ಹೊಸ ವಿನ್ಯಾಸಗಳಿಂದಾಗಿ ಕಾರಿನ ಒಳಭಾಗದಲ್ಲಿನ ಸ್ಥಳಾವಕಾಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಕಿಯಾ ಮೋಟಾರ್ಸ್ ಕಂಪನಿಯು ಆ್ಯನಿವರ್ಸರಿ ಎಡಿಷನ್ ಮಾದರಿಯ ಹೊರಭಾಗದಲ್ಲಿನ ಬದಲಾವಣೆಯೆಂತೆ ಒಳಭಾಗದ ವಿನ್ಯಾಸದಲ್ಲೂ ಕೆಲವು ಬದಲಾವಣೆಗಳನ್ನು ಪರಿಚಯಿಸಿದ್ದು, ಆಲ್ ಬ್ಲ್ಯಾಕ್ ಥೀಮ್ ಕಾರಿನ ಒಳ ನೋಟಕ್ಕೆ ಮತ್ತಷ್ಟು ಮೆರಗು ತಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಆಲ್ ಬ್ಲ್ಯಾಕ್ ಥೀಮ್‌ನಿಂದಾಗಿ ಕಾರಿನ ಒಳಭಾಗದ ಬಹುತೇಕ ವಿನ್ಯಾಸವು ಕಡುಗಪ್ಪು ಬಣ್ಣದಿಂದ ಕೂಡಿದ್ದು, ಐಷಾರಾಮಿ ಕಾರಿನ ಇಂಟಿರಿಯರ್‌ನಂತೆ ಭಾಸವಾಗುತ್ತದೆ. ಹನಿಕೊಂಬ್ ಮಾದರಿಯ ಲೆದರ್ ಆಸನಗಳು, ಡೋರ್ ಕಾರ್ಡ್ಸ್, ಡ್ಯಾಶ್‌ಬೋರ್ಡ್ ವಿನ್ಯಾಸವು ಕಪ್ಪು ಬಣ್ಣದಿಂದ ಕೂಡಿದ್ದು, ಸುರಕ್ಷಿತಾ ಸೌಲಭ್ಯಗಳು ಸ್ಟ್ಯಾಂಡರ್ಡ್ ಮಾದರಿಯಲ್ಲೇ ಪಡೆದುಕೊಂಡಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಸ್ಟ್ಯಾಂಡರ್ಡ್ ಹೆಚ್‌ಟಿಎಕ್ಸ್ ಮಾದರಿಯಲ್ಲಿರುವಂತೆ ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಲ್ಇಡಿ ಹೆಡ್‌ಲೈಟ್ಸ್ ಮತ್ತು ಎಲ್ಇಡಿ ಟೈಲ್ ಲೈಟ್ಸ್, ಕೀ ಲೆಸ್ ಎಂಟ್ರಿ, ಸನ್‌ರೂಫ್, ರಿಯರ್ ಎಸಿ ವೆಂಟ್ಸ್ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯವು ಈ ಕಾರಿನಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆ್ಯನಿವರ್ಸರಿ ಎಡಿಷನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ಖರೀದಿಗೆ ಲಭ್ಯವಿದ್ದು, ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಡೀಸೆಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಇದಲ್ಲದೆ ಹೊಸ ಕಾರಿಗೆ ಮತ್ತಷ್ಟು ಮೆರಗು ನೀಡಲು ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್, ಸ್ಟ್ಪೀಲ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್ ಜೊತೆಗೆ ಡ್ಯುಯಲ್ ಮಾದರಿಯಾಗಿ ಅರೋರಾ ಬ್ಲ್ಯಾಕ್ ಪರ್ಲ್ ಪೇಂಟ್ ಶೇಡ್ ಹಾಗೂ ಗಾರ್ಸಿರ್ ವೈಟ್ ಡ್ಯುಯಲ್ ಟೋನ್ ಬಣ್ಣಗಳನ್ನು ನೀಡಲಾಗಿದೆ.

ಮೊದಲ ವರ್ಷದ ಸಂಭ್ರಮಕ್ಕಾಗಿ ಕಿಯಾ ಸೆಲ್ಟೊಸ್ ಆ್ಯನಿವರ್ಸರಿ ಎಡಿಷನ್ ಬಿಡುಗಡೆ

ಇನ್ನು ಸ್ಟ್ಯಾಂಡರ್ಡ್ ಸೆಲ್ಟೊಸ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.89 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.34 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ 1.5-ಪೆಟ್ರೋಲ್, 1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ ಹೈ ಎಂಡ್ ಮಾದರಿಗಳಲ್ಲಿ 1.4-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳ ಆಯ್ಕೆ ಹೊಂದಿದೆ.

Most Read Articles

Kannada
English summary
Kia Seltos Anniversary Edition Launched. Read in Kannada.
Story first published: Thursday, October 15, 2020, 15:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X