ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಸೆಲ್ಟೊಸ್ ಮತ್ತು ಕಾರ್ನಿವಾಲ್ ಬಿಡುಗಡೆಯ ನಂತರ ಮೂರನೇ ಕಾರು ಮಾದರಿಯಾಗಿ ಸೊನೆಟ್ ಕಾನ್ಸೆಪ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಶೀಘ್ರದಲ್ಲೇ ಹೊಸ ಕಾರನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಪರಿಶೀಲನೆಗಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಟೆಸ್ಟಿಂಗ್ ಮಾಡುತ್ತಿರುವುದು ಕಂಡುಬಂದಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಮತ್ತು ಮಾರುತಿ ಬ್ರೆಝಾ ಕಾರಿಗೆ ಪೈಪೋಟಿ ಬಿಡುಗಡೆಯಾಗುತ್ತಿರುವ ಸೊನೆಟ್ ಕಾನ್ಸೆಪ್ಟ್ ಭಾರೀ ನೀರಿಕ್ಷೆ ಮೂಡಿಸಿದ್ದು, ಈ ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿತ್ತು. ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಸ್ಪೋಟಿ ಲುಕ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಸದ್ಯಕ್ಕೆ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಅನಾವರಣ ಕಾರ್ಯಕ್ರಮದಲ್ಲಿ ಹೊಸ ಕಾರಿನ ಯಾವುದೇ ತಾಂತ್ರಿಕ ಅಂಶಗಳ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆದರೆ ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಒಟ್ಟು 4 ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿವೆ ಎನ್ನಬಹುದು.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆಯುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಹಾಗೆಯೇ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡ ಮತ್ತೊಂದು ಕಂಪ್ಯಾಕ್ಟ್ ಆವೃತ್ತಿಯಾದ ಸ್ಟೊನಿಕ್ ಕೂಡಾ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಸ್ಟೊನಿಕ್ ಕಾರು ಸೊನೆಟ್ ಮತ್ತು ಸೆಲ್ಟೊಸ್ ನಡುವಿನ ಸ್ಥಾನ ಪಡೆದುಕೊಳ್ಳಲಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಸೊನೆಟ್ ಕಾರಿನ ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಕಿಯಾ ಹೊಸ ಕಾರು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6 ಲಕ್ಷದಿಂದ ರೂ.9 ಲಕ್ಷ ಬೆಲೆ ಅಂತರ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Kia Sonet Compact-SUV Spied Testing In Bangalore Ahead Of Launch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X