400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಹೊಸ ಸಂಚಲನವನ್ನು ಮೂಡಿಸಿದೆ. ಕಿಯಾ ಮೋಟಾರ್ಸ್ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿ ಭಾರತದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಕಿಯಾ ಸೆಲ್ಟೋಸ್ ಎಸ್‍‍ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‍‍ಗಳಿಂದ ಗ್ರಾಹಕರ ಗಮನಸೆಳೆದಿದೆ. ಭಾರತದ ಎಸ್‍‍ಯುವಿ ಸೆಗ್‍‍ಮೆಂಟ್‍‍ನಲ್ಲಿ ಕಿಯಾ ಸೆಲ್ಟೋಸ್ ಅತಿ ಹೆಚ್ಚು ಮಾರಾಟವಾಗುವ ವಾಹನವಾಗಿದೆ. ಇದೀಗ ಕಿಯಾ ಮೋಟಾರ್ಸ್ ಭಾರತದಲ್ಲಿ ಎಲೆಕ್ಟ್ರಿಕ್ ಸೆಲ್ಟೋಸ್ ಎಸ್‍‍ಯುವಿಯನ್ನು ಬಿಡುಗಡೆಗೊಳಿಸಲು ಚಿಂತನೆ ನಡೆಸಿದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಭಾರತದಲ್ಲಿ ಈಗಾಗಲೇ ಹಲವಾರು ಪ್ರಮುಖ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುವುದರಲ್ಲಿ ನಿರತವಾಗಿವೆ. ಇನ್ನೂ ಕೆಲವು ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಿವೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಕೇವಲ ವಾಹನ ಉತ್ಪಾದಕರು ಅಲ್ಲದೇ ಗ್ರಾಹಕರು ಕೂಡ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡಿದ್ದಾರೆ. ಇದ್ದರಿಂದ ಕಿಯಾ ಮೋಟಾರ್ಸ್ ಕಂಪನಿಯ ಯಶ್ವಸಿ ಸೆಲ್ಟೋಸ್ ಎಸ್‍‍ಯುವಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಚಿಂತಿಸಿದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಆದರೆ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಕಾರು ಉತ್ಪಾದನೆಯ ಪ್ರಾರಂಭಿಕ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಿಯಾ ಮೋಟಾರ್ಸ್ ತನ್ನ ಎಲೆಕ್ಟ್ರಿಕ್ ಸೆಲ್ಟೋಸ್ ಎಸ್‍‍ಯುವಿಯನ್ನು ಉತ್ಪಾದಿಸಿ, ಮೊದಲ ವರ್ಷದಲ್ಲಿ ಕೇವಲ 10,000 ಸೀಮಿತ ಯುನಿಟ್‍‍ಗಳನ್ನು ಬಿಡುಗಡೆಗೊಳಿಸಲಿದೆ. ಬೇಡಿಕೆಯ ಅನುಸಾರವಾಗಿ ನಂತರದ ಹಂತದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಹೂಸ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಆವೃತ್ತಿಯಲ್ಲಿ 150 ಕಿಲೋವ್ಯಾಟ್ ಎಲೆಕ್ಟ್ರಿಕ್ ಮೋಟರ್ ನೊಂದಿಗೆ 64 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಬಹುದು. ಈ ಕಿಯಾ ಸೆಲ್ಟೋಸ್ ಇವಿ ಆವೃತ್ತಿಯು 400 ಕಿ.ಮೀ ಮೈಲೇಜ್ ಅನ್ನು ಹೂಂದಿರುತ್ತದೆ ಎಂದು ಗಾಡಿವಾಡಿ ವರದಿ ಮಾಡಿದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಿಯಾ ಸೆಲ್ಟೋಸ್‍ ಎಸ್‍‍ಯು‍ವಿಯನ್ನು ಬಿಎಸ್-6 ಎಂಜಿನ್‍‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗಳು ಸೇರಿವೆ. ಎಸ್‍‍ಯು‍ವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ಇನ್ನೂ 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿವೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

1.5 ಲೀಟರ್ ಪೆಟ್ರೋಲ್ ಸಿವಿ‍ಟಿ, 1.5 ಲೀಟರ್ ಡೀಸೆಲ್‍ಗೆ ಐವಿ‍ಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಕಿಯಾ ಮೋಟಾರ್ಸ್‍ನ ಈ ಕಾರು

ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಿಯಾ ಸೆಲ್ಟೊಸ್ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ 500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Wednesday, April 1, 2020, 13:08 [IST]
English summary
Kia Seltos EV Likely To Have 400 Km Range, 64 kWh Battery Pack. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+