ಕಿಯಾ ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಕಿಯಾ ಮೋಟಾರ್ಸ್ ನಿರ್ಮಾಣದ ಹೊಸ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್‌ ಆರಂಭದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಬೆಸ್ಟ್ ಫೀಚರ್ಸ್‌ಗಳೊಂದಿಗೆ ತುಸು ದುಬಾರಿ ಬೆಲೆ ಪಡೆದುಕೊಂಡಿರಲಿದೆ.

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಸೊನೆಟ್ ಕಾನ್ಸೆಪ್ಟ್ ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಕಿಯಾ ಕಂಪನಿಯು ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ಸ್ಪೋಟಿ ಲುಕ್ ಜೊತೆಗೆ ಹಲವು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

MOST READ: ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಬಹನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನ ಬೆಲೆ ಮಾಹಿತಿ ಬಹಿರಂಗ

ಸೊನೆಟ್ ಕಾರಿನ ಬೆಲೆ(ಅಂದಾಜು)

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Kia Sonet Price Range Will Be Between 7.9 Lakh To 13 Lakh. Read in Kannada.
Story first published: Tuesday, June 16, 2020, 11:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X