ಕಾರು ಮಾರಾಟದಲ್ಲಿ ಮೊದಲ ಬಾರಿಗೆ ಕುಸಿತ ಕಂಡ ಕಿಯಾ ಸೆಲ್ಟೋಸ್
ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾದ ಕಿಯಾ ಸೆಲ್ಟೋಸ್, ಮಾರಾಟದಲ್ಲಿ ಮಾರುತಿ ವಿಟಾರಾ ಬ್ರಿಝಾ ಮತ್ತು ಹ್ಯುಂಡೈ ಕ್ರೆಟಾವನ್ನು ಮೀರಿಸುವ ಮೂಲಕ ದೇಶದ ಅತಿ ಹೆಚ್ಚು ಮಾರಾಟವಾದ ಎಸ್‍ಯುವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಕಿಯಾ ಸೆಲ್ಟೋಸ್ ಕಳೆದ ನವೆಂಬರ್ ತಿಂಗಳಲ್ಲಿ ಭರ್ಜರಿ ಮಾರಾಟವಾಗಿತ್ತು. ಆದರೆ ಕಳೆದ ವರ್ಷದ ಕೊನೆಯ ತಿಂಗಳಾದ ಡಿಸೆಂಬರ್‍ನಲ್ಲಿ ಕಿಯಾ ಸೆಲ್ಟೋಸ್ ಮಾರಾಟದಲ್ಲಿ ಕುಸಿತ ಕಂಡಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಯ 4,645 ಯುನಿಟ್‍ಗಳು ಮಾರಾಟವಾಗಿವೆ. ಆದರೆ ಕಳೆದ ನವೆಂಬರ್ ತಿಂಗಳಲ್ಲಿ 14,005 ಯುನಿಟ್‍ಗಳು ಮಾರಾಟವಾಗಿತ್ತು. ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟವನ್ನು ಕಳೆದ ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಶೇ.67 ರಷ್ಟು ಇಳಿಕೆಯಾಗಿದೆ.

ಇನ್ನೂ ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕಿಯಾ ಸೆಲ್ಟೋಸ್‍ನ 12,854 ಯುನಿಟ್‍ಗಳು ಮಾರಾಟವಾಗಿತ್ತು. ಕಿಯಾ ಸೆಲ್ಟೋಸ್ ಶಕ್ತಿಶಾಲಿ ಎಂಜಿನ್, ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಮತ್ತು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಯು ಇತ್ತೀಚೆಗೆ ಎಎನ್‍ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸಂಪೂರ್ಣ 5 ಸ್ಟಾರ್ ರೇಟಿಂಗ್ ಅನ್ನು ಪಡೆದಿದೆ.

ಇದರಿಂದ ಕಿಯಾ ಸೆಲ್ಟೋಸ್ ಹೆಚ್ಚು ಸುರಕ್ಷಿತವಾತ ವಾಹನವೆಂದು ಸಾಬೀತಾಗಿದೆ. ಈ ಎಸ್‍ಯುವಿಯ ಮುಂಭಾಗದಲ್ಲಿ ಬ್ಲಾಕ್ ಗ್ರಿಲ್ ಅನ್ನು ಅಳವಡಿಸಲಾಗಿದೆ. ಕೆಂಪು ಬಣ್ಣದ ಲೆದರ್ ಸೀಟ್ ಅನ್ನು ಅಳವಡಿಸಲಾಗಿದೆ. ಕಿಯಾ ಸೆಲ್ಟೋಸ್ ಎಸ್‍ಯುವಿಯನ್ನು ಬಿಎಸ್-6 ಎಂಜಿನ್‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍ಗಳು ಸೇರಿವೆ. ಎಸ್‍ಯುವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿಎಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಇನ್ನೂ 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಹೊಂದಿವೆ.

1.5 ಲೀಟರ್ ಪೆಟ್ರೋಲ್ ಸಿವಿಟಿ, 1.5 ಲೀಟರ್ ಡೀಸೆಲ್‍ಗೆ ಐವಿಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.
MOST READ: ದುಬಾರಿ ಬೆಂಝ್ ಕಾರನ್ನು ಹೆಲಿಕಾಪ್ಟರ್ ಮೂಲಕ ಪುಡಿ ಮಾಡಿದ ಭೂಪ

ಸುರಕ್ಷತಾ ಫೀಚರ್ಸ್‍ಗಳು
ಕಿಯಾ ಸೆಲ್ಟೋಸ್ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್‍ಗಳನ್ನು ಅಳವಡಿಸಲಾಗಿದೆ.
MOST READ: ಹೊಸ ಲುಕ್‍ನಲ್ಲಿ ಮಿಂಚಿದ ಮಾಡಿಫೈ ಕಿಯಾ ಸೆಲ್ಟೋಸ್

ಫೀಚರ್ಸ್‍ಗಳು
ಸೆಲ್ಟೋಸ್‍ನ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಅಳವಡಿಸಲಾಗಿದೆ.
MOST READ: ಕಳ್ಳತನವಾಗಿದ್ದ ಕಾರು ಫಾಸ್ಟ್‌ಟ್ಯಾಗ್‌ನಿಂದಾಗಿ ವಾಪಸ್ ಸಿಕ್ಕಿದ್ದೆ ಒಂದು ರೋಚಕ

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ ಕಿಯಾ ಸೆಲ್ಟೊಸ್ ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications