ಕಿಯಾ ಮೋಟಾರ್ಸ್ ಬಹುನೀರಿಕ್ಷಿತ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಸ್ಪೆಷಲ್ ಏನು?
ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಬಹುನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಕರೋನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುತ್ತಿರುವುದರಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಆಟೋ ಉದ್ಯಮ ಕೂಡಾ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಉದ್ಯಮ ವ್ಯವಹಾರಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಿರುವಾಗ ವಿವಿಧ ಕಂಪನಿಗಳು ಹಲವಾರು ಹೊಸ ಕಾರುಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡುತ್ತಿದ್ದು, ಕಿಯಾ ಕೂಡಾ ಸೊನೆಟ್ ಕಾರನ್ನು ನಿಗದಿತ ಅವಧಿಗಿಂತ ಎರಡು ತಿಂಗಳು ತಡವಾಗಿ ಬಿಡುಗಡೆಗೊಳಿಸುತ್ತಿದೆ.

ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಕಿಯಾ ಕಂಪನಿಯು ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಳ್ಳುತ್ತಿದೆ.

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹಾಗೆಯೇ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸೊನೆಟ್ ಕಾರಿನ ಬೆಲೆ(ಅಂದಾಜು)
ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications