ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಕಾರು ಮಾರಾಟ ಮಾರಾಟದಲ್ಲಿ ಹೊಸ ಸಂಚಲನದ ನೀರಿಕ್ಷೆಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಬಿಡುಗಡೆಗೂ ಮುನ್ನವೇ ಹೊಸ ದಾಖಲೆಗಳಿಗೆ ಕಾರಣವಾಗುತ್ತಿದ್ದು, ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಈಗಾಗಲೇ 7 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ ನಂತರ ಹೊಸ ಸೊನೆಟ್ ಕಾರಿನ ಟಿವಿ ಜಾಹೀರಾತವೊಂದನ್ನು ಬಿಡುಗಡೆ ಮಾಡಲಾಗಿದ್ದು, ವಿನೂತನ ಫೀಚರ್ಸ್ ಮೂಲಕ ಗ್ರಾಹಕರ ಪ್ರಮುಖ ಆಕರ್ಷಣೆಯಾಗುವ ನೀರಿಕ್ಷೆಯಲ್ಲಿದೆ. ಜಿಟಿ ಲೈನ್ ಮತ್ತು ಟೆಕ್ ಲೈನ್ ವೆರಿಯೆಂಟ್ ಮೂಲಕ ಗ್ರಾಹಕರ ಗರಿಷ್ಠ ಬೇಡಿಕೆಗಳನ್ನು ಪೂರೈಸಲಿರುವ ಕಿಯಾ ಸೊನೆಟ್ ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಸಬ್ ಫೋರ್ ಮೀಟರ್ ಕಾರು ಮಾದರಿಗಳಲ್ಲೇ ವಿಶೇಷ ವಿನ್ಯಾಸ ಮತ್ತು ಎಂಜಿನ್ ಆಯ್ಕೆ ಹೊಂದಿದೆ.

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ. ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದೆ.

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಲಿದ್ದು, ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ. ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿದ್ದು, ಹೊಸ ಕಾರು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೊಂದಿದೆ.

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಇಲ್ಲವೆ ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಕಾರಿನ ಬೆಲೆಯು ಫೀಚರ್ಸ್‌ಗಳಿಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಸೊನೆಟ್ ಕಾರಿನ ವಿನೂತನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7 ಲಕ್ಷ ಬೆಲೆ ಹೊಂದಲಿದ್ದರೆ ಟಾಪ್ ಎಂಡ್ ಮಾದರಿಯು ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೂ.11.50 ಲಕ್ಷ ಅಂತರದಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಬೆಸ್ ವೆರಿಯೆಂಟ್ ಮತ್ತು ಹೈ ಎಂಡ್ ವೆರಿಯೆಂಟ್ ನಡುವೆ ಸಾಕಷ್ಟು ಬೆಲೆ ಅಂತರವಿದ್ದು, ರೂ. 2 ಲಕ್ಷದಿಂದ ರೂ.4 ಲಕ್ಷ ಬೆಲೆ ಅಂತರದ ನಡುವೆಯೂ ಬೆಸ್ ವೆರಿಯೆಂಟ್‌ನಲ್ಲಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತಿದೆ.

Article Published On: Saturday, August 22, 2020, 20:45 [IST]
English summary
Kia Sonet TVC Released. Read i Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+