ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಮತ್ತು ಕಾರ್ನಿವಾಲ್ ನಂತರ ಮತ್ತಷ್ಟು ವಿನೂತನ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಮತ್ತು ಮಾರುತಿ ಬ್ರೆಝಾ ಕಾರಿಗೆ ಪೈಪೋಟಿ ಬಿಡುಗಡೆಯಾಗುತ್ತಿರುವ ಸೊನೆಟ್ ಕಾನ್ಸೆಪ್ಟ್ ಭಾರೀ ನೀರಿಕ್ಷೆ ಮೂಡಿಸಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಮಧ್ಯಮ ಗಾತ್ರದ ಕಾರುಗಳ ಜೊತೆಗೆ ಐಷಾರಾಮಿ ಕಾರುಗಳನ್ನು ಸಹ ಬಿಡುಗಡೆ ಮಾಡುತ್ತಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಸೊನೆಟ್ ಕಾರನ್ನು ಪರಿಚಯಿಸುತ್ತಿದ್ದು, ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದೆ. ಅನಾವರಣಗೊಳಿಸಿದ ಕಾರು ಕಾನ್ಸೆಪ್ಟ್ ಆವೃತ್ತಿಯಾಗಿದ್ದು, ಶೀಘ್ರದಲ್ಲೇ ಹೊಸ ಉತ್ಪಾದನಾ ಆವೃತ್ತಿಯು ಸಹ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಸ್ಪೋಟಿ ಲುಕ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಸದ್ಯಕ್ಕೆ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಅನಾವರಣ ಕಾರ್ಯಕ್ರಮದಲ್ಲಿ ಹೊಸ ಕಾರಿನ ಯಾವುದೇ ತಾಂತ್ರಿಕ ಅಂಶಗಳ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆದರೆ ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಒಟ್ಟು 4 ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿವೆ ಎನ್ನಬಹುದು.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆಯುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಹಾಗೆಯೇ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡ ಮತ್ತೊಂದು ಕಂಪ್ಯಾಕ್ಟ್ ಆವೃತ್ತಿಯಾದ ಸ್ಟೊನಿಕ್ ಕೂಡಾ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಸ್ಟೊನಿಕ್ ಕಾರು ಸೊನೆಟ್ ಮತ್ತು ಸೆಲ್ಟೊಸ್ ನಡುವಿನ ಸ್ಥಾನ ಪಡೆದುಕೊಳ್ಳಲಿದೆ.

ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ಕಿಯಾ ಸೊನೆಟ್ ಸ್ಪೆಷಲ್ ಏನು?

ಸೊನೆಟ್ ಕಾರಿನ ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಕಿಯಾ ಹೊಸ ಕಾರು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6 ಲಕ್ಷದಿಂದ ರೂ.9 ಲಕ್ಷ ಬೆಲೆ ಅಂತರ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Wednesday, February 12, 2020, 8:45 [IST]
English summary
Kia Sonet Concept production model will soon launch in india. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+