Just In
- 53 min ago
ರೋಡ್ ಟೆಸ್ಟಿಂಗ್ನಲ್ಲಿ ಕಂಡುಬಂದ ಹ್ಯುಂಡೈ ಕ್ರೆಟಾ 7 ಸೀಟರ್ ವರ್ಷನ್
- 12 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 12 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 12 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
Don't Miss!
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- News
ಶಿವಮೊಗ್ಗ ಸ್ಫೋಟ; ಸಿಗರೇಟು ಸೇದುತ್ತಿದ್ದ ಕಾರ್ಮಿಕರು!
- Sports
ಹೊಸ ಪರೀಕ್ಷೆಗೆ ಒಳಗಾಗಬೇಕು ಕ್ರಿಕೆಟ್ ತಾರೆಯರು: 8.30 ನಿಮಿಷದಲ್ಲಿ 2 ಕಿ.ಮೀ ಗುರಿ
- Movies
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣಗೊಳ್ಳಲಿರುವ ಕಿಯಾ ಸೊನೆಟ್ ಇಂಟಿರಿಯರ್ ಮಾಹಿತಿ ಬಹಿರಂಗ
ಕಿಯಾ ಮೋಟಾರ್ಸ್ ಕಂಪನಿಯು ಮುಂದಿನ ತಿಂಗಳು ಅಗಸ್ಟ್ 7ಕ್ಕೆ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತ ಸೇರಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವು ಹೊಸ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದೆ.

ಹೊಸ ಸೊನೆಟ್ ಕಾನ್ಸೆಪ್ಟ್ ಕಾರನ್ನು ಕಿಯಾ ಮೋಟಾರ್ಸ್ ಕಂಪನಿಯು ಅನಾವರಣಗೊಳಿಸಿದ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ಹೊಸ ಕಾರಿನ ವಿನ್ಯಾಸದ ಕುರಿತಾಗಿ ಈಗಾಗಲೇ ವಿವಿಧ ಮಾದರಿಯ ಹಲವು ಟೀಸರ್‌ಗಳನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ವಿನ್ಯಾಸದೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲು ಸಜ್ಜುಗೊಂಡಿರುವ ಹೊಸ ಕಾರು ಬೆಲೆ ವಿಚಾರದಲ್ಲೂ ಗ್ರಾಹಕರ ಗಮನಸೆಳೆಯಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸೊನೆಟ್ ಕಾನ್ಸೆಪ್ಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.

ಹೊಸ ಕಾರು ಬಿಎಸ್-6 ಎಂಜಿನ್ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಎಂಜಿನ್ ವೈಶಿಷ್ಟ್ಯತೆ
ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸೊನೆಟ್ ಕಾರಿನ ಬೆಲೆ(ಅಂದಾಜು)
ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.