Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 13 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 14 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೊನೆಟ್ ಕಾರಿನ ಉತ್ಪಾದನಾ ಆವೃತ್ತಿಯ ಮೊದಲ ಟೀಸರ್ ಬಿಡುಗಡೆ
ಕಿಯಾ ಮೋಟಾರ್ಸ್ ಕಂಪನಿಯು ಮುಂದಿನ ತಿಂಗಳು ಅಗಸ್ಟ್ 7ರಂದು ತನ್ನ ಬಹುನೀರಿಕ್ಷಿತ ಸೊನೆಟ್ ಕಾರಿನ ಉತ್ಪಾದನಾ ಆವೃತ್ತಿಯನ್ನು ಜಾಗತಿಕ ಮಾರುಕಟ್ಟೆಗಾಗಿ ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಉತ್ಪಾದನಾ ಆವೃತ್ತಿಯ ಮೊದಲ ಟೀಸರ್ ಚಿತ್ರವನ್ನು ಬಿಡುಗಡೆ ಮಾಡಿದೆ.
ಹೊಚ್ಚ ಹೊಸ ಸೊನೆಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲೇ ಹಲವು ಹೊಸ ಫೀಚರ್ಸ್ಗಳನ್ನು ಪಡೆದುಕೊಂಡಿರಲಿದೆ. ಜೊತೆಗೆ ವಿಶೇಷ ವಿನ್ಯಾಸದೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲು ಸಜ್ಜುಗೊಂಡಿರುವ ಹೊಸ ಕಾರು ಸೆಲ್ಟೊಸ್ಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಬಿ ಸೆಗ್ಮೆಂಟ್ ಕಾರು ಮಾರಾಟದಲ್ಲಿ ಭಾರೀ ಸದ್ದು ಮಾಡಲಿದೆ.
ಸೊನೆಟ್ ಕಾನ್ಸೆಪ್ಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.
ಹೊಸ ಕಾರು ಬಿಎಸ್-6 ಎಂಜಿನ್ ಜೊತೆ ಹಲವು ಪ್ರೀಮಿಯಂ ಫೀಚರ್ಸ್ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.
ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ಬಹುಕೇಕ ಖಚಿತವಾಗಿದೆ.
ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್ರೂಫ್ ನೀಡಲಾಗಿದೆ.
ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್ಗಳಿರಲಿವೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಎಂಜಿನ್ ವೈಶಿಷ್ಟ್ಯತೆ
ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.
ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಿರಲಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಸೊನೆಟ್ ಕಾರಿನ ಬೆಲೆ(ಅಂದಾಜು)
ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.