ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಮೊದಲ ಬಾರಿಗೆ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ದಸರಾ ಮತ್ತು ಮುಂಬರುವ ದೀಪಾವಳಿ ಸಂಭ್ರಮದ ನಡುವೆ ಹೊಸ ವಾಹನ ಮಾರಾಟವು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಕೂಡಾ ಭಾರೀ ಪ್ರಮಾಣದ ಕಾರು ಮಾರಾಟದೊಂದಿಗೆ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಮೊದಲ ಬಾರಿಗೆ ಎಂಟ್ರಿ ನೀಡಿದೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ಅಕ್ಟೋಬರ್ ಅವಧಿಯ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು 7 ಕಾರು ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಇನ್ನುಳಿದ ಮೂರು ಸ್ಥಾನಗಳಲ್ಲಿ ಎರಡು ಸ್ಥಾನಗಳು ಹ್ಯುಂಡೈ ಕಂಪನಿಯ ಕಾರುಗಳಿಗೆ ಮತ್ತು ಒಂದು ಸ್ಥಾನ ಕಿಯಾ ಮೋಟಾರ್ಸ್ ಪಾಲಾಗಿದೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಟಾಪ್ 10 ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿಯ ಸ್ವಿಫ್ಟ್, ಬಲೆನೊ, ವ್ಯಾಗನ್-ಆರ್, ಆಲ್ಟೋ, ಡಿಜೈರ್, ಇಕೋ, ಬ್ರೆಝಾ ಕಾರು ಮುಂಚೂಣಿಯಲ್ಲಿದ್ದರೆ ಹ್ಯುಂಡೈ ನಿರ್ಮಾಣದ ಕ್ರೆಟಾ, ಗ್ರ್ಯಾಂಡ್ ಐ10 ಸ್ಥಾನಪಡೆದುಕೊಂಡಿವೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಕಿಯಾ ಮೋಟಾರ್ಸ್ ನಿರ್ಮಾಣದ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಒಟ್ಟು 11,721 ಯುನಿಟ್ ಮಾರಾಟದೊಂದಿಗೆ ಹತ್ತನೇ ಸ್ಥಾನದಲ್ಲಿದ್ದು, ಬಿಡುಗಡೆಯಾದ ಆರಂಭದಲ್ಲೇ ಹೊಸ ಕಾರಿಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದತ್ತ ಲಗ್ಗೆಯಿಡುತ್ತಿರುವ ಕಿಯಾ ಮೋಟಾರ್ಸ್ ಹೊಚ್ಚ ಹೊಸ ಸೊನೆಟ್ ಕಾರು ಮಾದರಿಯು ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 50 ಸಾವಿರ ಯುನಿಟ್‌ಗೆ ಬುಕ್ಕಿಂಗ್ ಪಡೆದುಕೊಂಡಿದೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಸೆಪ್ಟೆಂಬರ್ 18ರಂದು ಬಿಡುಗಡೆಗೊಂಡಿದ್ದ ಸೊನೆಟ್ ಕಾರು ಆಕರ್ಷಕ ಬೆಲೆಯೊಂದಿಗೆ ವಿವಿಧ ವೆರಿಯೆಂಟ್‌ಗಳನ್ನು ಹೊಂದಿದ್ದು, ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ. ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಎಂಟ್ರಿ ಕೊಟ್ಟ ಕಿಯಾ ಸೊನೆಟ್

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ದೀಪಾವಳಿ ವೇಳೆಗೆ ಅತಿ ಹೆಚ್ಚು ಮಾರಾಟ ಗುರಿಹೊಂದಿದೆ.

More from DriveSpark

Article Published On: Thursday, November 5, 2020, 10:59 [IST]
English summary
Kia Sonet Enters The Top-10 List For The First Time. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+