Just In
- 35 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‌ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, Live ಸ್ಕೋರ್: ಭಾರತದ ಆರಂಭಿಕ ವಿಕೆಟ್ ಪತನ
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ
ಇದೇ ತಿಂಗಳು 7ರಂದು ಅನಾವರಣಗೊಳ್ಳಲಿರುವ ಕಿಯಾ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅನಾವರಣಗೊಂಡ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಮುಂಬರುವ ದೀಪಾವಳಿ ಹೊತ್ತಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಅನಾವರಣಗೊಳ್ಳುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವು ಹೊಸ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದೆ. ಜೊತೆಗೆ ವಿಶೇಷ ವಿನ್ಯಾಸದೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲು ಸಜ್ಜುಗೊಂಡಿರುವ ಹೊಸ ಕಾರು ಸೆಲ್ಟೊಸ್‌ಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಬಿ ಸೆಗ್ಮೆಂಟ್ ಕಾರು ಮಾರಾಟದಲ್ಲಿ ಭಾರೀ ಸದ್ದು ಮಾಡಲಿದೆ.

ಸೊನೆಟ್ ಕಾನ್ಸೆಪ್ಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.

ಹೊಸ ಕಾರು ಬಿಎಸ್-6 ಎಂಜಿನ್ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ಬಹುಕೇಕ ಖಚಿತವಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಎಂಜಿನ್ ವೈಶಿಷ್ಟ್ಯತೆ
ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಿರಲಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

ಸೊನೆಟ್ ಕಾರಿನ ಬೆಲೆ(ಅಂದಾಜು)
ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.