1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಭಾರತೀಯ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಸೆಲ್ಟೋಸ್ ಯಶ್ವಸಿಯಾಗಿದೆ.

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಕಿಯಾ ಸೆಲ್ಟೋಸ್ ಎಸ್‍‍ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿ ದಾಖಲೆಗಳ ಸರದಾರ ಆಗಿದೆ. ಭಾರತದ ಗ್ರಾಹಕರು ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದೆ.

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ 1.25 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಿಯಾ ಸೆಲ್ಟೋಸ್ ಭಾರತದಲ್ಲಿ ಬಿಡುಗಡೆಗೊಂಡ ಕೇವಲ 14 ತಿಂಗಳ ನಂತರ ಮಾರಾಟದಲ್ಲಿ ಮತ್ತೊಂದು ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಎಸ್‍ಯುವಿ ವಿಭಾಗದ ಹಲವು ದಾಖಲೆಯನ್ನು ಕಿಯಾ ಸೆಲ್ಟೋಸ್ ಬ್ರೇಕ್ ಮಾಡಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಕಿಯಾ ಸೆಲ್ಟೋಸ್‍ ಎಸ್‍‍ಯು‍ವಿಯನ್ನು ಬಿಎಸ್-6 ಎಂಜಿನ್‍‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗಳು ಸೇರಿವೆ.

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಎಸ್‍‍ಯು‍ವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಎಲ್ಲಾ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿ‍ಟಿ, 1.5 ಲೀಟರ್ ಡೀಸೆಲ್‍ಗೆ ಐವಿ‍ಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಕಿಯಾ ಸೆಲ್ಟೋಸ್ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಸೆಲ್ಟೋಸ್‍‍ನ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಅಳವಡಿಸಲಾಗಿದೆ.

1.25 ಲಕ್ಷ ಗಡಿ ದಾಟಿದ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾರಾಟ

ಕಿಯಾ ಸೆಲ್ಟೊಸ್ ಎಸ್‍ಯುವಿಯು ಭಾರತೀಯು ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಕಿಯಾ ಸೆಲ್ಟೋಸ್ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ.

More from DriveSpark

Article Published On: Tuesday, November 10, 2020, 20:45 [IST]
English summary
Kia Seltos Sales Cross 1.25 Lakh Units In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+