ಹೊಸ ಕಾರು ಖರೀದಿಗೆ ಬುಕ್ಕಿಂಗ್ ಹೆಚ್ಚಳ- ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯೆಂತೆ ವಾಹನ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯು ಪುನಾರಂಭಗೊಡಿದ್ದು, ಕಿಯಾ ಮೋಟಾರ್ಸ್ ಕೂಡಾ ತನ್ನ ಜನಪ್ರಿಯ ಸೆಲ್ಟೊಸ್ ಕಾರು ಉತ್ಪಾದನೆ ಪುನಾರಂಭಿಸಿರುವುದಲ್ಲದೇ ಮಾರಾಟ ಪ್ರಕ್ರಿಯೆಗೂ ಮರುಚಾಲನೆ ನೀಡಿದೆ.

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಕರೋನಾ ವೈರಸ್ ಮಟ್ಟಹಾಕಲು ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಕಿಯಾ ಮೋಟಾರ್ಸ್ ಕೂಡಾ ಇದೀಗ ಕಾರು ಉತ್ಪಾದನೆ ಮತ್ತು ಮಾರಾಟಕ್ಕೆ ಮರುಚಾಲನೆ ನೀಡಿದ್ದು, ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿದೆ.

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಸದ್ಯ ಉತ್ಪಾದನೆ ಮತ್ತು ಮಾರಾಟ ಮಾಡುತ್ತಿರುವ ಉದ್ಯೋಗ ಸ್ಥಳಗಳಲ್ಲಿ ಶೇ.50ಕ್ಕಿಂತಲೂ ಕಡಿಮೆ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದ್ದು, ವೈರಸ್ ತಡೆಗಾಗಿ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಕೈಗೊಂಡು ಗ್ರಾಹಕರ ಮನೆ ಬಾಗಿಲಿಗೆ ವಾಹನ ಉತ್ಪನ್ನಗಳನ್ನು ವಿತರಣೆ ಮಾಡಲಾಗುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಕಾರು ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ಕಾರು ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ರಸಾಯನಿಕಗಳಿಂದ ಸಿಂಪರಣೆ ಮಾಡಿ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸುತ್ತಿದೆ.

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಇನ್ನು ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದ್ದು, ಕಿಯಾ ಮೋಟಾರ್ಸ್ ಕೂಡಾ ಕೆಲವು ಮಹತ್ವದ ನಿರ್ಧಾರಗಳೊಂದಿಗೆ ಕಾರು ಮಾರಾಟಕ್ಕೆ ಮರುಚಾಲನೆ ನೀಡಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ಕೂಡಾ ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ. ಇದರಿಂದ ಮುಂಬರುವ ದಿನಗಳು ಮತ್ತಷ್ಟು ಕಠಿಣವಾಗಿರಲಿವೆ ಎನ್ನಲಾಗುತ್ತಿದ್ದು, ಕರೋನಾ ವೈರಸ್‌ನಿಂದ ಮುಕ್ತಿ ಹೊಂದುವ ತನಕವು ಈ ಸಂಕಷ್ಟ ತಪ್ಪಿದಲ್ಲ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಸೆಲ್ಟೊಸ್ ಉತ್ಪಾದನೆ ಪುನಾರಂಭಿಸಿದ ಕಿಯಾ ಮೋಟಾರ್ಸ್

ಈ ಹಿನ್ನಲೆಯಲ್ಲಿ ಹೊಸ ವಾಹನ ಮಾರಾಟದಲ್ಲಿ ಚೇತರಿಕೆ ಕಾಣಲು ಹಲವಾರು ಡಿಸ್ಕೌಂಟ್ ಆಫರ್‌ಗಳನ್ನು ನೀಡುತ್ತಿರುವ ಆಟೋ ಕಂಪನಿಗಳು ಸುಲಭ ಕಡಿಮೆ ಬಡ್ಡಿದರ ಸಾಲ-ಸೌಲಭ್ಯ ಸೇರಿದಂತೆ, ಧೀರ್ಘಾವಧಿಯ ಇಎಂಐ ಆಯ್ಕೆಗಳನ್ನು ನೀಡುತ್ತಿವೆ.

Most Read Articles

Kannada
English summary
Kia Seltos Production Restarts As Plant Commences Operations. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X