ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಮೋಟಾರ್ಸ್ ಇಂಡಿಯಾ ಕಂಪನಿಯು ಸೆಲ್ಟೊಸ್ ಮತ್ತು ಕಾರ್ನಿವಾಲ್ ನಂತರ ಮೂರನೇ ಕಾರು ಮಾದರಿಯಾಗಿ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಸೊನೆಟ್ ಕಾರನ ಕಾನ್ಸೆಪ್ಟ್ ಮಾದರಿಯನ್ನು ಅನಾವರಣಗೊಳಿಸಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಅಂಶಗಳನ್ನು ಹೊಂದಿರುವ ಹೊಸ ಸೊನೆಟ್ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಕಿಯಾ ಮೋಟಾರ್ಸ್ ಸಹೋದರ ಸಂಸ್ಥೆ ಹ್ಯುಂಡೈ ನಿರ್ಮಾಣದ ವೆನ್ಯೂ ಕಾರು ಆಧರಿಸಿರುವ ಸೊನೆಟ್ ಕಾರು ವೆನ್ಯೂ ಕಾರಿನೊಂದಿಗೆ ಚಾರ್ಸಿ ಮತ್ತು ಎಂಜಿನ್ ಹಂಚಿಕೊಂಡಿದ್ದು, ವಿನ್ಯಾಸ ಮತ್ತು ಪ್ರೀಮಿಯಂ ಸೌಲಭ್ಯಗಳ ವಿಚಾರದಲ್ಲಿ ಸೊನೆಟ್ ಕಾರು ವೆನ್ಯೂಗಿಂತಲೂ ಅಗ್ರಸ್ಥಾನದಲ್ಲಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿದ್ದು, ಹೊಸ ಕಾರು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೊಂದಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಎಂಜಿನ್ ಮತ್ತು ಫರ್ಪಾಮೆನ್ಸ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಇನ್ನು ಕಿಯಾ ಸೊನೆಟ್ ಕಾರಿನ ಖದರ್ ಹೆಚ್ಚಿಸಲು ಬಲಿಷ್ಠ ಹೊರಭಾಗದ ಡಿಸೈನ್ ನೀಡಲಾಗಿದ್ದು, ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ ಮಫ್ಲರ್ ಕೂಡಾ ಆಕರ್ಷಕವಾಗಿದ್ದು, ಮುಂಭಾಗದಲ್ಲಿ ಸ್ಕೀಡ್ ಪ್ಲೇಟ್, ಫ್ರಂಟ್ ಮತ್ತು ರಿಯರ್ ಬಂಪರ್, 16-ಇಂಚಿನ ಡ್ಯುಯಲ್ ಟೋನ್ ಅಯಾಲ್ ವೀಲ್ಹ್ ಮತ್ತು ಸ್ಕ್ವಾರಿಷ್ ಆರ್ಚ್ ನೀಡಲಾಗಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಸೊನೆಟ್ ಕಾರಿನಲ್ಲಿ ಹೊರಭಾಗದ ವಿನ್ಯಾಸದಂತೆ ಒಳಭಾಗದ ವಿನ್ಯಾಸವು ಸಹ ಪ್ರಮುಖವಾಗಿದ್ದು, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳು ಕಂಪ್ಯಾಕ್ಟ್ ಎಸ್‌ಯುವಿ ಖರೀದಿದಾರನ್ನು ಸೆಳೆಯಲಿವೆ. ಹೊಸ ಕಾರಿನಲ್ಲಿ ಕಿಯಾ ಸಿಗ್ನೆಚರ್ ಥೀಮ್ ಜೋಡಣೆ ಹೊಂದಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೋಡಬಹುದಾಗಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

10.25-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಕ್ಲಸ್ಟರ್, 4.25-ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಇನ್ಪೋಟೈನ್‌ಮೆಂಟ್ ಕ್ಲಸ್ಟರ್‌ಗೆ ಸರ್ಪೋಟ್ ಮಾಡುವ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಡಿ-ಕಟ್ ಸ್ಟೀರಿಂಗ್ ವೀಲ್ಹ್ ಜೊತೆಗೆ ಮೌಂಟ್ ಕಂಟ್ರೋಲ್, ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಪ್ರೀಮಿಯಂ ಫೀಚರ್ಸ್ ಜೊತೆಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹೊಸ ಕಾರಿನಲ್ಲಿ ಆರು ಏರ್‌ಬ್ಯಾಗ್(ಟಾಪ್ ಎಂಡ್‌ನಲ್ಲಿ), ಎಬಿಎಸ್ ಜೊತೆ ಇಬಿಡಿ, ಟ್ರಾಕ್ಷನ್ ಕಂಟ್ರೋಲ್, ಹೆಚ್ಎಸಿ, ಇಎಸ್‌ಇ, ವಿಎಸ್ಎಂ, ಬ್ರೇಕ್ ಅಸಿಸ್ಟ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ISOFIX ಚೈಲ್ಡ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಕಾರು ಸಬ್ ಫೋರ್ ಮೀಟರ್ ಉದ್ದಳತೆ ಹೊಂದಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರ್ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಬಹುನೀರಿಕ್ಷಿತ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರು ಸದ್ಯ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳುವ ಮೂಲಕ ಮುಂದಿನ ಸೆಪ್ಟೆಂಬರ್ ಆರಂಭದಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸುಳಿವು ನೀಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8 ಲಕ್ಷದಿಂದ ರೂ.11.50 ಲಕ್ಷ ಬೆಲೆಯೊಂದಿಗೆ ಮಾರಾಟವಾಗುವ ನೀರಿಕ್ಷೆಯಲ್ಲಿದೆ.

Article Published On: Friday, August 7, 2020, 14:12 [IST]
English summary
Kia Sonet Compact SUV Unveiled Globally Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+