ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ ಮೋಟಾರ್ಸ್

ಅತಿ ಕಡಿಮೆ ಅವಧಿಯಲ್ಲಿ 1 ಲಕ್ಷ ಕಾರು ಮಾರಾಟ ಗುರಿ ತಲುಪಲಿರುವ ಕಿಯಾ ಮೋಟಾರ್ಸ್ ಹೊಸ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಉನ್ನತೀಕರಣಗೊಳ್ಳಲಿದ್ದು, ಇದೇ ವರ್ಷ ಜೂನ್ ಅಥವಾ ಜುಲೈ ಹೊತ್ತಿಗೆ ಬಿಡುಗಡೆಯಾಗಲಿದೆ.

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ನವೀಕರಣಗೊಂಡ ಸೆಲ್ಟೊಸ್ ಆವೃತ್ತಿಯಲ್ಲಿ ಈ ಬಾರಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಬದಲಾವಣೆ ಪರಿಚಯಿಸಲಾಗುತ್ತಿದ್ದು, ಬೆಸ್ ಮಾಡೆಲ್‌ಗಳಲ್ಲಿ ಡ್ಯುಯಲ್ ಎಕ್ಸಾಸ್ಟ್, ಮೆಟಲ್ ಸ್ಕಫ್, ಪವರ್ಡ್ ಸನ್‌ರೂಫ್ ಪಡೆದುಕೊಳ್ಳಲಿವೆ. ಹಾಗೆಯೇ ಹೈ ಎಂಡ್ ಮಾದರಿಗಳಲ್ಲಿ ಎರಡು ಸಾಲುಗಳಲ್ಲೂ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್, ಸ್ಟ್ಯಾಂಡರ್ಡ್ ಆಗಿ ಎಮರ್ಜೆನ್ಸಿ ಸ್ಟಾಪ್ ಲೈಟಿಂಗ್, ಎಲ್‌ಇಡಿ ಕ್ಯಾಬಿನ್ ಲೈಟ್, ಎಸಿ ಕಂಟ್ರೊಲ್ ಮೇಲೆ ಫ್ಲಕ್ಸ್ ಮೆಟಲ್ ಗಾರ್ನಿಶ್ ಜೋಡಿಸಲಾಗಿದೆ.

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಹಾಗೆಯೇ ಆಲ್-ಬ್ಲ್ಯಾಕ್ ಇಂಟಿರಿಯರ್, ಸ್ಪೋರ್ಟಿ ಲುಕ್ ಹೆಚ್ಚಿಸಲು ರೆಡ್ ಕಾನ್ಟ್ರಾಸ್ಟಿಂಗ್ ಸ್ಟಿಚ್ ಮತ್ತು ರಿಮೋಟ್ ಎಂಜಿನ್ ಸ್ಟಾರ್ಟ್ ಆಪ್ಷನ್ ನೀಡಲಾಗುತ್ತಿದ್ದು, ಉನ್ನತೀಕರಣಗೊಂಡ ಸೆಲ್ಟೊಸ್ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ತುಸು ದುಬಾರಿ ಬೆಲೆ ಪಡೆದುಕೊಳ್ಳಲಿದೆ.

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಇನ್ನು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿರುವ ಸೆಲ್ಟೊಸ್ ಕಾರು ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.89 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 17.34 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ. ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಉನ್ನತೀಕರಿಸಲು ಮುಂದಾದ ಕಿಯಾ

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

Article Published On: Thursday, May 28, 2020, 11:47 [IST]
English summary
Kia Seltos To Recieve Feature Upgrades Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+