Just In
Don't Miss!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Sports
ಭಾರತೀಯರ ನಿಂದಿಸಿದ ಕಿಡಿಗೇಡಿಗಳ ಕಂಡುಹಿಡಿಯುವಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ವಿಫಲ
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Movies
ಎಸ್ಎಸ್ ರಾಜಮೌಳಿ ನಿರ್ಧಾರಕ್ಕೆ ಬೇಸರಗೊಂಡ ನಿರ್ಮಾಪಕ ಬೋನಿ ಕಪೂರ್
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವರ್ಷಕ್ಕೆ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದ ಕಿಯಾ ಮೋಟಾರ್ಸ್
ಕೋವಿಡ್ ಪರಿಣಾಮ ಸತತವಾಗಿ ಹೊಸ ವಾಹನ ಮಾರಾಟದಲ್ಲಿ ಹಿನ್ನಡೆ ಅನುಭವಿಸಿದ್ದ ಕಾರು ಕಂಪನಿಗಳು ಇದೀಗ ಚೇತರಿಕೆ ಕಂಡಿದ್ದು, ವಾಹನ ಉತ್ಪಾದನೆಯ ವೆಚ್ಚ ನಿರ್ವಹಣೆಗಾಗಿ ಬೆಲೆ ಹೆಚ್ಚಳದ ಮೊರೆಹೋಗಿವೆ.

ಉತ್ಪಾದನಾ ವೆಚ್ಚಗಳಲ್ಲಿ ನಿರಂತರವಾಗಿ ಏರಿಕೆಯ ಹಿನ್ನಲೆ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಬೆಲೆ ಹೆಚ್ಚಳದ ಸುಳಿವು ನೀಡಿರುವ ವಿವಿಧ ಆಟೋ ಕಂಪನಿಗಳು ಹೊಸ ವರ್ಷದ ಆರಂಭದಲ್ಲಿ ಹೊಸ ದರಪಟ್ಟಿ ಬಿಡುಗಡೆಗೊಳಿಸಲು ಸಿದ್ದಗೊಂಡಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಸಹ 2021ರ ಜನವರಿ ಒಂದರಿಂದಲೇ ಸೆಲ್ಟೊಸ್ ಮತ್ತು ಸೊನೆಟ್ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದೆ.

ಆದರೆ ಯಾವ ಕಾರಿನ ಬೆಲೆ ಎಷ್ಟು ಹೆಚ್ಚಳ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ಇದುವರೆಗೆ ಪ್ರಕಟಿಸಿಲ್ಲವಾದರೂ ಮಾಹಿತಿಗಳ ಪ್ರಕಾರ ವಿವಿಧ ವೆರಿಯೆಂಟ್‌ಗೆ ಅನುಗುಣವಾಗಿ ಶೇ.2 ರಿಂದ ಶೇ.3 ರಷ್ಟು ಹೆಚ್ಚಳ ಮಾಡಬಹುದಾಗಿದೆ.

ಶೇ. 2 ರಿಂದ ಶೇ. 3 ರಷ್ಟು ಬೆಲೆ ಹೆಚ್ಚಳ ಮಾಡಿದ್ದಲ್ಲಿ ಕಿಯಾ ಮೋಟಾರ್ಸ್ ಕಾರುಗಳ ಬೆಲೆಯು ರೂ. 15 ಸಾವಿರದಿಂದ ರೂ. 35 ಸಾವಿರ ತನಕ ಹೆಚ್ಚಳವಾಗಲಿದ್ದು, ಬೆಲೆ ಹೆಚ್ಚಳವು ಎಕ್ಸ್‌ಶೋರೂಂ ದರದಂತೆ ಅನ್ವಯವಾಗುತ್ತದೆ.

ಕಿಯಾ ಮೋಟಾರ್ಸ್ ಕಂಪನಿಯು ಸದ್ಯಕ್ಕೆ ಸೆಲ್ಟೊಸ್ ಮತ್ತು ಸೊನೆಟ್ ಕಾರಿನ ಬೆಲೆಯಲ್ಲಿ ಮಾತ್ರವೇ ಹೆಚ್ಚಳ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದು, ಕಾರ್ನಿವಾಲ್ ಎಂಪಿವಿ ಕಾರಿನ ಬೆಲೆಯನ್ನು ಈ ಹಿಂದಿನಂತೆಯೇ ಮುಂದುವರಿಸಲಿದೆ. ಇನ್ನು ಕಿಯಾ ಮೋಟಾರ್ಸ್ ಕಂಪನಿಯು ನವೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟವನ್ನು ತನ್ನದಾಗಿಸಿಕೊಂಡಿದ್ದು, ಕಳೆದ ವರ್ಷದ ನವೆಂಬರ್ ಅವಧಿಯ ಕಾರು ಮಾರಾಟಕ್ಕಿಂತಲೂ ಶೇ.50ರಷ್ಟು ಬೆಳವಣಿಗೆ ಸಾಧಿಸಿದೆ.

ಕಿಯಾ ಮೋಟಾರ್ಸ್ ಕಂಪನಿಯು ನವೆಂಬರ್ ಅವಧಿಯಲ್ಲಿ ಶೇ.50ರಷ್ಟು ಬೆಳವಣಿಗೆಯೊಂದಿಗೆ 21,022 ಯುನಿಟ್ ಮಾರಾಟ ಮಾಡಿದ್ದು, ಕಳೆದ ವರ್ಷದ ನವೆಂಬರ್ ಅವಧಿಯಲ್ಲಿ 14,005 ಯುನಿಟ್ ಮಾರಾಟ ಮಾಡಿತ್ತು.

ಸೆಲ್ಟೊಸ್ ಜೊತೆ ಇದೀಗ ಸೊನೆಟ್ ಕಾರು ಮಾರಾಟ ಮಾಡುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಸೆಪ್ಟೆಂಬರ್ 18ರಂದು ಬಿಡುಗಡೆಗೊಂಡಿದ್ದ ಸೊನೆಟ್ ಕಾರು ಕೂಡಾ ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ. ಸೊನೆಟ್ ಕಳೆದ ತಿಂಗಳು ಬರೋಬ್ಬರಿ 11,417 ಯನಿಟ್ ಮಾರಾಟಗೊಳಿಸಲಾಗಿದ್ದು, ಸೆಲ್ಟೊಸ್ ಕಾರು ಮಾದರಿಯು ಕಳೆದ ತಿಂಗಳು ಒಟ್ಟು 9,205 ಯುನಿಟ್ ಮಾರಾಟಗೊಂಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇನ್ನುಳಿದ ಕಾರ್ನಿವಾಲ್ ಎಂಪಿವಿ ಕಾರು ಕೂಡಾ ದುಬಾರಿ ಬೆಲೆ ನಡುವೆಯೂ 400 ಯುನಿಟ್ ಮಾರಾಟಗೊಂಡಿದ್ದು, ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಿಯಾ ಮೋಟಾರ್ಸ್ ಕಂಪನಿಗೆ ಭಾರೀ ಪ್ರಮಾಣದ ಲಾಭ ತಂದುಕೊಡುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.