ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಕಿಯಾ ಮೋಟಾರ್ಸ್ ನಿರ್ಮಾಣದ ಸೊನೆಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮುಂದಿನ ವಾರ ಅಧಿಕೃತವಾಗಿ ಬಿಡುಗಡೆಗೊಳ್ಳಲು ಸಜ್ಜಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಬುಕ್ಕಿಂಗ್ ಪ್ರಕ್ರಿಯೆಯು ಜೋರಾಗಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಸೊನೆಟ್ ಹೊಸ ಕಾರು ಈಗಾಗಲೇ 10 ಸಾವಿರಕ್ಕೂ ಅಧಿಕ ಯುನಿಟ್‌ಗಳಿಗಾಗಿ ಬುಕ್ಕಿಂಗ್ ದಾಖಲಾಗಿದ್ದು, ಬಿಡುಗಡೆಗೆ ವೇಳೆಗೆ ಹೊಸ ಕಾರಿನ ಬುಕ್ಕಿಂಗ್ ಪ್ರಮಾಣವು ದಾಖಲೆ ಮಟ್ಟಕ್ಕೆ ಏರಿಕೆಯಾಗಲಿದೆ. ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಸಬ್ ಫೋರ್ ಮೀಟರ್ ಕಾರು ಮಾದರಿಗಳಲ್ಲೇ ವಿಶೇಷ ವಿನ್ಯಾಸ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಸೊನೆಟ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಪ್ರಮುಖ ಮೂರು ಎಂಜಿನ್ ಆಯ್ಕೆಗಳೊಂದಿಗೆ ಒಟ್ಟು 17 ವೆರಿಯೆಂಟ್‌ ಹೊಂದಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದೆ. ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಲಿದ್ದು, ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿದ್ದು, ಹೊಸ ಕಾರು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೊಂದಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಈ ಮೂಲಕ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಹೊಸ ಕಾರು ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಫೀಚರ್ಸ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7 ಲಕ್ಷದಿಂದ ರೂ.11.50 ಲಕ್ಷ ಬೆಲೆ ಅಂತದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

Article Published On: Friday, August 28, 2020, 11:51 [IST]
English summary
Kia Sonet Gets Over 10,000 Bookings. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+