ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಕಿಯಾ ಮೋಟಾರ್ಸ್ ಭಾರತದಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಹೊಸ ಸಂಚಲನವನ್ನು ಮೂಡಿಸಿದೆ. ಕಿಯಾ ಸೆಲ್ಟೋಸ್ ಎಸ್‍‍ಯುವಿ ಭಾರತದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಕಿಯಾ ಸೆಲ್ಟೋಸ್ ಎಸ್‍‍ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‍‍ಗಳಿಂದ ಗ್ರಾಹಕರ ಗಮನಸೆಳೆದಿದೆ. ಈ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳು ಪ್ರಕಟವಾಗಿತ್ತು. ಇದೀಗ ಐಎಬಿ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‍ಯುವಿಯ ಕೆಲವು ದಾಖಲೆಗಳನ್ನು ಬಹಿರಂಗಪಡಿಸಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ದಾಖಲೆಯಲ್ಲಿರುವ ಮಾಹಿತಿಯ ಪ್ರಕಾರ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‍ಯುವಿಯು ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಿದೆ. ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‍ಯುವಿಯು ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟವಾಗುವ ಸಾಧ್ಯತೆಗಳಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಬೇರೆ ಯಾವುದೇ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈ ಎಲೆಕ್ಟ್ರಿಕ್ ಎಸ್‍ಯುವಿಯು ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ. ಹೊಸ ಸೆಲ್ಟೋಸ್ ಇವಿಯನ್ನು ಹೊಸ ತಲೆಮಾರಿನ ಕಿಯಾ ಕೆಎಕ್ಸ್ 3 ಇವಿ ಎಂದು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು.

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಪ್ರಸ್ತುತ ತಲೆಮಾರಿನ ಕಿಯಾ ಕೆಎಕ್ಸ್ 3 ಇವಿ ಮಾದರಿಯಲ್ಲಿ 45.2 ಕಿಲೋವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ ಅನ್ನು ಅಳವಡಿಸಲಾಗಿದೆ. ಇದನ್ನು 11 ಬಿಹೆಚ್‌ಪಿ ಪವರ್ ಮತ್ತು 285 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಎಲೆಕ್ಟ್ರಿಕ್ ಮೋಟರ್‌ಗೆ ಜೋಡಿಸಲ್ಪಟ್ಟಿದೆ.

MOST READ: ಅನಾವರಣವಾಯ್ತು ಮರ್ಸಿಡಿಸ್ ಎಎಂಜಿ ಇ 63 ಎಸ್ ಫೇಸ್‌ಲಿಫ್ಟ್ ಕಾರು

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಈ ಎಸ್‍ಯುವಿಯು ಒಂದೇ ಚಾರ್ಜ್‌ನಲ್ಲಿ 300 ಕಿ.ಮೀ ಚಲಿಸುತ್ತದೆ. ಈ ಎಸ್‍ಯುವಿಯು ಗಂಟೆಗೆ 150 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಚೀನಾದ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಸ್ಟ್ಯಾಂಡರ್ಡ್ ಮತ್ತು ಲಾಂಗ್-ರೇಂಜ್ ಎಂಬ ಎರಡು ರೂಪಾಂತರಗಳಲ್ಲಿ ಪರಿಚಯಿಸಬಹುದು ಎಂದು ವರದಿಯಲ್ಲಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಿಯಾ ಸೆಲ್ಟೋಸ್‍ ಎಸ್‍‍ಯು‍ವಿಯನ್ನು ಬಿಎಸ್-6 ಎಂಜಿನ್‍‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗಳು ಸೇರಿವೆ. ಎಸ್‍‍ಯು‍ವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಇನ್ನೂ 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿವೆ.

ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ

ಬಹಿರಂಗಗೊಂಡ ದಾಖಲೆಗಳ ಪ್ರಕಾರ ಚೀನಾ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಯಾಗುವುದು ಖಚಿತವಾಗಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ.

Article Published On: Saturday, June 20, 2020, 17:29 [IST]
English summary
Kia Seltos Electric SUV Confirmed For Global Market. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+