ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 18ರಂದು ಸೊನೆಟ್ ಕಾರು ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಭಾರೀ ಬದಲಾವಣೆಯ ನೀರಿಕ್ಷೆಯಲ್ಲಿದೆ.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಕಿಯಾ ಸೊನೆಟ್ ಆವೃತ್ತಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ನೀಡುವ ತವಕದಲ್ಲಿದೆ. ಮೂರು ಎಂಜಿನ್ ಆಯ್ಕೆಯೊಂದಿಗೆ ಒಟ್ಟು 17 ವೆರಿಯೆಂಟ್‌ಗಳನ್ನು ಹೊಂದಿರುವ ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಸೀಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದ್ದು, ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಿರುವುದಲ್ಲದೆ ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಕಾರಿನ ಖದರ್ ಹೆಚ್ಚಿಸಲು ಆಸಕ್ತ ಗ್ರಾಹಕರು ಹೆಚ್ಚುವರಿ ಆಕ್ಸೆಸರಿಸ್‌ಗಳನ್ನು ಆಯ್ಕೆ ಮಾಡುವ ಅವಕಾಶ ನೀಡಿದೆ. ಹೆಚ್ಚುವರಿ ಆಕ್ಸೆಸರಿಸ್‌ಗಳು ಕಾರಿನ ಬೆಲೆ ಹೊರತುಪಡಿಸಿ ಹೆಚ್ಚುವರಿಯಾಗಿ ಪಾವತಿ ಮಾಡಬೇಕಿದ್ದು, ಆಸಕ್ತ ಗ್ರಾಹಕರು ಕಾರಿನ ಸ್ಪೋರ್ಟಿ ವಿನ್ಯಾಸವನ್ನು ಹೆಚ್ಚಿಸಿಕೊಳ್ಳಬಹುದು.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಹೊಸ ಆಕ್ಸೆಸರಿಸ್ ಕಾರಿನ ಹೊರನೋಟವನ್ನು ಮತ್ತಷ್ಟು ಬಲಿಷ್ಠಗೊಳಿಸುವುದಕ್ಕಾಗಿ ಅಲ್ಲಲ್ಲಿ ಕ್ರೋಮ್ ನೀಡಲಾಗಿದ್ದು, ಗ್ಲೊಸರಿ ಬಾಕ್ಸ್, ಹುಡ್ ವೆಂಟ್ಸ್, ಬಂಪರ್ ಗಾರ್ಡ್, ಕ್ರೋಮ್ ಸ್ಟ್ರೀಪ್, ಡೋರ್ ವಿಸನರ್, ಫ್ರಂಟ್ ಫಾಗ್ ಲ್ಯಾಂಪ್, ಬೂಟ್ ಲಿಟ್, ರಿಯರ್ ರಿಪ್ಲೆಕ್ಟರ್ ಮತ್ತು ವೀಲ್ಹ್ ಆರ್ಚ್‌ಗಳನ್ನು ಸ್ಪೋರ್ಟಿ ಲುಕ್‌ನಲ್ಲಿ ಪಡೆದುಕೊಳ್ಳಬಹುದು.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಇನ್ನು ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸೊನೆಟ್ ಆಕ್ಸೆಸರಿಸ್‌ಗಳನ್ನು ಬಹಿರಂಗಪಡಿಸಿದ ಕಿಯಾ ಮೋಟಾರ್ಸ್

ಹೊಸ ಕಾರು ಸಾಮಾನ್ಯ ಮಾದರಿಯು ಎಂಜಿನ್ ಮತ್ತು ಫೀಚರ್ಸ್‌ಗಳಿಗೆ ಅನುಗುಣವಾಗಿ ದೆಹಲಿ ಪ್ರಕಾರ ರೂ.6.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12.60 ಲಕ್ಷ ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Article Published On: Friday, September 11, 2020, 16:51 [IST]
English summary
Kia Sonet Accessories Revealed Ahead Of Its Launch Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+