ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಸೆಲ್ಟೊಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ಇದರಲ್ಲಿ ಸೊನೆಟ್ ಕಾನ್ಸೆಪ್ಟ್ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಹೊಸ ಕಾರು 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಿರುವ ಕಿಯಾ ಸಂಸ್ಥೆಯು ಭಾರತದಲ್ಲಿ ವಾರ್ಷಿಕವಾಗಿ 3 ಲಕ್ಷ ಕಾರುಗಳ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ್ದು, ಮಧ್ಯಮ ಗಾತ್ರದ ಕಾರುಗಳ ಜೊತೆಗೆ ಐಷಾರಾಮಿ ಕಾರುಗಳನ್ನು ಸಹ ಬಿಡುಗಡೆ ಮಾಡುತ್ತಿದೆ. ಕಿಯಾ ಹೊಸ ಕಾರುಗಳ ಪೈಕಿ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಹತ್ವದ ಬದಲಾವಣೆಗೆ ಕಾರಣವಾಗಲಿದ್ದು, ಹೊಸ ಕಾರು ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿದೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಸ್ಪೋಟಿ ಲುಕ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಸದ್ಯ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಅನಾವರಣ ಕಾರ್ಯಕ್ರಮದಲ್ಲಿ ಹೊಸ ಕಾರಿನ ಯಾವುದೇ ತಾಂತ್ರಿಕ ಅಂಶಗಳ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಒಟ್ಟು 4 ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಪಡೆಯುವ ಸಾಧ್ಯತೆಗಳಿವೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆಯುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

ಆಟೋ ಎಕ್ಸ್‌ಪೋ 2020: ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಕಾನ್ಸೆಪ್ಟ್ ಅನಾವರಣ

ಸೊನೆಟ್ ಕಾರಿನ ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಕಿಯಾ ಹೊಸ ಕಾರು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Auto Expo 2020: Kia Sonet Concept Unveiled. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X