Just In
Don't Miss!
- News
ಕೊರೊನಾ ಬಂದಿದ್ದು ಚೀನಾದಿಂದ ಅಲ್ಲ... ಶಿವನಿಂದ, ನಾನೇ ಶಿವ!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ತಿಂಗಳ ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ಎದುರು ಕುಸಿತ ಕಂಡ ಕಿಯಾ ಸೆಲ್ಟೋಸ್
ಭಾರತೀಯ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಎಸ್‍ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಸೆಲ್ಟೋಸ್ ಯಶ್ವಸಿಯಾಗಿತ್ತು.

ಭಾರತದ ಗ್ರಾಹಕರು ಈ ಎಸ್‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಕಿಯಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಸೆಲ್ಟೋಸ್ ಎಸ್‍ಯುವಿಯ 1.25 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಿಯಾ ಸೆಲ್ಟೋಸ್ ಭಾರತದಲ್ಲಿ ಬಿಡುಗಡೆಗೊಂಡ ಕೇವಲ 14 ತಿಂಗಳ ನಂತರ ಈ ಹೊಸ ಮೈಲಿಗಲ್ಲನ್ನು ಸಾಧಿಸಿತ್ತು.

ಆದರೆ 2020ರ ನವೆಂಬರ್ ತಿಂಗಳಲ್ಲಿ ಕಿಯಾ ಸೆಲ್ಟೋಸ್ ಅನ್ನು ಹಿಂದಿಕ್ಕಿ ದೇಶದಲ್ಲಿ ಹೆಚ್ಚು ಮಾರಾಟವಾದ ಎಸ್‍ಯುವಿ ಹ್ಯುಂಡೈ ಕ್ರೆಟಾ ಆಗಿದೆ. ಕಳೆದ ತಿಂಗಳು ಹ್ಯುಂಡೈ ಕ್ರೆಟಾದ ಒಟ್ಟು 12,017 ಯುನಿಟ್‌ಗಳನ್ನು ಮಾರಾಟ ಗೊಳಿಸಿವೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಕ್ರೆಟಾದ ಒಟ್ಟು 6,684 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಿತು.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2020ರ ಮಾರ್ಚ್ ತಿಂಗಳಲ್ಲಿ ಹೊಸ ತಲೆಮಾರಿನ ಕ್ರೆಟಾವನ್ನು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆಗೊಳಿಸಿತ್ತು. ಹೊಸ ತಲೆಮಾರಿನ ಕ್ರೆಟಾ ಎಸ್‍ಯುವಿ ಬಿಡುಗಡೆಯಾದ ಬಳಿಕ ಮಾರಾಟವು ಎರಡು ಪಟ್ಟು ಹೆಚ್ಚಾಗಿದೆ.

ಹೊಸ ತಲೆಮಾರಿನ ಕ್ರೆಟಾ ಬಿಡುಗಡೆಯಾದ ಬಳಿಕ ಕಿಯಾ ಸೆಲ್ಟೋಸ್ ದಾಖಲೆಯ ಮಟ್ಟದ ಮಾರಾಟದ ಒಟಕ್ಕೆ ಸಣ್ಣ ಮಟ್ಟದ ಬ್ರೇಕ್ ಬಿದ್ದಿದೆ. 2020ರ ನವೆಂಬರ್ ತಿಂಗಳಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯ 9,205 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಕಿಯಾ ಸೆಲ್ಟೋಸ್ ಎಸ್‍ಯುವಿ ಶೇ.34ರಷ್ಟು ಕುಸಿತವನ್ನು ಕಂಡಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಹ್ಯುಂಡೈನ ಅಂಗಸಂಸ್ಥೆಯಾಗಿದೆ ಕಿಯಾ ಮೋಟಾರ್ಸ್. ಇದರಿಂದ ಹುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಸಹೋದರ ಎಸ್‍ಯುವಿಗಳೆಂದು ಕರೆಯಬಹುದು. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಈ ಎರಡು ಸಹೋದರರು ಮಾರಾಟದಲ್ಲಿ ಸೆಣಸಾಡುತ್ತಿದ್ದಾರೆ.

ಕಿಯಾ ಸೆಲ್ಟೋಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಬಿಎಸ್-6 ಎಂಜಿನ್‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍ಗಳು ಸೇರಿವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಎಸ್‍ಯುವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿಎಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಎಲ್ಲಾ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿಟಿ, 1.5 ಲೀಟರ್ ಡೀಸೆಲ್‍ಗೆ ಐವಿಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಕಿಯಾ ಸೆಲ್ಟೋಸ್ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್‍ಗಳನ್ನು ಅಳವಡಿಸಲಾಗಿದೆ.

ಸೆಲ್ಟೋಸ್‍ನ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಅಳವಡಿಸಲಾಗಿದೆ.

ಕಿಯಾ ಸೆಲ್ಟೊಸ್ ಎಸ್‍ಯುವಿಯು ಭಾರತೀಯು ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಕಿಯಾ ಸೆಲ್ಟೋಸ್ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ.