ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಕಿಯಾ ಮೋಟಾರ್ಸ್ ಇಂಡಿಯಾ ಕಂಪನಿಯು ಬಹುನೀರಿಕ್ಷಿತ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾದ ಸೊನೆಟ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡಿದೆ. ಬುಕ್ಕಿಂಗ್ ಆರಂಭವಾದ ಕೇವಲ 25 ದಿನಗಳಲ್ಲಿ ಬರೋಬ್ಬರಿ 25 ಸಾವಿರ ಬುಕ್ಕಿಂಗ್ ದಾಖಲಾಗಿದ್ದು, ಬುಕ್ಕಿಂಗ್ ಆರಂಭವಾದ ಮೊದಲ ದಿನವೇ 6,500 ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದರು.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಸೊನೆಟ್ ಕಾರು ಮಾದರಿಯು ಟೆಕ್-ಲೈನ್ ಮತ್ತು ಜಿಟಿ-ಲೈನ್ ಎನ್ನುವ ಎರಡು ಮಾದರಿಗಳೊಂದಿಗೆ ಒಟ್ಟು ಆರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನ ಬೆಲೆಯು ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಸೌಲಭ್ಯಕ್ಕೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 11.99 ಲಕ್ಷ ಬೆಲೆ ಪಡೆದುಕೊಂಡಿದೆ.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಸೊನೆಟ್ ಆವೃತ್ತಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ವಿಶ್ವಾಸದಲ್ಲಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ಸ್, ಎಲ್ಇಡಿ ಡಿಆರ್‌ಎಲ್ಎಸ್, ಫಾಗ್ ಲ್ಯಾಂಪ್ಸ್, ಸಿಗ್ನೆಚೆರ್ ಟೈಗರ್ ನೊಸ್ ಫ್ರಂಟ್ ಗ್ರಿಲ್, 16-ಇಂಚಿನ ಕ್ರಿಸ್ಟಲ್ ಕಟ್ ಅಲಾಯ್ ವೀಲ್ಹ್, ರಿಪ್ಲೆಕ್ಟರ್ ಸ್ಟ್ರೀಪ್‌ಗೆ ಹೊಂದಿಕೊಂಡಂತಿರುವ ಹಾರ್ಟ್ ಬಿಟ್‌ ವಿನ್ಯಾಸದ ಎಲ್ಇಡಿ ಟೈಲ್ ಲೈಟ್ಸ್, ಫ್ಲಕ್ಸ್ ಡಿಫ್ಯೂಸರ್ ಮತ್ತು ರಿಯರ್ ಬಂಪರ್ ನೀಡಲಾಗಿದೆ.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಹೊಸ ಕಾರು ಹೊರಭಾಗದಲ್ಲಿನ ಆಕರ್ಷಣೆಯೆಂತೆಯೇ ಒಳಭಾಗದಲ್ಲೂ ಕೂಡಾ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಖರೀದಿದಾರರನ್ನು ಮೊದಲ ನೋಟದಲ್ಲೇ ಸೆಳೆಯಲಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಲೆದರ್ ಸೀಟುಗಳು, ತ್ರಿ ಸ್ಪೋಕ್ ಡಿ ಕಟ್ ಸ್ಟೀರಿಂಗ್ ವೀಲ್ಹ್ ಜೊತೆ ಮೌಂಟೆಡ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ವೈರ್‌ಲೆಸ್ ಚಾರ್ಜರ್, ಸೌಂಡ್ ಮೋಡ್ ಲೈಟಿಂಗ್, ಬಾಷ್ ಸಿಸ್ಟಂ ಹೊಂದಿರುವ 7-ಸ್ಪೀಕರ್ಸ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಹಾಗೆಯೇ ಹೊಸ ಕಾರಿನಲ್ಲಿ ಕಿಯಾ ಮೋಟಾರ್ಸ್‌ ಅಭಿವೃದ್ದಿಪಡಿಸಿರುವ ಯುವಿಒ ಕಾರ್ ಕನೆಕ್ಟ್ ಟೆಕ್ನಾಲಜಿ ಸೌಲಭ್ಯವು ಗರಿಷ್ಠ ಫೀಚರ್ಸ್ ಹೊಂದಿದ್ದು, ಸುಮಾರು 57 ಫೀಚರ್ಸ್‌ಗಳನ್ನು ಯುವಿಒ ಆ್ಯಪ್ ಮೂಲಕವೇ ಕಾರಿನ ಪ್ರಮುಖ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದಾಗಿದೆ.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಎಂಜಿನ್ ಮತ್ತು ಫರ್ಪಾಮೆನ್ಸ್

ಕಿಯಾ ಸೊನೆಟ್ ಕಾರು ಮಾದರಿಯಲ್ಲಿ ಮೂರು ಮಾದರಿಯ ಎಂಜಿನ್ ಆಯ್ಕೆ ನೀಡಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ನೀಡಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ ಮತ್ತು115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ, 240-ಎನ್ಎಂ ಟಾರ್ಕ್ ಮತ್ತು ಹೈ ಎಂಡ್ ಎಂಡ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಇನ್ನು ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿರುವ 1.0-ಲೀಟರ್ ತ್ರಿ ಸಿಲಿಂಡರ್ ಟರ್ಬೋ ಎಂಜಿನ್ ಮಾದರಿಯು 6-ಸ್ಪೀಡ್ ಇಂಟಲಿಜೆಂಟ್ ಮ್ಯಾನುವಲ್(ಐಎಂಟಿ) ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ ಆಯ್ಕೆಯೊಂದಿಗೆ 120-ಬಿಎಚ್‌ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿದ್ದು, ಡೀಸೆಲ್ ಆವೃತ್ತಿಯು ಪ್ರತಿ ಲೀಟರ್‌ಗೆ 24.1ಕಿ.ಮೀ, ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯು 19ಕಿ.ಮೀ, ಪೆಟ್ರೋಲ್ ಮ್ಯಾನುವಲ್ ಆವೃತ್ತಿಯು 18.4ಕಿ.ಮೀ ಮತ್ತು ಟರ್ಬೋ ಪೆಟ್ರೋಲ್ ಮಾದರಿಯು 18.2ಕಿ.ಮೀ ಮೈಲೇಜ್ ಹಿಂದಿರಲಿಸಲಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಸುರಕ್ಷಾ ಸೌಲಭ್ಯಗಳು ಮತ್ತು ಬಣ್ಣಗಳ ಆಯ್ಕೆ

ಹೊಸ ಸೊನೆಟ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 6-ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್‌ಮೆಂಟ್(ವಿಎಸ್ಎಂ), ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್, ಬ್ರೇಕ್ ಅಸಿಸ್ಟ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್, ಇಂಪ್ಯಾಕ್ಟ್ ಸೆನ್ಸಾರ್ ಆಟೋ ಡೋರ್ ಅನ್‌ಲಾಕ್, ಸ್ಪೀಡ್-ಸೆನ್ಸಿಂಗ್ ಆಟೋ ಡೋರ್ ಲಾಕ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೊಲ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೌಲಭ್ಯಗಳಿವೆ.

ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಕಿಯಾ ಸೊನೆಟ್ ಹೊಸ ಕಾರು

ಸೊನೆಟ್ ಕಾರು ಒಟ್ಟು 11 ಬಣ್ಣಗಳ ಆಯ್ಕೆ ಹೊಂದಿದ್ದು, ಇದರಲ್ಲಿ 8 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಿ ಸಿದ್ದವಾಗಿರುವ ಟೊಯೊಟಾ ಅರ್ಬನ್ ಕ್ರೂಸರ್, ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Most Read Articles

Kannada
English summary
Kia Sonet Registers 25,000 Pre-Launch Bookings. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X