ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಮೋಟಾರ್ಸ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಯಶ್ವಸಿಯಾಗಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಕಿಯಾ ಸೆಲ್ಟೋಸ್ ಎಸ್‍‍ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿ ದಾಖಲೆಗಳ ಸರದಾರ ಆಗಿದೆ. ಭಾರತದ ಗ್ರಾಹಕರು ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಕಿಯಾ ಸೆಲ್ಟೋಸ್ ಎಸ್‍ಯುವಿಯು ಬಿಡುಗಡೆಗೊಂಡು ಕೇವಲ 11 ತಿಂಗಳ ಬರೊಬ್ಬರಿ 1 ಲಕ್ಷ ಯುನಿಟ್ ಗಳು ಮಾರಾಟವಾಗಿ ಮತ್ತೊಂದು ಹೊಸ ದಾಖಲೆಯನ್ನು ಸೃಷ್ಟಿಸಿದೆ. ಎಸ್‍ಯುವಿ ವಿಭಾಗದ ಹಲವು ದಾಖಲೆಯನ್ನು ಕಿಯಾ ಸೆಲ್ಟೋಸ್ ಬ್ರೇಕ್ ಮಾಡಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

2020ರ ಆಗಸ್ಟ್ ತಿಂಗಳಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯ 10,655 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.71 ರಷ್ಟು ಹೆಚ್ಚಾಗಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಕಿಯಾ ಸೆಲ್ಟೋಸ್ ಆಗಸ್ಟ್ ತಿಂಗಳ ಮಾರಾಟವು ಭಾರತದ ಟಾಪ್ 10 ಕಾರುಗಳ ಮಾರಾಟ ಪಟ್ಟಿಯನ್ನು ಪ್ರವೇಶಿಸಲು ಸಹಾಯ ಮಾಡಿತು. ಮಿಡ್ ಎಸ್‍ಯುವಿಗಳ ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಏಳನೇ ಸ್ಥಾನನವನ್ನು ಪಡೆದುಕೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ದೇಶಿಯ ಮಾರುಕಟ್ಟೆಯ ಮಿಡ್ ಎಸ್‍ಯುವಿಗಳ ಮಾರಾಟದಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲನೇ ಸ್ಥಾನವನ್ನು ಕಿಯಾ ಸೆಲ್ಟೋಸ್ ಸೋದರಸಂಬಂಧಿ ಎಂದೇ ಹೇಳಬಹುದಾದ ಹ್ಯುಂಡೈ ಕ್ರೆಟಾ ಪಡೆದುಕೊಂಡಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಕಿಯಾ ಸೆಲ್ಟೋಸ್‍ ಎಸ್‍‍ಯು‍ವಿಯನ್ನು ಬಿಎಸ್-6 ಎಂಜಿನ್‍‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗಳು ಸೇರಿವೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಎಸ್‍‍ಯು‍ವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಎಲ್ಲಾ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿ‍ಟಿ, 1.5 ಲೀಟರ್ ಡೀಸೆಲ್‍ಗೆ ಐವಿ‍ಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಕಿಯಾ ಸೆಲ್ಟೋಸ್ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಸೆಲ್ಟೋಸ್‍‍ನ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಅಳವಡಿಸಲಾಗಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಕಿಯಾ ಸೆಲ್ಟೋಸ್

ಕಿಯಾ ಸೆಲ್ಟೊಸ್ ಎಸ್‍ಯುವಿಯು ಭಾರತೀಯು ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Kia Seltos Posted 71% Sales Growth In August 2020. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X