Just In
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಕಿಯಾ ಸೊನೆಟ್ ಆವೃತ್ತಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯಾದ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಬುಕ್ಕಿಂಗ್ ಆಧಾರದ ಮೇಲೆ ಸೊನೆಟ್ ಕಾರಿನ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಮೋಟಾರ್ಸ್ ಕಂಪನಿಯು ಇದುವರೆಗೆ ಸುಮಾರು 25 ಸಾವಿರ ಯುನಿಟ್ ವಿತರಣೆ ಮಾಡಿದ್ದು, ಇನ್ನುಳಿದ ಗ್ರಾಹಕರಿಗೂ ಶೀಘ್ರದಲ್ಲೇ ಹೊಸ ಕಾರು ವಿತರಣೆ ಮಾಡುವ ಸಿದ್ದತೆಯಲ್ಲಿದೆ. ಉತ್ಪಾದನೆಯ ಆಧಾರದ ಮೇಲೆ ವೆರಿಯೆಂಟ್ ಮತ್ತು ಪ್ರದೇಶಗಳಿಗೆ ಅನುಗುಣವಾಗಿ ಹೊಸ ಕಾರಿನ ವಿತರಣೆಯು ತುಸು ಸಮಯಾವಕಾಶ ತೆಗೆದುಕೊಳ್ಳಲಿದ್ದು, ಸೊನೆಟ್ ಕಾರಿಗೆ ಇಂದು ಬುಕ್ಕಿಂಗ್ ಮಾಡಿದ್ದಲ್ಲಿ ಕನಿಷ್ಠ ಒಂದೂವರೆ ತಿಂಗಳಿನಿಂದ ಗರಿಷ್ಠ ನಾಲ್ಕು ತಿಂಗಳು ಕಾಯಲೇಬೇಕಿದೆ.

ಬುಕ್ಕಿಂಗ್ ನಂತರ ಕಾಯುವಿಕೆ ಅವಧಿಯು ವೆರಿಯೆಂಟ್‌ಗಳ ಮೇಲೆ ನಿರ್ಧಾರವಾಗಲಿದ್ದು, ಸೊನೆಟ್ ಟರ್ಬೋ ಪೆಟ್ರೋಲ್ ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಮಧ್ಯಮ ಕ್ರಮಾಂಕದ ಡೀಸೆಲ್ ಮಾದರಿಗಳಿಗೆ ಹೆಚ್ಚು ದಿನ ಕಾಯಬೇಕಾಗುತ್ತದೆ.

ಆಕರ್ಷಕ ಬೆಲೆಯೊಂದಿಗೆ ವಿವಿಧ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿರುವ ಕಿಯಾ ಸೊನೆಟ್ ಕಾರು ಮಾದರಿಯು ಕಳೆದ ನವೆಂಬರ್ ಅವಧಿಯಲ್ಲಿ ಒಟ್ಟು 11,417 ಯುನಿಟ್ ಮಾರಾಟದೊಂದಿಗೆ ಟಾಪ್ 10 ಕಾರು ಮಾರಾಟದಲ್ಲಿ ಏಳನೇ ಸ್ಥಾನದಲ್ಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸದ್ಯ ನಂ. 1 ಸ್ಥಾನದಲ್ಲಿರುವ ಕಿಯಾ ಸೊನೆಟ್ ಕಾರು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.