ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಕಿಯಾ ಮೋಟಾರ್ಸ್ ಕಂಪನಿಯು ಕಳೆದ ವಾರವಷ್ಟೇ ತನ್ನ ಬಹುನೀರಿಕ್ಷಿತ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಆವೃತ್ತಿಗಳ ಬೆಲೆ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ಹೊಸ ಮಾದರಿಗಳ ಬೆಲೆ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ದುಬಾರಿ ಕಾರು ಮಾದರಿಯಾಗಿರಲಿದೆ.

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಕಳೆದ ವಾರ ಸೊನೆಟ್ ಕಾರಿನಲ್ಲಿರುವ ಪೆಟ್ರೋಲ್ ಹೈಎಂಡ್, ಟರ್ಬೋ ಪೆಟ್ರೋಲ್ ಹೈಎಂಡ್ ಮತ್ತು ಡೀಸೆಲ್ ಮ್ಯಾನುವಲ್ ಹೈಎಂಡ್ ಮಾದರಿಯ ಬೆಲೆಯನ್ನು ಪ್ರಕಟ ಮಾಡಿದ್ದ ಕಿಯಾ ಕಂಪನಿಯು ಇದೀಗ ಡೀಸೆಲ್ ಆಟೋಮ್ಯಾಟಿಕ್ ಹೈ ಎಂಡ್ ಮತ್ತು ಟರ್ಬೋ ಪೆಟ್ರೋಲ್ ಹೈ ಎಂಡ್ ಮಾದರಿಯ ಬೆಲೆ ವಿವರಗಳನ್ನು ಪ್ರಕಟಿಸಿದೆ. ಜಿಟಿಎಕ್ಸ್ ಪ್ಲಸ್‌ ವೆರಿಯೆಂಟ್‌ನಲ್ಲಿರುವ ಟರ್ಬೋ ಪೆಟ್ರೋಲ್ ಆಟೋಮ್ಯಾಟಿಕ್ ಮತ್ತು ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ.12.89 ಲಕ್ಷ ಬೆಲೆ ಹೊಂದಿವೆ.

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಈ ಮೂಲಕ ಸೊನೆಟ್ ಕಾರು ಇದೀಗ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಜಿಟಿ-ಲೈನ್ ಮತ್ತು ಟೆಕ್ ಲೈನ್ ಖರೀದಿಗೆ ಲಭ್ಯವಿರಲಿವೆ. ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಕಿಯಾ ಸೊನೆಟ್ ಕಾರು ಮಾದರಿಯಲ್ಲಿ ಮೂರು ಮಾದರಿಯ ಎಂಜಿನ್ ಆಯ್ಕೆ ನೀಡಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ನೀಡಲಾಗಿದೆ.

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ ಮತ್ತು115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ, 240-ಎನ್ಎಂ ಟಾರ್ಕ್ ಮತ್ತು ಹೈ ಎಂಡ್ ಎಂಡ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಇನ್ನು ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿರುವ 1.0-ಲೀಟರ್ ತ್ರಿ ಸಿಲಿಂಡರ್ ಟರ್ಬೋ ಎಂಜಿನ್ ಮಾದರಿಯು 6-ಸ್ಪೀಡ್ ಇಂಟಲಿಜೆಂಟ್ ಮ್ಯಾನುವಲ್(ಐಎಂಟಿ) ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ ಆಯ್ಕೆಯೊಂದಿಗೆ 120-ಬಿಎಚ್‌ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿದೆ.

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಡೀಸೆಲ್ ಆವೃತ್ತಿಯು ಪ್ರತಿ ಲೀಟರ್‌ಗೆ 24.1ಕಿ.ಮೀ, ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯು 19ಕಿ.ಮೀ, ಪೆಟ್ರೋಲ್ ಮ್ಯಾನುವಲ್ ಆವೃತ್ತಿಯು 18.4ಕಿ.ಮೀ ಮತ್ತು ಟರ್ಬೋ ಪೆಟ್ರೋಲ್ ಮಾದರಿಯು 18.2ಕಿ.ಮೀ ಮೈಲೇಜ್ ಹಿಂದಿರಲಿಸಲಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸೊನೆಟ್ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Most Read Articles

Kannada
English summary
Kia Sonet GTX+ Variant Prices Revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X