Just In
- 5 hrs ago
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
- 6 hrs ago
ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್
- 7 hrs ago
ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ
- 9 hrs ago
ಒಂದೂವರೆ ವರ್ಷದಲ್ಲಿ ದಾಖಲೆ ಸಂಖ್ಯೆಯ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
Don't Miss!
- News
ದೆಹಲಿಯ ಕೆಂಪು ಕೋಟೆ ಮೇಲೆ ಹಾರಿದ್ದು ಸಿಖ್ಖರ ಧಾರ್ಮಿಕ ಧ್ವಜ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Sports
ಅಪರೂಪದ ಖಾಯಿಲೆಗೆ ಭಾರತದ ಮಾಜಿ ಗೋಲ್ ಕೀಪರ್ ಪ್ರಶಾಂತ ಬಲಿ
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೋಬೋಟ್ ಮೂಲಕ ಹೊಸ ಕಾರಿನ ವಿತರಣೆ ಪಡೆದು ಗಮನಸೆಳೆದ ಗ್ರಾಹಕ
ಆಧುನಿಕ ತಂತ್ರಜ್ಞಾನ ಯುಗದಲ್ಲಿ ರೋಬೋಟ್ಗಳು ಬಳಕೆಯಾಗದ ಕ್ಷೇತ್ರಗಳೇ ಇಲ್ಲ ಎನ್ನಬಹುದು. ವೈಜ್ಞಾನಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾರ್ವಜನಿಕ ಸೇವೆಗಳಲ್ಲೂ ರೋಬೋಟೊಗಳನ್ನು ಬಳಕೆ ಮಾಡಲಾಗುತ್ತಿದ್ದು, ಇತ್ತೀಚೆಗೆ ಗ್ರಾಹಕರೊಬ್ಬರು ಕಾರು ವಿತರಣೆ ಪಡೆದುಕೊಳ್ಳಲು ರೊಬೊಟ್ ಬಳಕೆ ಮಾಡಿ ಗಮನಸೆಳೆದಿದ್ದಾರೆ.

ಕಿಯಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಬಿಡುಗಡೆ ಮಾಡಿದ ಸೊನೆಟ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದ್ದು, ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಕಂಪ್ಯಾಕ್ಟ್ ಎಸ್ಯವಿ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದೆ. ದೇಶದ ಪ್ರಮುಖ ರಾಜ್ಯಗಳಲ್ಲಿ ಸೊನೆಟ್ ಕಾರು ಖರೀದಿಗಾಗಿ ಇದುವರೆಗೆ ಸುಮಾರು 70 ಸಾವಿರಕ್ಕೂ ಅಧಿಕ ಬುಕ್ಕಿಂಗ್ ದಾಖಲಾಗಿದ್ದು, ಪ್ರಮುಖ ಕಿಯಾ ಶೋರೂಂಗಳಲ್ಲಿ ಸೊನೆಟ್ ವಿತರಣೆಯು ಸಿಕ್ಕಾಪಟ್ಟೆ ಜೋರಾಗಿದೆ.

ಸೊನೆಟ್ ವಿತರಣೆ ವೇಳೆ ಹಲವು ಕಡೆಗಳಲ್ಲಿ ವಿಭಿನ್ನ ಪರಿಕಲ್ಪನೆಗಳಲ್ಲಿ ಹೊಸ ಕಾರನ್ನು ಗ್ರಾಹಕರಿಗೆ ಹಸ್ತಾಂತರ ಮಾಡಲಾಗುತ್ತಿದ್ದು, ಕೇರಳದಲ್ಲಿ ಗ್ರಾಹಕರೊಬ್ಬರು ರೋಬೋಟ್ ಮೂಲಕ ಕಾರಿನ ವಿತರಣೆ ಪಡೆದುಕೊಂಡು ಗಮನಸೆಳೆದಿದ್ದಾರೆ.

ಕರೋನಾ ವೈರಸ್ ಹರಡುವಿಕೆಯನ್ನು ತಪ್ಪಿಸಲು ಸಾಮಾಜಿಕ ಅಂತರವು ಪ್ರಮುಖ ಮುಂಜಾಗ್ರತ ಕ್ರಮವಾಗಿದ್ದು, ಸಾರ್ವಜನಿಕರೊಂದಿಗೆ ವ್ಯವಹರಿಸುವಾಗ ಗರಿಷ್ಠ ಸುರಕ್ಷತೆ ಖಾತ್ರಿಪಡಿಸಲು ಯಂತ್ರ ಮಾನವರ ಬಳಕೆಯು ಹೊಸ ಪರಿಹಾರವಾಗುವುದರಲ್ಲಿ ಎರಡು ಮಾತಿಲ್ಲ.

ಗಣಕ ಕ್ರಮವಿಧಿ ಅಥವಾ ವಿದ್ಯುನ್ಮಂಡಲದ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವ ರೋಬೋಟ್ಗಳು ಸಾರ್ವಜನಿಕರೊಂದಿಗೆ ವ್ಯವಹರಿಸುವಾಗ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಪ್ರಮುಖ ಸಾಧನವಾಗಲಿದೆ ಎಂಬುವುದನ್ನು ಪ್ರದರ್ಶಿಸಲು ಕಾರು ವಿತರಣೆಗಾಗಿ ಬಳಕೆ ಮಾಡಲಾಗಿದೆ. ಸಯಾಬೊಟ್ ಹೆಸರಿನಿಂದ ಕರೆಯಲ್ಪಡುವ ಈ ರೋಬೋಟ್ ಗ್ರಾಹಕ ಜಯಕೃಷ್ಣನ್ ಪರವಾಗಿ ಕಾರಿನ ವಿತರಣೆಯನ್ನು ಪಡೆದುಕೊಂಡಿದೆ.

ಕಿಯಾ ಸೊನೆಟ್ ಕಾರು ಖರೀದಿಸಿದ ಗ್ರಾಹಕ ಜಯಕೃಷ್ಣನ್ ಅವರು ಕೇರಳದ ಕೊಚ್ಚಿ ಮೂಲದ ಅಸಿಮೊವ್ ರೊಬೊಟಿಕ್ಸ್ ಕಂಪನಿಯಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಾವೇ ಅಭಿವೃದ್ದಿಪಡಿಸಿದ ಸಯಾಬೊಟ್ ಮೂಲಕ ಅತಿಕಡಿಮೆ ಮಾನವ ಸಂಪರ್ಕದೊಂದಿಗೆ ಹೊಸ ಕಾರಿನ ಕೀ ಪಡೆದುಕೊಂಡಿದ್ದಾರೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ರೋಬೋಟ್ ಮೂಲಕ ಕಾರಿನ ವಿತರಣೆ ಪಡೆದುಕೊಂಡಿರುವ ಸುದ್ದಿ ಇದೀಗ ದೇಶ ವಿದೇಶಿಗಳಲ್ಲೂ ಸಾಕಷ್ಟು ಸುದ್ದಿಯಾಗುತ್ತಿದ್ದು, ಭವಿಷ್ಯದಲ್ಲಿ ರೋಬೋಟ್ಗಳನ್ನು ಇನ್ನು ಹೇಗೆಲ್ಲಾ ಬಳಕೆ ಮಾಡಿಕೊಳ್ಳಲಿದ್ದಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ.
ಇನ್ನು ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ನೊಂದಿಗೆ ಆಕರ್ಷಕ ಬೆಲೆ ಪಡೆದುಕೊಂಡಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್ಗಳಲ್ಲಿ ಖರೀದಿ ಮಾಡಬಹುದಾಗಿದೆ.