ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಕಿಯಾ ಸೆಲ್ಟೊಸ್ ಕಾರು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಇದುವರೆಗೆ ಹೊಸ ಕಾರು ಖರೀದಿಗೆ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

2019ರ ಅಗಸ್ಟ್ ಕೊನೆಯಲ್ಲಿ ಬಿಡುಗಡೆಯಾಗಿದ್ದ ಕಿಯಾ ಸೆಲ್ಟೊಸ್ ಕಾರು ಇದುವರೆಗೂ 45 ಯುನಿಟ್ ಮಾರಾಟವಾಗಿದ್ದು, ಬುಕ್ಕಿಂಗ್ ಆಧಾರದ ಮೇಲೆ ಹೊಸ ಕಾರಿನ ವಿತರಣೆಯು ಜೋರಾಗಿದೆ. ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿರುವ ಸೆಲ್ಟೊಸ್ ಕಾರು ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಈ ಮೂಲಕ ಸೆಲ್ಟೊಸ್ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದ್ದು, ಅತಿ ಕಡಿಮೆ ಅವಧಿಯಲ್ಲಿ 45 ಸಾವಿರ್ ಯುನಿಟ್ ಮಾರಾಟ ಮಾಡುವ ಮೂಲಕ ಅಚ್ಚರಿಯ ಬೆಳವಣೆಗೆ ಸಾಧಿಸಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಇನ್ನು ಹೆಚ್ಚುತ್ತಿರುವ ವಾಹನ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಹೆಚ್ಚಳಕ್ಕೆ ಮುಂದಾಗಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಜನವರಿ 1ರಿಂದಲೇ ಅನ್ವಯವಾಗುವಂತೆ ಎಕ್ಸ್‌ಶೋರೂಂ ದರದಲ್ಲಿ ಶೇ.2ರಿಂದ ಶೇ.3 ರಷ್ಟು ಏರಿಕೆ ಮಾಡಿದ್ದು, ಕಿಯಾ ಮೋಟಾರ್ಸ್ ಸಂಸ್ಥೆಯು ಸಹ ಇದೇ ಮೊದಲ ಬಾರಿಗೆ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಹೊಸ ದರ ಪಟ್ಟಿ ಪ್ರಕಾರ, ಕಿಯಾ ಸೆಲ್ಟೊಸ್ ಕಾರು ರೂ.20 ಸಾವಿರದಿಂದ ರೂ.35 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದಿದ್ದು, ಬೆಲೆ ಹೆಚ್ಚಳ ನಂತರ ಸೆಲ್ಟೊಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.69 ಲಕ್ಷದಿಂದ ರೂ.9.89 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಹೊಸ ದರವು ಜನವರಿ 1ರಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದ್ದು, ಡಿಸೆಂಬರ್ 31ರ ಒಳಗಾಗಿ ಬುಕ್ಕಿಂಗ್ ಮಾಡಿರುವ ಎಲ್ಲಾ ಗ್ರಾಹಕರಿಗೂ ಹಳೆಯ ದರದಲ್ಲೇ ಕಾರು ವಿತರಣೆಯಾಗಲಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.89 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 17.34 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ. ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಕಿಯಾ ಸೆಲ್ಟೊಸ್

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

Most Read Articles

Kannada
English summary
The Kia Seltos has started its new year with a bang. The SUV has reached a milestone by crossing 1,00,000 units as far as bookings are concerned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X