ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸೆಲ್ಟೊಸ್ ಹಾಗೂ ಕಾರ್ನಿವಾಲ್ ನಂತರ ಮೂರನೇ ಕಾರು ಮಾದರಿಯಾಗಿ ಸೊನೆಟ್ ಕಾನ್ಸೆಪ್ಟ್ ಬಿಡುಗಡೆ ಮಾಡಲು ಅಂತಿಮ ಸಿದ್ದತೆ ನಡೆಸಿರುವ ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಪರಿಶೀಲನೆಗಾಗಿ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಮತ್ತು ಮಾರುತಿ ಬ್ರೆಝಾ ಕಾರಿಗೆ ಪೈಪೋಟಿ ಬಿಡುಗಡೆಯಾಗುತ್ತಿರುವ ಸೊನೆಟ್ ಕಾನ್ಸೆಪ್ಟ್ ಭಾರೀ ನೀರಿಕ್ಷೆ ಮೂಡಿಸಿದ್ದು, ಈ ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿತ್ತು. ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸ್ಪೋಟಿ ಲುಕ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸದ್ಯಕ್ಕೆ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಅನಾವರಣ ಕಾರ್ಯಕ್ರಮದಲ್ಲಿ ಹೊಸ ಕಾರಿನ ಯಾವುದೇ ತಾಂತ್ರಿಕ ಅಂಶಗಳ ಕುರಿತಾಗಿ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆದರೆ ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಒಟ್ಟು 2 ಪೆಟ್ರೋಲ್ ಮಾದರಿಗಳು ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿವೆ ಎನ್ನಬಹುದು.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹಾಗೆಯೇ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಟರ್ಬೋ ಮಾದರಿಯಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸೊನೆಟ್ ಕಾರಿನ ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಕಿಯಾ ಹೊಸ ಕಾರು ಮುಂದಿನ ಅಗಸ್ಟ್ ಅವಧಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.50 ಲಕ್ಷದಿಂದ ರೂ.9 ಲಕ್ಷ ಬೆಲೆ ಅಂತರ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Source: Autocar India Forum

Article Published On: Saturday, April 4, 2020, 8:45 [IST]
English summary
Kia Sonet Interiors Spied With Flat Bottom Steering Wheel Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+