ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಕಿಯಾ ಮೋಟಾರ್ಸ್ ಕಂಪನಿಯು ಹೊಸ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಇದೇ ಅಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಕಾರು ಭಾರತದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯಕ್ಕೆ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದ್ದು, ಅಂದಾಜು ಒಂದರ ಪ್ರಕಾರ ಹೊಸ ಕಾರು ಪ್ರತಿ ತಿಂಗಳು 6 ಸಾವಿರ ಯುನಿಟ್‌ನಂತೆ ವಾರ್ಷಿಕವಾಗಿ 72 ಸಾವಿರ ಯುನಿಟ್ ಮಾರಾಟಗೊಳ್ಳಬಹುದೆಂಬ ಲೆಕ್ಕಾಚಾರ ಮಾಡಲಾಗುತ್ತಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಕಿಯಾ ಕಂಪನಿಯು ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸ್ಪೋಟಿ ಲುಕ್ ಜೊತೆಗೆ ಹಲವು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸೊನೆಟ್ ಕಾರಿನ ಬಿಡುಗಡೆ ಅವಧಿ ಮತ್ತು ಬೆಲೆ(ಅಂದಾಜು)

ಈ ಮೊದಲು ಏಪ್ರಿಲ್‌ನಲ್ಲಿ ಹೊಸ ಕಾರಿನ ಬಿಡುಗಡೆಯ ಯೋಜನೆಯಲ್ಲಿದ್ದ ಕಿಯಾ ಕಂಪನಿಯು ಕರೋನಾ ವೈರಸ್‌ ಅಟ್ಟಹಾಸದಿಂದಾಗಿ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿದ್ದು, ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್ ವೇಳೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Kia Sonet sales expectations at 6000 unit per month in indian market details. Read in Kannada.
Story first published: Saturday, April 25, 2020, 11:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X