ಬಹುನೀರಿಕ್ಷಿತ ಕಿಯಾ ಸೊನೆಟ್ ಬಿಡುಗಡೆ ಮಾಹಿತಿ ಬಹಿರಂಗ
ಕಿಯಾ ಮೋಟಾರ್ಸ್ ಕಂಪನಿಯು ಸೆಲ್ಟೊಸ್ ಮತ್ತು ಕಾರ್ನಿವಾಲ್ ನಂತರ ಮೂರನೇ ಕಾರು ಮಾದರಿಯಾಗಿ ಸೊನೆಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಕಳೆದ ತಿಂಗಳು ಅನಾವರಣಗೊಂಡಿದ್ದ ಹೊಸ ಕಾರು ಇದೀಗ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಮಾಹಿತಿಗಳ ಪ್ರಕಾರ ಹೊಸ ಸೊನೆಟ್ ಕಾರು ಇದೇ ತಿಂಗಳು 18ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಕಾರು ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ಹೊಸ ಕಾರು ಬಿಡುಗಡೆಗೂ ಮುನ್ನವೇ ಸುಮಾರು 12 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಮತ್ತು ಎಂಜಿನ್ ಆಯ್ಕೆ ಹೊಂದಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರಮುಖ ಮೂರು ಎಂಜಿನ್ ಆಯ್ಕೆಗಳೊಂದಿಗೆ ಒಟ್ಟು 17 ವೆರಿಯೆಂಟ್‌ಗಳನ್ನು ಹೊಂದಿದ್ದು, 8 ಬಣ್ಣಗಳ ಆಯ್ಕೆ ಹೊಂದಿರುವ ಸೊನೆಟ್ ಕಾರು ಅತ್ಯುತ್ತಮ ಉದ್ದಳತೆಯೊಂದಿಗೆ ಅರಾಮದಾಯಕ ಒಳಾಂಗಣ ವಿನ್ಯಾಸ ಹೊಂದಿದೆ.

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಸೀಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ. ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದೆ.

ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಲಿದ್ದು, ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ. ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿದ್ದು, ಹೊಸ ಕಾರು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಈ ಮೂಲಕ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಹೊಸ ಕಾರು ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಫೀಚರ್ಸ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7 ಲಕ್ಷದಿಂದ ರೂ.11.50 ಲಕ್ಷ ಬೆಲೆ ಅಂತದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.


Click it and Unblock the Notifications