ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ ಸೊನೆಟ್

ಕಿಯಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಖರೀದಿಗಾಗಿ ನಿನ್ನೆಯಿಂದಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಲಾಗಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ರೂ. 25 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿರುವ ಕಿಯಾ ಸೊನೆಟ್ ಕಾರಿಗಾಗಿ ಒಂದೇ ದಿನದಲ್ಲಿ ಬರೋಬ್ಬರಿ 6,532 ಯುನಿಟ್‌ಗಳಿಗೆ ಮುಂಗಡ ದಾಖಲಾಗಿದ್ದು, ಬಿಡುಗಡೆಯ ಹೊತ್ತಿಗೆ ದಾಖಲೆ ಪ್ರಮಾಣದ ಬುಕ್ಕಿಂಗ್ ನೀರಿಕ್ಷಿಸಲಾಗಿದೆ. ಸಬ್ ಫೋರ್ ಮೀಟರ್ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲೇ ಹಲವು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೊಸ ಕಾರು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಸಬ್ ಫೋರ್ ಮೀಟರ್ ಕಾರು ಮಾದರಿಗಳಲ್ಲೇ ವಿಶೇಷ ವಿನ್ಯಾಸ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಸೊನೆಟ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಪ್ರಮುಖ ಮೂರು ಎಂಜಿನ್ ಆಯ್ಕೆಗಳೊಂದಿಗೆ ಒಟ್ಟು 17 ವೆರಿಯೆಂಟ್‌ಗಳನ್ನು ನೀಡಲಾಗಿದೆ. ಹಾಗೆಯೇ 8 ಬಣ್ಣಗಳ ಆಯ್ಕೆ ಹೊಂದಿರುವ ಸೊನೆಟ್ ಕಾರು ಅತ್ಯುತ್ತಮ ಉದ್ದಳತೆಯೊಂದಿಗೆ ಅರಾಮದಾಯಕ ಒಳಾಂಗಣ ವಿನ್ಯಾಸ ಹೊಂದಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ. ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಲಿದ್ದು, ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ. ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿದ್ದು, ಹೊಸ ಕಾರು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೊಂದಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಇಲ್ಲವೆ ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಕಾರಿನ ಬೆಲೆಯು ಫೀಚರ್ಸ್‌ಗಳಿಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಸೊನೆಟ್

ಬೆಸ್ ವೆರಿಯೆಂಟ್ ಮತ್ತು ಹೈ ಎಂಡ್ ವೆರಿಯೆಂಟ್‌ಗಳ ನಡುವೆ ಸಾಕಷ್ಟು ಬೆಲೆ ಅಂತರವಿದ್ದು, ರೂ. 2 ಲಕ್ಷದಿಂದ ರೂ.4 ಲಕ್ಷ ಬೆಲೆ ಅಂತರದ ನಡುವೆಯೂ ಬೆಸ್ ವೆರಿಯೆಂಟ್‌ನಲ್ಲಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತಿದೆ.

Most Read Articles

Kannada
English summary
Kia Sonet Registers A Record 6,532 Units Of Bookings On The First Day. Read in Kannada.
Story first published: Friday, August 21, 2020, 20:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X