ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಇದೇ 7ರಂದು ಭಾರತದಲ್ಲಿ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾಗಿರುವ ಕಿಯಾ ಸೊನೆಟ್ ಕಾನ್ಸೆಪ್ಟ್ ಆವೃತ್ತಿಯು ಸೆಲ್ಟೊಸ್ ಮಾದರಿಯಲ್ಲೇ ವಿವಿಧ ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಳ್ಳಲಿದ್ದು, ಟೆಕ್ ಲೈನ್‌ನಲ್ಲಿ ಸಾಮಾನ್ಯ ಕಾರು ಆವೃತ್ತಿ ಬಿಡುಗಡೆಯಾಗಲಿದ್ದರೆ ಜಿಟಿ ಲೈನ್‌ನಲ್ಲಿ ಟರ್ಬೋ ಎಂಜಿನ್ ಮಾದರಿಯು ಬಿಡುಗಡೆಯಾಗಲಿದೆ.

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಸೆಲ್ಟೊಸ್ ಕಾರು ಮಾದರಿಯಲ್ಲೇ ಸಹ ಇದೀಗ ಟೆಕ್ ಲೈನ್ ಮತ್ತು ಜಿಟಿ ಲೈನ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ವಿವಿಧ ಎಂಜಿನ್ ಆಯ್ಕೆಗಳನ್ನು ನೀಡಲಾಗುತ್ತಿದ್ದು, ಸೊನೆಟ್ ಕಾನ್ಸೆಪ್ಟ್ ಕಾರು ಮಾದರಿಯು ಟೆಕ್‌ ಲೈನ್‌ನಲ್ಲಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಎಂಜಿನ್ ಆಯ್ಕೆ ಹೊಂದಿದ್ದರೆ ಜಿಟಿ ಲೈನ್ ಮಾದರಿಯಲ್ಲಿ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳು ಸ್ಟ್ಯಾಂಡರ್ಡ್ ಕಾರು ಮಾದರಿಗಳಾಗಿದ್ದಲ್ಲಿ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು ಪರ್ಫಾಮೆನ್ಸ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಿರಲಿದೆ.

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಇನ್ನು ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವು ಹೊಸ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದ್ದು, ಬಿ ಸೆಗ್ಮೆಂಟ್ ಕಾರು ಮಾರಾಟದಲ್ಲಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯಗೊಂಡಿರುವ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ಬಹುಕೇಕ ಖಚಿತವಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು ಹೈ ಎಂಡ್ ಮಾದರಿಯುಲ್ಲಿ 6 ಏರ್‌ಬ್ಯಾಗ್‌ಗಳನ್ನು ಮತ್ತು ಸ್ಟ್ಯಾಂಡರ್ಡ್ ಆಗಿ 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಹೊಂದರಿರುವ ಹೊಸ ಸೊನೆಟ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Article Published On: Monday, August 3, 2020, 8:45 [IST]
English summary
Kia Sonet Variant Details Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+