ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಕಿಯಾ ಮೋಟಾರ್ಸ್ ಕಂಪನಿಯು ನಿನ್ನೆಯಷ್ಟೇ ತನ್ನ ಬಹುನೀರಿಕ್ಷಿತ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಸೊನೆಟ್ ಕಾರು ಮಾದರಿಯನ್ನು ಅನಾವರಣಗೊಳಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗುತ್ತಿರುವ ಕಿಯಾ ಸೊನೆಟ್ ಮಾದರಿಯು ಟಾಪ್ 10 ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿರುವ ಎಲ್ಲಾ ವೈಶಿಷ್ಟ್ಯತೆಗಳನ್ನು ಹೊಂದಿದೆ. ಕಿಯಾ ಮೋಟಾರ್ಸ್ ಸಹೋದರ ಸಂಸ್ಥೆಯಾಗಿರುವ ಹ್ಯುಂಡೈ ನಿರ್ಮಾಣದ ವೆನ್ಯೂ ಕಾರು ಆಧರಿಸಿರುವ ಸೊನೆಟ್ ಕಾರು ವೆನ್ಯೂ ಕಾರಿನೊಂದಿಗೆ ಚಾರ್ಸಿ ಮತ್ತು ಎಂಜಿನ್ ಹಂಚಿಕೊಂಡಿದ್ದು, ವಿನ್ಯಾಸ ಮತ್ತು ಪ್ರೀಮಿಯಂ ಸೌಲಭ್ಯಗಳ ವಿಚಾರದಲ್ಲಿ ಸೊನೆಟ್ ಕಾರು ವೆನ್ಯೂಗಿಂತಲೂ ಅಗ್ರಸ್ಥಾನದಲ್ಲಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರು ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ ಮಫ್ಲರ್ ಕೂಡಾ ಆಕರ್ಷಕವಾಗಿದ್ದು, ಮುಂಭಾಗದಲ್ಲಿ ಸ್ಕೀಡ್ ಪ್ಲೇಟ್, ಫ್ರಂಟ್ ಮತ್ತು ರಿಯರ್ ಬಂಪರ್, 16-ಇಂಚಿನ ಡ್ಯುಯಲ್ ಟೋನ್ ಅಯಾಲ್ ವೀಲ್ಹ್ ಮತ್ತು ಸ್ಕ್ವಾರಿಷ್ ಆರ್ಚ್ ನೀಡಲಾಗಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಡ್ಯುಯಲ್ ಟೋನ್ ಬ್ಲ್ಯಾಕ್ ಔಟ್ ರೂಫ್, ಸಿಲ್ವರ್ ರೈಲ್ಸ್, ಟರ್ಬೋ ಶೇಫ್ ಸ್ಕೀಡ್ ಪ್ಲೇಟ್, ಟೈಗರ್ ನೋಸ್ ಫ್ರಂಟ್ ಗ್ರಿಲ್, ತ್ರಿ ಡಿ ಡೈಮೆಷನ್ ಮೆಷ್ ಕೂಡಾ ಈ ಕಾರಿನಲ್ಲಿದ್ದು, ಇವು ಕಾರಿನ ಹೊರ ಭಾಗದ ನೋಟಕ್ಕೆ ಮತ್ತಷ್ಟು ಮೆರಗು ನೀಡುತ್ತವೆ. ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ.

ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದೆ. ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಲಿದ್ದು, ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಇನ್ನು ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿದ್ದು, ಹೊಸ ಕಾರು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೊಂದಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಎಂಜಿನ್ ಮತ್ತು ಫರ್ಪಾಮೆನ್ಸ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಸುರಕ್ಷಾ ಫೀಚರ್ಸ್‌ಗಳು

ಪ್ರೀಮಿಯಂ ಫೀಚರ್ಸ್ ಜೊತೆಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹೊಸ ಕಾರಿನಲ್ಲಿ ಆರು ಏರ್‌ಬ್ಯಾಗ್(ಟಾಪ್ ಎಂಡ್‌ನಲ್ಲಿ), ಎಬಿಎಸ್ ಜೊತೆ ಇಬಿಡಿ, ಟ್ರಾಕ್ಷನ್ ಕಂಟ್ರೋಲ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಹೆಚ್ಎಸಿ, ಇಎಸ್‌ಇ, ವಿಎಸ್ಎಂ, ಬ್ರೇಕ್ ಅಸಿಸ್ಟ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ISOFIX ಚೈಲ್ಡ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಟಾಪ್ ಎಂಡ್ ಮಾದರಿಯಲ್ಲಿ ಮಾತ್ರವೇ ಮುಂಭಾಗದ ಆಸನಗಳು ವೆಂಟೆಲೆಟೆಡ್ ತಂತ್ರಜ್ಞಾನ ಹೊಂದಿದ್ದು, ಕಾರಿನ ಮುಂಭಾಗ ಮತ್ತು ಹಿಂಭಾಗದ ಆಸದಲ್ಲಿ ಸೆಂಟರ್ ಆರ್ಮ್ ರೆಸ್ಟ್ ಫೀಚರ್ಸ್ ನೀಡಲಾಗಿದೆ.

ಅನಾವರಣಗೊಂಡ ನಂತರ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಸೊನೆಟ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11.50 ಲಕ್ಷ ಬೆಲೆ ಅಂತರದಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರ್ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Article Published On: Saturday, August 8, 2020, 16:53 [IST]
English summary
Kia Sonet Spotted For The First Time Post It's World Premiere. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+